ಸಾರಾಂಶ
- ಜವಾಹರ್ ಬಾಲ್ ಮಂಚ್ ಕಾರ್ಯಕ್ರಮದಲ್ಲಿ ದಿನೇಶ್ ಶೆಟ್ಟಿ - - - ದಾವಣಗೆರೆ: ದೇಶದ ಪ್ರಥಮ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಬೇಕು ಎಂಬುದು ನೆಹರು ಅವರ ಆಸೆಯಾಗಿತ್ತು. ಅದರಂತೆ ಅವರ ಜನ್ಮ ದಿನವನ್ನು ಮಕ್ಕಳ ದಿನ ಪ್ರಯುಕ್ತ ಜವಾಹರ್ ಬಾಲ್ ಮಂಚ್ ದಾವಣಗೆರೆ ಜಿಲ್ಲಾ ಸಮಿತಿಯಿಂದ ಅರ್ಥಪೂರ್ಣ ಆಚರಣೆ ಮಾಡಲಾಗಿದೆ ಎಂದು ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಭಾನುವಾರ ಮಕ್ಕಳ ದಿನಾಚರಣೆ ಅಂಗವಾಗಿ ಜವಾಹರ್ ಬಾಲ್ ಮಂಚ್ ವತಿಯಿಂದ ನಡೆದ ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನೆಹರೂ ಅವರು ಭಾರತದ ಮುಂದಿನ ಭವಿಷ್ಯ ಇಂದಿನ ಮಕ್ಕಳ ಕೈಯಲ್ಲಿದೆ ಎಂದಿದ್ದರು. ಆದ್ದರಿಂದ ಮಕ್ಕಳನ್ನು ದೇಶದ ಸದೃಢ ಪ್ರಜೆಗಳನ್ನಾಗಿ ರೂಪಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.ಜಿಲ್ಲಾ ಜವಾಹರ್ ಬಾಲ್ ಮಂಚ್ ಅಧ್ಯಕ್ಷ ಮೊಹಮ್ಮದ್ ಜಿಕ್ರಿಯಾ ಮಾತನಾಡಿ, ಸಂಘಟನೆಯು ಮಕ್ಕಳಲ್ಲಿ ಕಲೆ ಪ್ರೋತ್ಸಾಹಿಸಲು ಚಿತ್ರಕಲೆ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ವೇಷಭೂಷಣ ಸ್ಪರ್ಧೆ, ಹೀಗೆ ಹಲವಾರು ಚಟುವಟಿಕೆಗಳನ್ನು ನಡೆಸಲಾಗುತ್ತಿದೆ ಎಂದರು.
ವಿವಿಧ ಶಾಲೆಗಳಲ್ಲಿ ವಿವಿಧತೆಯಲ್ಲಿ ಏಕತೆ ವಿಷಯದಲ್ಲಿ ಚಿತ್ರಕಲೆ ಸ್ಪರ್ಧೆ, ಹಾಗೂ ಮಕ್ಕಳ ಹಕ್ಕುಗಳು ಹಾಗೂ ಸ್ವಾತಂತ್ರ‍್ಯ ಎಂಬ ವಿಷಯದಲ್ಲಿ ಪ್ರಬಂಧ ಸ್ಪರ್ಧೆ ಏರ್ಪಡಿಸಲಾಗಿತ್ತು. 100ಕ್ಕೂ ಹೆಚ್ಚು ಮಕ್ಕಳು ಉತ್ಸಾಹದಿಂದ ಪಾಲ್ಗೊಂಡಿದ್ದರು. ವಿಜೇತ ಮಕ್ಕಳಿಗೆ ಮೇಯರ್ ಕೆ.ಚಮನ್ ಸಾಬ್, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಬಹುಮಾನ ವಿತರಣೆ ಮಾಡಿದರು.ಉಪ ಮೇಯರ್ ಸೋಗಿ ಶಾಂತ ಕುಮಾರ, ಬಾಲ್ ಮಂಚ್ ಉತ್ತರ ವಲಯ ಅಧ್ಯಕ್ಷ ಅಫ್ರಿದಿ, ಜಿಲ್ಲಾ ಪದಾಧಿಕಾರಿಗಳಾದ ಕೆ.ಎಚ್.ಪ್ರೇಮ, ಶಿಲ್ಪಾ ಪರಶುರಾಮ, ಫಯಾಜ್ ಅಹ್ಮದ್, ಪಾಲಿಕೆ ಸದಸ್ಯರಾದ ಗಡಿಗುಡಾಳ ಮಂಜುನಾಥ, ಎಲ್‌ಎಂಎಚ್ ಸಾಗರ್, ಕಾಂಗ್ರೆಸ್ ಮುಖಂಡರಾದ ಹನುಮಂತ ಪಾಪಣ್ಣಿ, ಜಬೀವುಲ್ಲಾ, ಎಚ್.ಹರೀಶ, ದಾದಾಪೀರ್ ಇನ್ನಿತರರು ಭಾಗವಹಿಸಿದ್ದರು.
- - - -17ಕೆಡಿವಿಜಿ33:ದಾವಣಗೆರೆಯಲ್ಲಿ ಜವಾಹರ್ ಬಾಲ್ ಮಂಚ್‌ನಿಂದ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ವಿವಿಧ ಸ್ಪರ್ಧೆ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು.