ನೀಟ್ ಅವ್ಯವಹಾರ ಆರೋಪ: ಮಡಿಕೇರಿಯಲ್ಲಿ ಪ್ರತಿಭಟನೆ

| Published : Jun 22 2024, 12:49 AM IST

ನೀಟ್ ಅವ್ಯವಹಾರ ಆರೋಪ: ಮಡಿಕೇರಿಯಲ್ಲಿ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಮರು ಪರೀಕ್ಷೆಯಾಗಬೇಕು ಎಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಮಡಿಕೇರಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಿಂದ ಮೆರವಣಿಗೆ ಮೂಲಕ ಪ್ರತಿಭಟನಾಕಾರರು ಸಾಗಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಮರು ಪರೀಕ್ಷೆಯಾಗಬೇಕು ಎಂದು ಒತ್ತಾಯಿಸಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಮಡಿಕೇರಿ ನಗರದಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾಗಾಂಧಿ ವೃತ್ತದಿಂದ ಮೆರವಣಿಗೆ ಮೂಲಕ ಸಾಗಿದ ಒಕ್ಕೂಟದ ಪ್ರಮುಖರು ಹಾಗೂ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಜಮಾಯಿಸಿ ಬೇಡಿಕೆಯ ಈಡೇರಿಕೆಗಾಗಿ ಘೋಷಣೆಗಳನ್ನು ಕೂಗಿ, ಮರು ಪರೀಕ್ಷೆ ನಡೆಸುವಂತೆ ಒತ್ತಾಯಿಸಿದರು.

ಈ ಸಂದರ್ಭ ಮಾತನಾಡಿದ ಒಕ್ಕೂಟದ ಜಿಲ್ಲಾಧ್ಯಕ್ಷ ಪಿ.ಎಂ.ಅಬ್ದುಲ್ ರಾಶೀದ್, ನೀಟ್ ಪರೀಕ್ಷೆಯ ಫಲಿತಾಂಶ ವಿವಾದಗಳಿಂದ ಕೂಡಿದ್ದು, ಬಾರಿ ಅಕ್ರಮ ನಡೆದಿರುವ ಸಾಧ್ಯತೆ ಇದೆ. ನೀಟ್ ಪರೀಕ್ಷೆಯ ಪಶ್ನೆ ಪತ್ರಿಕೆ ಸೋರಿಕೆ ಹಾಗೂ ವಿವಾದಾತ್ಮಾಕ ಫಲಿತಾಂಶದ ಕಾರಣದಿಂದ ದೇಶದ ಲಕ್ಷಾಂತರ ವೈದ್ಯಕೀಯ ಸೀಟ್ ಆಕಾಂಕ್ಷಿಗಳಿಗೆ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.

ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದ್ದರು ಕೇಂದ್ರ ಸರ್ಕಾರ ಮಾತನಾಡುತ್ತಿಲ್ಲ ಎಂದು ಟೀಕಿಸಿದರು.

ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ ಸರಿಪಡಿಸಲು ಕೇಂದ್ರ ಸರ್ಕಾರವು ನೀಟ್ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು ಮತ್ತು ಈಗ ನಡೆದಿರುವ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸಬೇಕೆಂದು ಒತ್ತಾಯಿಸಿದರು.

ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಂ.ಪ್ರತಾಪ್ ಮಾತನಾಡಿ, ನೀಟ್‌ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಶಂಕೆ ಇದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕು ಮತ್ತು ಮರು ಪರೀಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಬಳಿಕ ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗೆ ಕಳುಹಿಲಾಯಿತು. ಎನ್‌ಎಸ್‌ಯುಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ಎಂ.ಪ್ರತಾಪ್, ಮೊಹಮ್ಮದ್ ಮಿದಲಾಜೆ, ಮಡಿಕೇರಿ ಬ್ಲಾಕ್ ಅಧ್ಯಕ್ಷ ಕೆ.ಶರಣ್, ಉಪಾಧ್ಯಕ್ಷ ಎಂ.ಜಗನ್, ಮಡಿಕೇರಿ ನಗರಾಧ್ಯಕ್ಷ ಅರ್ಜುನ್ ಸೇರಿದಂತೆ ಕಾರ್ಯಕರ್ತರು, ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.