ಮೂಲ್ಕಿ: ವಿಜೃಂಭಣೆಯ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ

| Published : Mar 11 2024, 01:20 AM IST

ಸಾರಾಂಶ

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗೆ ಶ್ರೀ ನಾಗದೇವರಿಗೆ ನವಕ ಪ್ರಧಾನ ಹೋಮ, ಆಶ್ಲೇಷ ಪೂಜೆ, ಪಂಚಾಮೃತ ಅಭಿಷೇಕ ಮತ್ತು ತಂಬಿಲ ಸೇವೆ , ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು.

ಮೂಲ್ಕಿ: ಕೋಲ್ನಾಡು ಶ್ರೀ ನಾಗದೇವರ ಮತ್ತು ಕೊರಗಜ್ಜ ಪರಿವಾರ ದೈವಗಳ ಜೀರ್ಣೋದ್ಧಾರ ಸಮಿತಿ ಮತ್ತು ಕಾರ್ನಾಡ್ ಸಣ್ಣ ಕೈಗಾರಿಕೆಗಳ ಸಂಘದ ವತಿಯಿಂದ ಆರಾಧಿಸಿಕೊಂಡು ಬರುತ್ತಿರುವ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.

ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಬೆಳಗ್ಗೆ ಶ್ರೀ ನಾಗದೇವರಿಗೆ ನವಕ ಪ್ರಧಾನ ಹೋಮ, ಆಶ್ಲೇಷ ಪೂಜೆ, ಪಂಚಾಮೃತ ಅಭಿಷೇಕ ಮತ್ತು ತಂಬಿಲ ಸೇವೆ , ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು. ರಾತ್ರಿ ಸ್ವಾಮಿ ಕೊರಗಜ್ಜ ದೈವದ ನೇಮೋತ್ಸವ ನಡೆದು ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭ ಕಾರ್ನಾಡ್ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶೇಖರ್ ಸಾಲ್ಯಾನ್, ಪದಾಧಿಕಾರಿಗಳಾದ ಚೇತನ್ ಶೆಟ್ಟಿ, ಪ್ರಶಾಂತ್ ಕಾಂಚನ್, ರಂಗನಾಥ ಶೆಟ್ಟಿ, ಚೇತನ್, ದಿನೇಶ್ ಹೆಗ್ಡೆ ಮಾನಂಪಾಡಿ, ಉಮೇಶ್ ದೇವಾಡಿಗ, ಅಜಿತ್ ಶೆಟ್ಟಿ, ನವೀನ್ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.

---12ರಿಂದ ಬಂಟ್ವಾಳ ಶ್ರೀ ವೆಂಕಟರಮಣ ದೇವಳ ಬ್ರಹ್ಮ ರಥೋತ್ಸವಬಂಟ್ವಾಳ: ಗೌಡ ಸಾರಸ್ವತ ಬ್ರಾಹ್ಮಣ ವೃಂದದವರ ಶ್ರೀ ತಿರುಮಲ ವೆಂಕಟರಮಣ ಸ್ವಾಮಿ ದೇವಸ್ಥಾನದ ಬ್ರಹ್ಮರಥೋತ್ಸವಕ್ಕೆ 200 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ವಿಜೃಂಭಣೆಯ ಉತ್ಸವಾದಿ ಕಾರ್ಯಕ್ರಮಗಳು ಮಾ.12ರಿಂದ್ರ್ಚ್ 17ರ ವರೆಗೆ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರರಾದ ಅಶೋಕ್ ಶೆಣೈ ಹೇಳಿದರು.ಬಂಟ್ವಾಳ ಶ್ರೀ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಕಾರ್ಯಕ್ರಮಗಳಿಗೆ ಶ್ರೀ ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿ ಮಾ.10ರಂದು ಆಗಮಿಸಿ 17ರ ವರೆಗೆ ಬಂಟ್ವಾಳದಲ್ಲಿ ಉಪಸ್ಥಿತರಿರುವರು. ಶ್ರೀಗಳ ಆಜ್ಞಾನುಸಾರ ಕಾರ್ಯಕ್ರಮಗಳು ನಡೆಯಲಿವೆ. ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಆಗಮಿಸಿ ಎಲ್ಲ ಕಾರ್ಯಕ್ರಮಗಳಲ್ಲಿ ಸಹಭಾಗಿಗಳಾಗಿ ಶ್ರೀಹರಿಗುರುಕೃಪೆಗೆ ಪಾತ್ರರಾಗಬೇಕು ಎಂದವರು ವಿನಂತಿಸಿದರು.ಮಾ.16ರಂದು 200ನೇ ವರ್ಷಾಚರಣೆಯ ಬ್ರಹ್ಮರಥೋತ್ಸವ ನಡೆಯಲಿದೆ. ಸಂಜೆ 4.30ಕ್ಕೆ ಯಜ್ಞಾರತಿ, ಪೂರ್ಣಾಹುತಿ ಬಲಿ ಬಳಿಕ ಸಂಜೆ 5.30ಕ್ಕೆ ಬ್ರಹ್ಮರಥಾರೋಹಣ, ಸಮಾರಾಧನೆ, ರಾತ್ರಿ 1 ಗಂಟೆಗೆ ಬ್ರಹ್ಮರಥೋತ್ಸವ ನಡೆಯಲಿದೆ. ಮಾ.17ರಂದು ಶ್ರೀಗಳಿಂದ ಸಭಾ ಕಾರ್ಯಕ್ರಮ ಪ್ರವಚನ ನಡೆಯಲಿದೆ. ಅವಭೃತೋತ್ಸವ ಕಾರ್ಯಕ್ರಮಗಳು ಅಂದು ನಡೆಯಲಿವೆ. ದೇವಳ ವತಿಯಿಂದ ನಡೆಯುತ್ತಿರುವ ಶಾಲೆಗೆ ಎರಡು ಬಸ್‌ಗಳನ್ನು ಈ ಸಂದರ್ಭ ಕೊಡುಗೆಯಾಗಿ ನೀಡಲಾಗುವುದು. ರಥೋತ್ಸವ ಕಾರ್ಯಕ್ರಮದ ಅಂಗವಾಗಿ ವಿಶೇಷವಾಗಿ ಪಟ್ಟದ ದೇವರಿಗೆ 50 ಪವನ್ ಚಿನ್ನ ಹಾಗೂ ಉತ್ಸವ ಮೂರ್ತಿಗೆ 50 ಪವನ್ ಚಿನ್ನ, ಕಾಶಿಮಠಕ್ಕೆ ಚಿನ್ನದ ಸರ ಹಾಗೂ ಬ್ರಹ್ಮರಥಕ್ಕೆ 10 ಕೆ.ಜಿ. ಬೆಳ್ಳಿಯ ಪ್ರಭಾವಳಿ ನೀಡಲಾಗುತ್ತದೆ.

ಶೈಕ್ಷಣಿಕವಾಗಿಯೂ ಅನೇಕ ಕೊಡುಗೆಗಳನ್ನು ಕ್ಷೇತ್ರದ ವತಿಯಿಂದ ನೀಡುತ್ತಿದ್ದು, ಈಗಾಗಲೇ ಪ್ರಾಥಮಿಕ ಹಾಗೂ ಹೈಸ್ಕೂಲ್ ವರೆಗೆ ಶಿಕ್ಷಣ ನೀಡಲಾಗುತ್ತಿದೆ. ಮುಂದಿನ ಅವಧಿಯಲ್ಲಿ ಪಿ.ಯು. ಕಾಲೇಜು ಆರಂಭಿಸಲಿದ್ದೇವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮೊಕ್ತೇಸರರಾದ ಭಾಮಿ ನಾಗೇಂದ್ರನಾಥ ಶೆಣೈ, ಬಿ.ಸುರೇಶ್ ಬಾಳಿಗಾ, ಪ್ರಮುಖರಾದ ವಸಂತ ಪ್ರಭು, ಶಿವಾನಂದ ಬಾಳಿಗಾ, ಬಸ್ತಿ ಮಾಧವ ಶೆಣೈ ಇದ್ದರು.