ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ವಿದ್ಯಾರ್ಥಿನಿ ಕೆ.ಜಿ. ನಿಧಿ ಅವರನ್ನು ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಗೌರವಿಸಿದರು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ರಾಷ್ಟ್ರೀಯ ಅರ್ಹತಾ ಮತ್ತು ನೀಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 84ನೇ ರ್‍ಯಾಂಕ್‌ ಹಾಗೂ ಕರ್ನಾಟಕ ರಾಜ್ಯಕ್ಕೆ 7ನೇ ರ್‍ಯಾಂಕ್‌ ಪಡೆದು ಸಾಧನೆ ಮಾಡಿದ ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ವಿದ್ಯಾರ್ಥಿನಿ ಕೆ. ಜಿ ನಿಧಿ ಅವರನ್ನು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರ ನಿವಾಸಕ್ಕೆ ಭೇಟಿ ಮಾ ಗೌರವಿಸಿದರು.

ನಿಧಿ ಪೋಷಕರಾದ ಮಡಿಕೇರಿಯ ಪೊಲೀಸ್ ಇಲಾಖೆಯ ಡಿಎಆರ್ ನಲ್ಲಿ ಎಎಸ್ಐ ಆಗಿರುವ ಕೆ.ಎಚ್. ಗಣಪತಿ, ಜಕ್ಕನಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿ ಗುಣವತಿ, ಚೌಡ್ಲು ಗ್ರಾಮ ಪಂಚಾಯಿತಿ ಸದಸ್ಯ ಎಸ್ ಐ ಚೇತನ್, ಸೋಮವಾರಪೇಟೆ ಯುವ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಡಿ ಯು ಇದ್ದರು.