ವಿಜಯಪುರ: ನಗರದ ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆಯು ಇಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.
ವಿಜಯಪುರ: ನಗರದ ಒಟ್ಟು 17 ಪರೀಕ್ಷಾ ಕೇಂದ್ರಗಳಲ್ಲಿ ನೀಟ್ ಪರೀಕ್ಷೆಯು ಇಂದು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ.ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ 200 ಮೀ. ವ್ಯಾಪ್ತಿಯಯಲ್ಲಿನ ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಮತ್ತು ಕೋಚಿಂಗ್ ಕೇಂದ್ರಗಳು ಬೆಳಗ್ಗೆ 9.30ರಿಂದ ಪರೀಕ್ಷೆ ಮುಕ್ತಾಯವಾಗುವ ವರೆಗೆ ತೆರೆಯದಂತೆ ಆದೇಶಿಸಲಾಗಿದೆ. ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರರು ಮೊಬೈಲ್ ತರುವುದನ್ನು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.