ಮಹಿಳೆಯರಿಗೂ ಸ್ವಾತಂತ್ರ್ಯ ಹೋರಾಟಕ್ಕೆ ಅವಕಾಶ ಕಲ್ಪಿಸಿದ್ದ ನೇತಾಜಿ: ಮರಿಸ್ವಾಮಿಗೌಡ

| Published : Jan 24 2025, 12:46 AM IST

ಮಹಿಳೆಯರಿಗೂ ಸ್ವಾತಂತ್ರ್ಯ ಹೋರಾಟಕ್ಕೆ ಅವಕಾಶ ಕಲ್ಪಿಸಿದ್ದ ನೇತಾಜಿ: ಮರಿಸ್ವಾಮಿಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತ ಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರು. ಪುರುಷರಷ್ಟೇ ಅಲ್ಲದೇ ಮಹಿಳೆಯರಿಗೂ ಸ್ವಾತಂತ್ರ್ಯ ಹೋರಾಟಕ್ಕೆ ಅವಕಾಶ ಕಲ್ಪಿಸಿದ್ದರಿಂದ ಕ್ಯಾಪ್ಟನ್ ಲಕ್ಷ್ಮಿ ಅವರು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದರು.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಪುರುಷರಿಗಷ್ಟೇ ಅಲ್ಲದೆ ಮಹಿಳೆಯರಿಗೂ ಸ್ವಾತಂತ್ರ್ಯ ಹೋರಾಟಕ್ಕೆ ಅವಕಾಶ ಕಲ್ಪಿಸಿ ಕೊಟ್ಟಿದ್ದರು ಎಂದು ಭೂ-ದಾನಿಗಳಾದ ನೆಲಮನೆ ಮರಿಸ್ವಾಮಿಗೌಡ ಹೇಳಿದರು.

ಪಟ್ಟಣದ ಶ್ರೀರಂಗನಾಯಕಿ ಸಮಾಜದ ಸಭಾಂಗಣದಲ್ಲಿ ಸಮಾಜದ ವತಿಯಿಂದ ಆಯೋಜಿಸಿದ್ದ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಭಾರತ ಕಂಡ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರು. ಪುರುಷರಷ್ಟೇ ಅಲ್ಲದೇ ಮಹಿಳೆಯರಿಗೂ ಸ್ವಾತಂತ್ರ್ಯ ಹೋರಾಟಕ್ಕೆ ಅವಕಾಶ ಕಲ್ಪಿಸಿದ್ದರಿಂದ ಕ್ಯಾಪ್ಟನ್ ಲಕ್ಷ್ಮಿ ಅವರು ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದರು ಎಂದರು.

ಈ ವೇಳೆ ಶ್ರೀರಂಗನಾಯಕಿ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೆಗೌಡ, ಮಣಿಪಾಲ್ ಸಿಗ್ನ ಹೆಲ್ತ್ ಇನ್ಸೂರೆನ್ಸ್ ಕಂಪನಿ ಮ್ಯಾನೇಜರ್ ಜಿ.ಎಸ್.ಅರ್ಜುನ್, ವೆಂಕಟೇಗೌಡ ಸೇವಾ ಸಮಿತಿ ಅಧ್ಯಕ್ಷ ಡಾ.ಕೆ.ವೈ ಶ್ರೀನಿವಾಸ್, ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ.ಎಸ್ ಜಯಶಂಕರ್, ಕನ್ನಡ ಸಾಹಿತ್ಯ ಪರಿಷತ್ ಬೆಳಗೊಳ ಘಟಕದ ಅಧ್ಯಕ್ಷ ರಾಮಕೃಷ್ಣ, ರೋಟರಿ ಕ್ಲಬ್ ಸದಸ್ಯೆ ಎನ್. ಸರಸ್ವತಿ, ಪುರಸಭಾ ಮಾಜಿ ಅಧ್ಯಕ್ಷೆ ಶೀಲಾ ನಂಜುಂಡಯ್ಯ, ನಿವೃತ್ತ ಬಿಇಒ ಸುವರ್ಣ ದೇವಿ, ಸಮಾಜದ ಸದಸ್ಯರಾದ ವಿಶಾಲಾಕ್ಷಿ, ಸಂಧ್ಯಾ, ಪುಷ್ಪ, ಮಂಜುಳಾ ಸೇರಿದಂತೆ ಇತರರು ಇದ್ದರು.

ಹೊಸ ಆನಂದೂರಿನಲ್ಲಿ ಇಂದು, ನಾಳೆ ದೇಗುಲಗಳಲ್ಲಿ ಪೂಜೆ

ಶ್ರೀರಂಗಪಟ್ಟಣ:

ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ಜ.24 ಹಾಗೂ 25ರಂದು ಶ್ರೀ ಅಕೇಶ್ವರ ಮಹಾಗಣಪತಿ, ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಪ್ರಥಮ ವರ್ಷದ ವಾರ್ಷಿಕೋತ್ಸವ ಕುಂಭಾಬಿಷೇಕ ಹಾಗೂ ನೂತನ ನವಗ್ರಹ ದೇವಾಲಯ ನಾಗಶಿಲಾ ಪ್ರತಿಷ್ಠಾಪನೆ ನಡೆಯಲಿದೆ ಎಂದು ಗ್ರಾಮಸ್ಥರು ತಿಳಿದ್ದಾರೆ.

ಆದಿಚುಂಚನಗಿರಿ ಮೈಸೂರು ಶಾಖಾಮಠದ ಶ್ರೀಸೋಮನಾಥೇಶ್ವರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸುವರು. ಬೆಳಗೊಳ ಗ್ರಾಮದ ಶ್ರೀವಿಶ್ವಮಂಗಳ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ಸಂಸ್ಥಾಪಕ ಶ್ರೀಉಭಯ ವೇದಾಂತ ವಿದ್ವಾನ್ ವಿ.ಲಕ್ಷ್ಮೀ ನಾರಾಯಣ್ ಭಾಗವಹಿಸುವರು. ಶಾಸಕ ರಮೇಶ ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ, ವಿಧಾನ ಪರಿಷತ್ ಸದಸ್ಯ ವಿವೇಕಾನಂದ, ಮಾಜಿ ಸದಸ್ಯ ಮರಿತಿಬ್ಬೇಗೌಡ ಸೇರಿದಂತೆ ಇತರರು ಆಗಮಿಸಲಿದ್ದಾರೆ. ಜ.25 ಶನಿವಾರ ಮಧ್ಯಾಹ್ನ 1 ಗಂಟೆಗೆ ಪ್ರಸಾದ ವಿನಿಯೋಗ ನಡೆಯಲಿದೆ.