ಸಾರಾಂಶ
ಕಾಲೇಜು ಕ್ಯಾಂಪಸ್‌ಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ನೇಹಾಳ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ.
ಕನ್ನಡಪ್ರಭ ವಾರ್ತೆ ಹೂವಿನಹಡಗಲಿ
ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಮಾಡಿರುವ ಆರೋಪಿ ಫಯಾಜ್‌ಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಇಲ್ಲಿನ ರವಿಕಿರಣ ಸೃಜನಶೀಲ ವಿಕಲಚೇತನರ ಸಂಘ ತಹಸೀಲ್ದಾರ್‌ಗೆ ಮನವಿ ಪತ್ರ ನೀಡಿದ್ದಾರೆ.ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಡಿ.ಪರಶುರಾಮಪ್ಪ, ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಅಭ್ಯಾಸ ಮಾಡುತ್ತಿದ್ದ, ನಿರಂಜನಯ್ಯ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ, ಏ.18ರಂದು ತರಗತಿ ಮುಗಿಸಿಕೊಂಡು ಹೊರಗೆ ಬರುವ ಸಂದರ್ಭದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಫಯಾಜ್‌ಗೆ ಗಲ್ಲು ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಕಾಲೇಜು ಕ್ಯಾಂಪಸ್‌ಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ನೇಹಾಳ ಕುಟುಂಬಕ್ಕೆ ನ್ಯಾಯ ಸಿಗಬೇಕಿದೆ. ಕಾಲೇಜುಗಳಲ್ಲಿ ಭದ್ರತೆ ವ್ಯವಸ್ಥೆಯನ್ನು ಮಾಡಬೇಕಿದೆ. ವಿದ್ಯಾರ್ಥಿನಿಯರ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.ಕಂಠಿ ವೀರಣ್ಣ, ಗ್ರಾಪಂ ಸದಸ್ಯೆ ಹಕ್ಕಂಡಿ ಸುಜಾತ, ನಾಗರಾಜ, ದಡಾರಪ್ಪ ಸೇರಿದಂತೆ ಇತರರು ಕಂದಾಯ ನಿರೀಕ್ಷರಾದ ಶ್ವೇತಾ ಹಿರೇಮಠ ಇವರಿಗೆ ಮನವಿ ಪತ್ರ ಸಲ್ಲಿಸಿದರು.