ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣವಾದ ಪ್ರಮಾದಗಳು ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮರುಕಳಿಸಬಾರದು. ಕ್ಷೇತ್ರದಲ್ಲಿರುವ ಪ್ರತಿಯೊಬ್ಬ ಮತದಾರರ ವಿಶ್ವಾಸವನ್ನು ಗಳಿಸುವ ಮೂಲಕ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಮನವಿ ಮಾಡಿದರು. ಯುವಕರಿಗೆ ಪಕ್ಷದ ಸಂಘಟನೆಯಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ಅಗತ್ಯವಿದೆ. ಬೂತ್, ಹೋಬಳಿ ಹಾಗೂ ತಾಲೂಕು ಮಟ್ಟದಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿ, ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲಾಗುವುದು. ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಲು ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಸಕಲೇಶಪುರಹಿಂದಿನ ಸೋಲಿನಿಂದ ಪಾಠ ಕಲಿತು ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಮೂಲಕ ಜಿ.ಪಂ., ತಾ.ಪಂ. ಸಂಸ್ಥೆಗಳ ಎಲ್ಲ ಕ್ಷೇತ್ರಗಳಲ್ಲೂ ಗೆಲುವು ಸಾಧಿಸಲು ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ಮಾಜಿ ಸಚಿವ ಎಚ್. ಕೆ. ಕುಮಾರಸ್ವಾಮಿ ಹೇಳಿದರು.ತಾಲೂಕಿನ ಹೆತ್ತೂರು ಹೋಬಳಿಯಲ್ಲಿ ನಡೆದ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಸಂಘಟನಾತ್ಮಕವಾಗಿ ಕೆಲಸ ಮಾಡಬೇಕು. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಗೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ಕಾರಣವಾದ ಪ್ರಮಾದಗಳು ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮರುಕಳಿಸಬಾರದು. ಕ್ಷೇತ್ರದಲ್ಲಿರುವ ಪ್ರತಿಯೊಬ್ಬ ಮತದಾರರ ವಿಶ್ವಾಸವನ್ನು ಗಳಿಸುವ ಮೂಲಕ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದು ಮನವಿ ಮಾಡಿದರು. ಯುವಕರಿಗೆ ಪಕ್ಷದ ಸಂಘಟನೆಯಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ಅಗತ್ಯವಿದೆ. ಬೂತ್, ಹೋಬಳಿ ಹಾಗೂ ತಾಲೂಕು ಮಟ್ಟದಲ್ಲಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಿ, ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲಾಗುವುದು. ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಜೆಡಿಎಸ್ ಗೆಲುವು ಸಾಧಿಸಲು ಸಾಧ್ಯ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಅಧ್ಯಕ್ಷ ನಟರಾಜ್, ತಾಲೂಕು ಅಧ್ಯಕ್ಷ ಸ್ವಾಮಿಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುಪ್ರದೀಪ್ ಯಜಮಾನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಚಂಚಲ ಕುಮಾರಸ್ವಾಮಿ, ಉಜ್ಮಾ ರಿಜ್ವಿ ಸುದರ್ಶನ್, ಸಚಿನ್ ಪ್ರಸಾದ್, ಬೆಕ್ಕನಹಳ್ಳಿ ನಾಗರಾಜ್, ನಾಗಭೂಷಣ್, ರಮೇಶ್ ಕರಗೂರು, ಜಾತಹಳ್ಳಿ ಪುಟ್ಟಸ್ವಾಮಿಗೌಡ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.