ಆಧುನಿಕ ಭಾರತ ನಿರ್ಮಾಣಕ್ಕೆ ಬುನಾದಿ ಹಾಕಿದ ನೆಹರೂ: ಹರೀಶ್‌ ಕುಮಾರ್‌

| Published : Nov 15 2024, 12:32 AM IST

ಆಧುನಿಕ ಭಾರತ ನಿರ್ಮಾಣಕ್ಕೆ ಬುನಾದಿ ಹಾಕಿದ ನೆಹರೂ: ಹರೀಶ್‌ ಕುಮಾರ್‌
Share this Article
  • FB
  • TW
  • Linkdin
  • Email

ಸಾರಾಂಶ

ಮಾಜಿ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 135ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ನಗರದ ನೆಹರೂ ಮೈದಾನದಲ್ಲಿರುವ ನೆಹರೂ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಕೃಷಿ, ನೀರಾವರಿ, ವಿಜ್ಞಾನ- ತಂತ್ರಜ್ಞಾನ, ಕೈಗಾರಿಕೆ ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಆರ್ಥಿಕ, ಸಾಮಾಜಿಕವಾಗಿ ಅಧಿವೃದ್ಧಿಗೊಳಿಸಿ ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದವರು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದರು.

ಮಾಜಿ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂ ಅವರ 135ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ನಗರದ ನೆಹರೂ ಮೈದಾನದಲ್ಲಿರುವ ನೆಹರೂ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. ನೆಹರೂ ಅವರ ದೂರದೃಷ್ಟಿ ಯೋಜನೆಗಳಿಂದಲೇ ದೇಶದ ಎಲ್ಲ ರಾಜ್ಯಗಳು ಅಭಿವೃದ್ಧಿಯತ್ತ ಸಾಗಲು ಸಾಧ್ಯವಾಯಿತು ಎಂದು ಸ್ಮರಿಸಿದರು.

ಮಾಜಿ ಮೇಯರ್ ಶಶಿಧರ್ ಹೆಗ್ಡೆ, ಮೂಡ ಅಧ್ಯಕ್ಷ ಸದಾಶಿವ್ ಉಳ್ಳಾಲ್, ರಾಜ್ಯ ಗೇರು ನಿಮದ ಅಧ್ಯಕ್ಷೆ ಮಮತಾ ಗಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜೆ.ಅಬ್ದುಲ್ ಸಲೀಂ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ.ಕೆ.ಶಾಹುಲ್ ಹಮೀದ್, ಮುಖಂಡರಾದ ಪದ್ಮನಾಭ ಅಮೀನ್, ಸಂಶುದ್ದೀನ್ ಬಂದರ್, ಶುಭೋದಯ ಆಳ್ವ, ಸತೀಶ್ ಪೆಂಗಲ್, ಚೇತನ್ ಕುಮಾರ್, ಗಣೇಶ್ ಪೂಜಾರಿ, ನೆಲ್ಸನ್ ಮೊಂತೆರೊ, ಚಂದ್ರಕಲಾ ಜೋಗಿ, ರೂಪಾ ಚೇತನ್, ಟಿ.ಕೆ. ಶೈಲಜಾ, ಮಂಜುಳಾ ನಾಯಕ್, ಶಾಂತಲಾ ಗಟ್ಟಿ, ಸಮರ್ಥ್ ಭಟ್ ಇದ್ದರು.

ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್ ಸ್ವಾಗತಿಸಿದರು, ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕಿಂ ಡಿಸೋಜ ನಿರೂಪಿಸಿದರು.