ನೀಟ್‌ ಅಕ್ರಮ: ಕೇಂದ್ರ ಶಿಕ್ಷಣ ಸಚಿವರ ವಜಾಕ್ಕೆ ಆಗ್ರಹ

| Published : Jun 28 2024, 12:55 AM IST

ನೀಟ್‌ ಅಕ್ರಮ: ಕೇಂದ್ರ ಶಿಕ್ಷಣ ಸಚಿವರ ವಜಾಕ್ಕೆ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ನೀಟ್ ಪರೀಕ್ಷೆ ನಡೆಸುವ ಅಧಿಕಾರ ಆಯಾ ರಾಜ್ಯಗಳ ಸರ್ಕಾರಕ್ಕೆ ಜವಾಬ್ದಾರಿ ನೀಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮಸ್ಕಿ ತಾಲೂಕು ಘಟಕದ ಪದಾಧಿಕಾರಿಗಳು ಒತ್ತಾಯಿಸಿದರು.

ಮಸ್ಕಿ: ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿ ಕಾಪಾಡುವಲ್ಲಿ ಕೇಂದ್ರ ಶಿಕ್ಷಣ ಸಚಿವರು ವಿಫಲರಾಗಿದ್ದಾರೆ. ಆದ್ದರಿಂದ ಕೂಡಲೇ ಅವರನ್ನು ವಜಾ ಮಾಡಿ ನೀಟ್ ಪರೀಕ್ಷೆ ನಡೆಸುವ ಅಧಿಕಾರ ಆಯಾ ರಾಜ್ಯಗಳ ಸರ್ಕಾರಕ್ಕೆ ಜವಾಬ್ದಾರಿ ನೀಡಬೇಕು ಎಂದು ದಲಿತ ವಿದ್ಯಾರ್ಥಿ ಪರಿಷತ್ ಮಸ್ಕಿ ತಾಲೂಕು ಘಟಕದ ಪದಾಧಿಕಾರಿಗಳು ಒತ್ತಾಯಿಸಿದರು.

ಪಟ್ಟಣದ ಬಸವೇಶ್ವರ ನಗರದ ತಹಸೀಲ್ದಾರ್ ಕಚೇರಿಯ ಎದುರು ಪ್ರತಿಭಟನೆ ನಡೆಸಿ, ರಾಷ್ಟ್ರತಿಗಳಿಗೆ ಬರೆದ ಮನವಿ ಪತ್ರವನ್ನು ಕಂದಾಯ ಅಧಿಕಾರಿಗಳಿಗೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ಸಂಘಟನೆ ಜಿಲ್ಲಾ ಸಂಚಾಲಕ ಮೌನೇಶ ಜಾಲವಾಡಗಿ, ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿರುವ ನೀಟ್ ಪರೀಕ್ಷೆಯಲ್ಲಿ ಗೋಲ್ಮಾಲ್ ನಡೆದಿದ್ದು, ನಂತರ ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆಯುತ್ತಿದೆ ಎಂದು ಪರೀಕ್ಷೆ ರದ್ದು ಪಡಿಸಲಾಗಿದೆ. ಇದರಿಂದಾಗಿ ಉನ್ನತ ಶಿಕ್ಷಣದ ಕನಸು ಕಾಣುತ್ತಿರುವ ವಿದ್ಯಾರ್ಥಿಗಳ ಭವಿಷ್ಯತ್ತು ಅತಂತ್ರಕ್ಕೆ ಸಿಲುಕಿದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಎರಡು ಪರೀಕ್ಷೆಯಲ್ಲಿ ನಡೆದ ಅಕ್ರಮದ ಸಂಪೂರ್ಣ ತನಿಖೆ ಆಗಬೇಕು, ತಪ್ಪಿತಸ್ಥರಿಗೆ ಕಠಿಣ ಕ್ರಮ ಕೈಗೊಳ್ಳಬೇಕು. ಪರೀಕ್ಷೆ ನಡೆಸಲು ವಿಫಲಗೊಂಡಿರುವ ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆ ಸಚಿವರಿಗೆ ಮತ್ತು ಇಲಾಖೆಗಳ ಅಧಿಕಾರಿಗಳಿಗೆ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪರಿಷತ್ ಮುಖಂಡರಾದ, ಹುಸೇನಪ್ಪ ಇರಕಲ್, ಚನ್ನಬಸವ ಯಾಪಲಪರ್ವಿ, ರಶೀದ್ ಬನ್ನಿಗನೂರು, ರಮೇಶ ನಂಜಲದಿನ್ನಿ, ಮಹೇಂದ್ರ ತುಗ್ಗಲದಿನ್ನಿ, ಹುಚ್ಚಪ್ಪ ಬಸಾಪುರ, ಶರಣಪ್ಪ ನಂಜಲದಿನ್ನಿ,ಅಂಬರೀಶ ಭೋವಿ, ವಿದ್ಯಾರ್ಥಿಗಳು, ಯುವ ಜನರು ಭಾಗವಹಿಸಿದ್ದರು.26-ಎಂಎಸ್ಕೆ-02ಮಸ್ಕಿಯಲ್ಲಿ ಡಿವಿಪಿ ಸಂಘಟನೆಯಿಂದ ಕೇಂದ್ರ ಶಿಕ್ಷಣ ಸಚಿವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಲಾಯಿತು.