ರಸ್ತೆ ನಿಯಮ ಪಾಲನೆ ನಿರ್ಲಕ್ಷ್ಯವೇ ಅಪಘಾತಗಳಿಗೆ ಕಾರಣ: ಡಾ.ಕುಮಾರ್‌

| Published : Dec 30 2023, 01:15 AM IST

ರಸ್ತೆ ನಿಯಮ ಪಾಲನೆ ನಿರ್ಲಕ್ಷ್ಯವೇ ಅಪಘಾತಗಳಿಗೆ ಕಾರಣ: ಡಾ.ಕುಮಾರ್‌
Share this Article
  • FB
  • TW
  • Linkdin
  • Email

ಸಾರಾಂಶ

ರಸ್ತೆ ಅಪಘಾತದಲ್ಲಿ ಪ್ರತಿವರ್ಷ ಲಕ್ಷಾಂತರ ಜನರು ಸಾವನ್ನಪ್ಪುತ್ತಿದ್ದಾರೆ ಎಂದು ಇತ್ತೀಚಿನ ಅಂಕಿಅಂಶಗಳು ತಿಳಿಸಿರುವುದು ಆತಂಕಕಾರಿ ವಿಚಾರ. ಅಪಘಾತಗಳಿಗೆ ಮುಖ್ಯ ಕಾರಣ ಸಂಚಾರಿ ನಿಯಮಗಳನ್ನು ಸರಿಯಾಗಿ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಎಂಬುದರಲ್ಲಿ ಎರಡು ಮಾತಿಲ್ಲ ಎಂದು ವಿಪತ್ತು ನಿರ್ವಹಣಾ ರಾಷ್ಟ್ರೀಯ ತರಬೇತುದಾರ ಡಾ. ವಿ.ಎಲ್.ಎಸ್. ಕುಮಾರ್ ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಶಿವಮೊಗ್ಗ: ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ರಸ್ತೆ ಅಪಘಾತದಲ್ಲಿ ಪ್ರತಿವರ್ಷ ಲಕ್ಷಾಂತರ ಜನರು ಸಾವನ್ನಪ್ಪುತ್ತಿದ್ದು, ಮೂಲಕಾರಣ ರಸ್ತೆ ನಿಯಮಗಳನ್ನು ಸರಿಯಾಗಿ ಪಾಲನೆ ಮಾಡದೇ ಇರುವುದಾಗಿದೆ ಎಂದು ವಿಪತ್ತು ನಿರ್ವಹಣಾ ರಾಷ್ಟ್ರೀಯ ತರಬೇತುದಾರ ಡಾ. ವಿ.ಎಲ್.ಎಸ್. ಕುಮಾರ್ ಹೇಳಿದರು.

ನಗರದ ರಾಜೇಂದ್ರ ನಗರದ ರೋಟರಿ ಪೂರ್ವ ಶಾಲೆಯ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಇಂಟರಾಕ್ಟ್ ಕ್ಲಬ್ ವತಿಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತೆ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಸ್ತೆ ಅಪಘಾತದಲ್ಲಿ ಯುವಜನತೆ ಹೆಚ್ಚು ಸಾವನ್ನಪ್ಪುತ್ತಿದ್ದು, ವ್ಹೀಲಿಂಗ್, ಬೈಕ್ ಅತಿಯಾದ ವೇಗದಲ್ಲಿ ಓಡಿಸುವುದರಿಂದ ಅಪಘಾತ ಸಂಭವಿಸುತ್ತಿವೆ. ತ್ರಿಬಲ್ ರೈಡಿಂಗ್, ವಾಹನ ಚಾಲನಾ ಪರವಾನಗಿ ಇಲ್ಲದೇ ಗಾಡಿ ಓಡಿಸುವುದರಿಂದ ಅಪಘಾತಗಳು ಹೆಚ್ಚಾಗುತ್ತಿವೆ ಎಂದು ಅಭಿಪ್ರಾಯಪಟ್ಟರು.

ರೋಟರಿ ಶಿವಮೊಗ್ಗ ಪೂರ್ವ ಉಪಾಧ್ಯಕ್ಷ ಜಿ.ವಿಜಯ್‌ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ರಸ್ತೆ ನಿಯಮಗಳನ್ನು ಪಾಲಿಸಿ ವಾಹನ ಚಲಾಯಿಸಬೇಕು. ಸುರಕ್ಷತಾ ಫಲಕಗಳನ್ನು ಗಮನಿಸಿ ಸೂಚನೆ ಅನುಸಾರ ಚಾಲನೆ ಮಾಡಬೇಕು. ವೇಗದ ಮಿತಿ ಇರಬೇಕು. ಚಾಲನಾ ಪರವಾನಗಿ ಇಲ್ಲದೇ ವಾಹನ ಚಲಾಯಿಸಬಾರದು ಎಂದರು.

ರೋಟರಿ ಮ್ಯಾನೇಜಿಂಗ್ ಟ್ರಸ್ಟಿ ಚಂದ್ರಶೇಖರಯ್ಯ, ಟ್ರಸ್ಟ್ ಉಪಾಧ್ಯಕ್ಷ ಡಾ.ಪರಮೇಶ್ವರ್ ಶಿಗ್ಗಾವಿ ಮಾತನಾಡಿ, ರಸ್ತೆ ನಿಯಮಗಳನ್ನು ಪಾಲಿಸುವಂತೆ ಪೋಷಕರಿಗೆ ವಿದ್ಯಾರ್ಥಿಗಳು ತಿಳಿವಳಿಕೆ ಮೂಡಿಸುವಂತೆ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಯಿತು. ಕುಮಾರ್ ಅವರನ್ನು ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸನ್ಮಾನಿಸಲಾಯಿತು. ರೋಟರಿ ಶಿವಮೊಗ್ಗ ಪೂರ್ವ ಕಾರ್ಯದರ್ಶಿ ಕಿಶೋರ್ ಕುಮಾರ್, ಉಪಪ್ರಾಚಾರ್ಯ ನರಸಿಂಹಯ್ಯ, ಪ್ರಶಾಂತ್, ದಿವ್ಯಾ, ರುಕ್ಕಯ್ಯ, ಇಂಟರಾಕ್ಟ್ ಕ್ಲಬ್ ಅಧ್ಯಕ್ಷ ಹರ್ಷಿತ, ಕಾರ್ಯದರ್ಶಿ ಗಾನವಿ ಮತ್ತಿತರರು ಉಪಸ್ಥಿತರಿದ್ದರು.

- - - -28ಎಸ್‌ಎಂಜಿಕೆಪಿ01:

ಕಾರ್ಯಕ್ರಮವನ್ನು ತರಬೇತುದಾರ ಡಾ. ವಿ.ಎಲ್.ಎಸ್. ಕುಮಾರ್‌ ಉದ್ಘಾಟಿಸಿದರು.