2024ರ ಏ. 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿಯೇ ಫಯಾಜ್ ನೇಹಾಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ. ಆತನನ್ನು ಬಂಧಿಸಿದ್ದ ವಿದ್ಯಾನಗರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಧಾರವಾಡ:
ದೇಶಾದ್ಯಂತ ಸಂಚಲನ ಮೂಡಿಸಿದ್ದ ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ನಲ್ಲಿ ಜಾಮೀನು ಕೇಳಿದ್ದ ಆರೋಪಿ ಫಯಾಜ್‌ಗೆ ಮತ್ತೊಮ್ಮೆ ಹಿನ್ನಡೆಯಾಗಿದೆ.ಈಗಾಗಲೇ ಎರಡು ಬಾರಿ ಆರೋಪಿ ಫಯಾಜ್ ತನಗೆ ಜಾಮೀನು ಮಂಜೂರು ಮಾಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ. ನ್ಯಾಯಾಲಯ ವಿಚಾರಣೆ ನಡೆಸಿ ಅರ್ಜಿ ತಿರಸ್ಕರಿಸಿತ್ತು. ಇದೀಗ 3ನೇ ಬಾರಿಯೂ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಪೀಠವು ತಿರಸ್ಕರಿಸಿದೆ.
ಆರೋಪಿ ಫಯಾಜ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದ್ದು ನ್ಯಾಯಕ್ಕೆ ಸಂದ ಜಯ. ಈ ವಿಷಯದಲ್ಲಿ ಸಂಪೂರ್ಣವಾಗಿ ನ್ಯಾಯಾಂಗ ಬಗ್ಗೆ ವಿಶ್ವಾಸವಿದೆ. ಆರೋಪಿ ನ್ಯಾಯಾಲಯದ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದು, ಇದರಿಂದಾಗಿ ವಿಚಾರಣೆಯಲ್ಲಿ ತುಸು ವಿಳಂಬವಾಗುತ್ತಿದೆ. ಇಷ್ಟಾಗಿಯೂ ನ್ಯಾಯ ನಮ್ಮ ಪರವಾಗಿ ಬರಲಿದೆ ಎಂಬ ವಿಶ್ವಾಸವಿದೆ ಎಂದು ನೇಹ ಕುಟುಂಬದ ಪರ ನ್ಯಾಯವಾದಿ ರಾಘವೇಂದ್ರ ಮುತ್ತಗಿಕರ ಮಾಧ್ಯಮಗಳಿಗೆ ತಿಳಿಸಿದರು.2024ರ ಏ. 18ರಂದು ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿಯೇ ಫಯಾಜ್ ನೇಹಾಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ. ಆತನನ್ನು ಬಂಧಿಸಿದ್ದ ವಿದ್ಯಾನಗರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕಳೆದ ಆಗಸ್ಟ್ ತಿಂಗಳಲ್ಲಿ ಹುಬ್ಬಳ್ಳಿಯ ಒಂದನೇ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಆರೋಪಿ ಫಯಾಜ್ ಜಾಮೀನು ಅರ್ಜಿ ಸಲ್ಲಿಸಿದ್ದನು. ಆದರೆ, ನ್ಯಾಯಾಲಯ ಅರ್ಜಿ ತಿರಸ್ಕರಿಸಿತ್ತು. ನಂತರ ಹೈಕೋರ್ಟ್ ಮೆಟ್ಟಿಲೇರಿದ್ದು ಅಲ್ಲಿಯೂ ಎರಡು ಬಾರಿ ಜಾಮೀನು ತಿರಸ್ಕಾರವಾಗಿದ್ದು, ಫಯಾಜಗೆ ಮತ್ತೆ ಜೈಲೆ ಗತಿಯಾಗಿದೆ.