ದಾಳಿ ತಪ್ಪಿಸಲು ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನಡೆಸಿ: ಜಿಲ್ಲಾಧಿಕಾರಿ

| Published : Sep 15 2025, 01:00 AM IST

ದಾಳಿ ತಪ್ಪಿಸಲು ನಾಯಿಗಳಿಗೆ ಸಂತಾನಹರಣ ಚಿಕಿತ್ಸೆ ನಡೆಸಿ: ಜಿಲ್ಲಾಧಿಕಾರಿ
Share this Article
  • FB
  • TW
  • Linkdin
  • Email

ಸಾರಾಂಶ

ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ತಪ್ಪಿಸಲು ಹಾಗೂ ನಾಯಿಗಳು ಹೆಚ್ಚಾಗದಂತೆ ಶ್ವಾನಗಳಿಗೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗದಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದ್ದಾರೆ.

ದಾವಣಗೆರೆ: ಮಹಿಳೆ ಮತ್ತು ಮಕ್ಕಳ ಮೇಲೆ ದಾಳಿ ತಪ್ಪಿಸಲು ಹಾಗೂ ನಾಯಿಗಳು ಹೆಚ್ಚಾಗದಂತೆ ಶ್ವಾನಗಳಿಗೆ ಸಂತಾನಹರಣ ಚಿಕಿತ್ಸೆ ಮತ್ತು ಸಂತತಿ ಹೆಚ್ಚಳವಾಗದಂತೆ ಲಸಿಕೆ ಹಾಕುವಂತೆ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಪ್ರಾಣಿ ಜನನ ನಿಯಂತ್ರಣ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯವರು ನಾಯಿ ಕಚ್ಚಿದಾಗ ಲಸಿಕೆ ನೀಡಲು ಸಾರ್ವಜನಿಕರಿಗೆ ಸಹಾಯವಾಗುವಂತೆ 108 ಇಲ್ಲವೇ 1098 ಸಹಾಯವಾಣಿ ರಚನೆ ಮಾಡಬೇಕು. ಕರೆ ಬಂದ ಕೂಡಲೇ ಸಂತ್ರಸ್ತರ ಮನೆಗೆ ತೆರಳಿ ಅಗತ್ಯ ಚಿಕಿತ್ಸೆ ನೀಡಬೇಕು. ಜಿಲ್ಲೆಯಲ್ಲಿರುವ ಎಲ್ಲಾ ಬೀದಿನಾಯಿ, ಸಾಕು ನಾಯಿಗಳಿಗೆ ಎಆರ್‌ಯು ಲಸಿಕೆ ನೀಡಲು ಕ್ರಮಕೈಗೊಳ್ಳಬೇಕು. ಮನೆ ಮನೆಗೆ ತೆರಳಿ ಸಾಕು ಪ್ರಾಣಿಗಳಿಗೆ ವ್ಯಾಕ್ಸಿನ್ ನೀಡಬೇಕು. ಎಬಿಸಿ ಕಾರ್ಯಕ್ರಮ ಮಾಡಲು ನಗರಾಭಿವೃದ್ಧಿ ಕೋಶ, ಪಾಲಿಕೆ ಸಂಬಂಧಿಸಿದ ಟೆಂಡರ್ ಮೂಲಕ ಸಂಸ್ಥೆಗಳನ್ನು ಗುರುತಿಸಿ ಎಲ್ಲ ನಾಯಿಗಳಿಗೆ ಪಶುಪಾಲನಾ ಸಹಯೋಗದೊಂದಿಗೆ ಸಂತಾನಹರಣ ಚಿಕಿತ್ಸೆ ನೀಡುವಂತೆ ತಿಳಿಸಿದರು.

ಗಂಭೀರ ಅನಾರೋಗ್ಯ ಅಥವಾ ಮಾರಣಾಂತಿಕವಾಗಿ ಗಾಯಗೊಂಡ ಅಥವಾ ಹುಚ್ಚುರೋಗಪೀಡಿತ ನಾಯಿಗಳಿಗೆ ಸೋಡಿಯಂ ಪೆಂಟಾಥಾಲ್ ಬಳಸಿ, ನೋವುರಹಿತ ವಿಧಾನದಲ್ಲಿ ದಯಾಮರಣ ನೀಡಬೇಕು. ಬೇರೆ ಯಾವುದೇ ವಿಧಾನ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪ್ರತಿ ಪ್ರಾಣಿಯನ್ನು ದಯಾಮರಣಕ್ಕೆ ಒಳಪಡಿಸಲು ಲಿಖಿತವಾಗಿ ಕಾರಣಗಳನ್ನು ದಾಖಲಿಸಬೇಕು ಎಂದರು.

ಜಿಲ್ಲೆಯಲ್ಲಿರುವ ಎಲ್ಲ ನಾಯಿಗಳಿಗೆ ಉಚಿತ ಲಸಿಕೆ ಹಾಕಲು ಸೆ.28 ರಿಂದ ಅ.27ರವರೆಗೆ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಶಾಲೆಗಳಲ್ಲಿ ಪಶುಪಾಲನಾ ಇಲಾಖೆಯಿಂದ ರೇಬಿಸ್ ಅರಿವು ಕಾರ್ಯಕ್ರಮ ಆಯೋಜಿಸಬೇಕು ಎಂದರು.

ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ್ ರಾವ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮಹಾಂತೇಶ್, ಪಶುಪಾಲನಾ ಇಲಾಖೆ ಡಿಡಿ ಡಾ. ಮಹೇಶ್ ಎಚ್.ಎಂ., ಡಿಎಚ್‌ಒ ಡಾ.ಷಣ್ಮುಖಪ್ಪ, ತಾಪಂ ಇಒ ರಾಮಭೋವಿ ಪಾಲ್ಗೊಂಡಿದ್ದರು.

- - -

(** ಈ ಫೋಟೋ-ಕ್ಯಾಪ್ಷನ್‌ ಪ್ಯಾನೆಲ್‌ಗೆ ಬಳಸಿ)

-10ಕೆಡಿವಿಜಿ45:

ದಾವಣಗೆರೆಯ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಅಧ್ಯಕ್ಷತೆಯಲ್ಲಿ ಪ್ರಾಣಿ ಜನನ ನಿಯಂತ್ರಣ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆ ನಡೆಯಿತು. ಜಿಪಂ ಸಿಇಒ ಗಿತ್ತೆ ಮಾಧವ್ ವಿಠ್ಠಲ್ ರಾವ್, ನಗರಾಭಿವೃದ್ಧಿ ಕೋಶದ ಮಹಾಂತೇಶ್, ಪಶುಪಾಲನಾ ಇಲಾಖೆ ಡಿಡಿ ಡಾ. ಮಹೇಶ್, ಡಿಎಚ್‌ಒ ಡಾ.ಷಣ್ಮುಖಪ್ಪ, ತಾಪಂ ಇಒ ರಾಮಭೋವಿ ಇದ್ದರು.