ನೆಲ್ಲೂರು ಡೇರಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಎನ್.ಸಿ.ಕೃಷ್ಣ, ಚಂದ್ರು ಆಯ್ಕೆ

| Published : Aug 09 2024, 12:32 AM IST

ನೆಲ್ಲೂರು ಡೇರಿ ಅಧ್ಯಕ್ಷ, ಉಪಾಧ್ಯಕ್ಷರಾಗಿ ಎನ್.ಸಿ.ಕೃಷ್ಣ, ಚಂದ್ರು ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಎಲ್ಲ ನಿರ್ದೇಶಕರು ಹಾಗೂ ಮುಖಂಡರ ಸಹಕಾರದಿಂದ ಸದಸ್ಯರಿಗೆ ಒಕ್ಕೂಟದಿಂದ ಸಿಗುವ ಸವಲತ್ತುಗಳನ್ನು ಸಮರ್ಪಕವಾಗಿ ಒದಗಿಸಲಾಗುವುದು. ನಿರ್ದೇಶಕರ ಹಾಗೂ ಸದಸ್ಯರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಮುಂದಾಗಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ತಾಲೂಕಿನ ನೆಲ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಎನ್.ಸಿ.ಕೃಷ್ಣ ಹಾಗೂ ಉಪಾಧ್ಯಕ್ಷರಾಗಿ ಚಂದ್ರು ಅವಿರೋಧ ಆಯ್ಕೆಯಾದರು.

ಸಂಘದ ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಎನ್.ಸಿ.ಕೃಷ್ಣ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚಂದ್ರು ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಜಿ.ರಾಮಕೃಷ್ಣ ಘೋಷಿಸಿದರು.

ನೂತನ ಅಧ್ಯಕ್ಷ ಎನ್.ಸಿ.ಕೃಷ್ಣ ಮಾತನಾಡಿ, ಎಲ್ಲ ನಿರ್ದೇಶಕರು ಹಾಗೂ ಮುಖಂಡರ ಸಹಕಾರದಿಂದ ಸದಸ್ಯರಿಗೆ ಒಕ್ಕೂಟದಿಂದ ಸಿಗುವ ಸವಲತ್ತುಗಳನ್ನು ಸಮರ್ಪಕವಾಗಿ ಒದಗಿಸಲಾಗುವುದು ಎಂದರು.

ಯುವ ಕಾಂಗ್ರೆಸ್‌ನ ಜಿಲ್ಲಾ ಉಪಾಧ್ಯಕ್ಷ ಎನ್.ಜೆ.ಶಿವಕುಮಾರ್ ಮಾತನಾಡಿ, ಎಲ್ಲರ ವಿಶ್ವಾಸದಿಂದ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ನಿರ್ದೇಶಕರ ಹಾಗೂ ಸದಸ್ಯರ ಸಹಕಾರದಿಂದ ಸಂಘದ ಅಭಿವೃದ್ಧಿಗೆ ಮುಂದಾಗಬೇಕು ಎಂದರು.

ಈ ವೇಳೆ ನಿರ್ದೇಶಕರಾದ ಜಯರಾಮು, ಸಿದ್ದರಾಮು, ಲಕ್ಷ್ಮಿ, ಭವ್ಯ, ದೇವರಾಜು, ಮುಖಂಡರಾದ ಅಂಕೇಗೌಡ, ಕುಳ್ಳೇಗೌಡ, ನಿಂಗೇಗೌಡ, ಬಸವರಾಜು, ಕಾರ್ಯದರ್ಶಿ ನಂಜುಂಡೇಗೌಡ ಹಲವರು ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಇಂದು ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನ

ಮಂಡ್ಯ: ತಾಲೂಕಿನ ವಿ.ಸಿ.ಫಾರ್ಮ್ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಜುಲೈ 9ರಂದು ಅಂತಾರಾಷ್ಟ್ರೀಯ ಜೈವಿಕ ಇಂಧನ ದಿನವನ್ನು ಆಯೋಜಿಸಲಾಗಿದೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವಲಯ ಅರಣ್ಯಾಧಿಕಾರಿಗಳ ಕಚೇರಿ, ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿ, ಎನ್‌ಎಸ್‌ಎಸ್ ಘಟಕ, ವಿ ಸಿ ಫಾರ್ಮ್ ಕೃಷಿ ಮಹಾವಿದ್ಯಾಲಯದ ವತಿಯಿಂದ ನಡೆಯುವ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಉದ್ಘಾಟಿಸುವರು. ಕೃಷಿ ಮಹಾವಿದ್ಯಾಲಯದ ಡೀನ್ ಡಾ.ಪಿ.ಎಸ್.ಫಾತಿಮಾ ಅಧ್ಯಕ್ಷತೆ ವಹಿಸಲಿದ್ದಾರೆ. ವಿ.ಸಿ.ಫಾರ್ಮ್ ವಲಯ ಕೃಷಿ ಸಂಶೋಧನಾ ಕೇಂದ್ರದ ಕೃಷಿ ಸಂಶೋಧನಾಧಿಕಾರಿ ಡಾ.ಎನ್.ಶಿವಕುಮಾರ್ ಉಪನ್ಯಾಸ ನೀಡಲಿದ್ದಾರೆ. ಗೌರವ ಅತಿಥಿಗಳಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಜಿಲ್ಲಾ ಪ್ರಾದೇಶಿಕ ಕಚೇರಿ ಪರಿಸರ ಅಧಿಕಾರಿ ಬಿ.ಪಿ. ಗೀತಾ, ಮಂಡ್ಯ ಪ್ರಾದೇಶಿಕ ಅರಣ್ಯ ವಿಭಾಗದ ವಲಯ ಅರಣ್ಯಧಿಕಾರಿ ಚೈತ್ರ ಆಗಮಿಸಲಿದ್ದಾರೆ.