ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸಿ.ಎಸ್. ನೇತ್ರಾವತಿ ಅವರು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ. 2025–26ನೇ ಸಾಲಿನ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಸ್ಪರ್ಧೆಗಳು ಹಾಸನ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು. ಈ ಕ್ರೀಡಾಕೂಟದಲ್ಲಿ ಬೇಲೂರು ತಾಲೂಕಿನ ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸಿ.ಎಸ್. ನೇತ್ರಾವತಿ ಅವರು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿಸಿ ಬೇಲೂರು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ಕನ್ನಡಪ್ರಭ ವಾರ್ತೆ ಬೇಲೂರುತಾಲೂಕಿನ ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸಿ.ಎಸ್. ನೇತ್ರಾವತಿ ಅವರು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿದ್ದಾರೆ.
ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಹಾಸನ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಸನ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಹಾಸನ ಇವರ ಸಂಯುಕ್ತಾಶ್ರಯದಲ್ಲಿ 2025–26ನೇ ಸಾಲಿನ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಸ್ಪರ್ಧೆಗಳು ಹಾಸನ ಜಿಲ್ಲಾ ಕ್ರೀಡಾಂಗಣದ ಹಾಕಿ ಮೈದಾನದಲ್ಲಿ ಅದ್ದೂರಿಯಾಗಿ ನಡೆಯಿತು.ಈ ಕ್ರೀಡಾಕೂಟದಲ್ಲಿ ಬೇಲೂರು ತಾಲೂಕಿನ ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಸಿ.ಎಸ್. ನೇತ್ರಾವತಿ ಅವರು ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ತೋರಿಸಿ ಬೇಲೂರು ತಾಲೂಕಿಗೆ ಕೀರ್ತಿ ತಂದಿದ್ದಾರೆ.ಸಿ.ಎಸ್. ನೇತ್ರಾವತಿ ಅವರು400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ, 400 + 100 ಮೀಟರ್ ರಿಲೇ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕಬಡ್ಡಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಖೋ-ಖೋ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ,ಕುಸ್ತಿ (60–70 ಕೆ.ಜಿ.) ವಿಭಾಗದಲ್ಲಿ ಪ್ರಥಮ ಸ್ಥಾನ, 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ, ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ, ಲಾಂಗ್ ಜಂಪ್‌ನಲ್ಲಿ ತೃತೀಯ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಒಬ್ಬ ಸರ್ಕಾರಿ ನೌಕರೆಯಾಗಿಯೇ ಅಲ್ಲದೆ ಮಹಿಳಾ ಕ್ರೀಡಾಪಟುವಾಗಿ ವಿವಿಧ ವಿಭಾಗಗಳಲ್ಲಿ ನಿರಂತರವಾಗಿ ಸಾಧನೆ ಮಾಡಿದ ಸಿ.ಎಸ್. ನೇತ್ರಾವತಿ ಅವರ ಈ ಸಾಧನೆಯನ್ನು ಸಹೋದ್ಯೋಗಿಗಳು, ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರು ಶ್ಲಾಘಿಸಿದ್ದಾರೆ. ಇವರ ಸಾಧನೆ ಇತರ ಸರ್ಕಾರಿ ನೌಕರರು ಹಾಗೂ ಯುವ ಕ್ರೀಡಾಪಟುಗಳಿಗೆ ಪ್ರೇರಣೆಯಾಗಿದ್ದು, ತಾಲೂಕಿನ ಗೌರವವನ್ನು ಇನ್ನಷ್ಟು ಹೆಚ್ಚಿಸಿದೆ.