ಸಾರಾಂಶ
ವ್ಯೆದ್ಯಕೀಯ ಶಿಕ್ಷಣಕ್ಕಾಗಿ ಕೇಂದ್ರ ಸರ್ಕಾರ ನಡೆಸಿದ ೨೦೨೪ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ವಿ.ಜಿ. ಅವರು ೭೨೦ಕ್ಕೆ ೬೫೧ ಅಂಕಗಳೊಂದಿಗೆ ಅಖಿಲ ಭಾರತ ಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ ೬೦೪ನೇ ರಾಂಕ್ ಗಳಿಸಿದ್ದಾರೆ. ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನಿಯಾದ ಅವರನ್ನು ಕಾಲೇಜಿನಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಕನ್ನಡಪ್ರಭ ವಾರ್ತೆ ಪುತ್ತೂರು
ವ್ಯೆದ್ಯಕೀಯ ಶಿಕ್ಷಣಕ್ಕಾಗಿ ಕೇಂದ್ರ ಸರ್ಕಾರ ನಡೆಸಿದ ೨೦೨೪ರ ನೀಟ್ ಪ್ರವೇಶ ಪರೀಕ್ಷೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯುಕ್ತಾ ವಿ.ಜಿ. ಅವರು ೭೨೦ಕ್ಕೆ ೬೫೧ ಅಂಕಗಳೊಂದಿಗೆ ಅಖಿಲ ಭಾರತ ಮಟ್ಟದಲ್ಲಿ ಕೆಟಗರಿ ವಿಭಾಗದಲ್ಲಿ ೬೦೪ನೇ ರಾಂಕ್ ಗಳಿಸಿದ್ದಾರೆ. ಪುತ್ತೂರು ತಾಲೂಕಿಗೆ ಪ್ರಥಮ ಸ್ಥಾನಿಯಾದ ಅವರನ್ನು ಕಾಲೇಜಿನಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ರಾಮಕುಂಜದ ವಿಜಯ ವಿಕ್ರಮ ಜಿ. ಹಾಗೂ ಸುನಿತಾ ಎಂ.ಕೆ. ದಂಪತಿ ಪುತ್ರಿ.ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಕಾಲೇಜಿನ ಅತ್ಯುತ್ತಮ ಫಲಿತಾಂಶಕ್ಕೆ ಕಾರಣರಾದ ಉಪನ್ಯಾಸಕರನ್ನು ಹಾಗೂ ತರಬೇತಿ ಸಂಯೋಜಕರನ್ನು ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿ, ಆಕ್ಸೆನ್ಚೆರ್ ಬಹುರಾಷ್ಟ್ರೀಯ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕ ಪುರುಷೋತ್ತಮ ಕಡಂಬು, ಮತ್ತೋರ್ವ ಹಿರಿಯ ವಿದ್ಯಾರ್ಥಿ ಕೇರಳ ಪೊಲೀಸ್ ಇಲಾಖೆಯ ನಿವೃತ್ತ ಡಿ.ವೈ.ಎಸ್.ಪಿ. ಶ್ರೀರಾಮ ತಲೆಂಗಳ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ., ವಿವೇಕಾನಂದ ಪದವಿ ಕಾಲೇಜಿನ ಸಂಚಾಲಕ ಮುರಳಿಕೃಷ್ಣ, ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ದೇವಿಚರಣ್ ರೈ ಮತ್ತಿತರರು ಉಪಸ್ಥಿತರಿದ್ದರು. ಶ್ರೀವತ್ಸ ಕಾರ್ಯಕ್ರಮ ನಿರ್ವಹಿಸಿದರು.