ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂತಾನ ಹರಣ ಶಸ್ತ್ರಚಿಕಿತ್ಸೆ: ಶಾಸಕ ತಮ್ಮಯ್ಯ

| Published : Aug 04 2025, 12:15 AM IST

ಬೀದಿ ನಾಯಿಗಳ ನಿಯಂತ್ರಣಕ್ಕೆ ಸಂತಾನ ಹರಣ ಶಸ್ತ್ರಚಿಕಿತ್ಸೆ: ಶಾಸಕ ತಮ್ಮಯ್ಯ
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ಅತಿ ಶೀಘ್ರದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆಯ ಮೂಲಕ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸ ಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

- ಚಿಕ್ಕಮಗಳೂರು ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಬೀದಿ ನಾಯಿಗಳ । ಬಿಡಾಡಿ ದನಗಳ ಹಾವಳ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಅತಿ ಶೀಘ್ರದಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರಚಿಕಿತ್ಸೆಯ ಮೂಲಕ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸ ಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಿಕ್ಕಮಗಳೂರು ನಗರ ಸೇರಿದಂತೆ ಗ್ರಾಮಾಂತರ ಪ್ರದೇಶಗಳಲ್ಲಿ ಬೀದಿ ನಾಯಿಗಳ ಉಪಟಳ ಹಾಗೂ ಬಿಡಾಡಿ ದನ ಗಳಿಂದ ಆಗುತ್ತಿರುವ ತೊಂದರೆ ಬಗ್ಗೆ ಸಾರ್ವಜನಿಕರಿಂದ ನಗರಸಭೆ ಮತ್ತು ತಾಪಂಗೆ ಹಲವಾರು ದೂರು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿದ್ದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇಂದಾವರ ಗ್ರಾಮದ ಸರ್ವೆ ನಂ. 36 ರಲ್ಲಿ 15 ಎಕರೆ ಜಾಗ ಪಶು ಸಂಗೋಪನೆ ಇಲಾಖೆಗೆ ಮೀಸಲಿಟ್ಟಿದ್ದು, ಅದರ 2 ಎಕರೆಯಲ್ಲಿ ಬೀದಿ ನಾಯಿಗಳನ್ನು ಪಳಗಿಸಿ ಚಿಕಿತ್ಸೆ ನೀಡಲು ಪಶು ಸಂಗೋಪನೆ ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಈ ಸಂಬಂಧ ಇನ್ನೊಂದು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಬೀದಿನಾಯಿಗಳನ್ನು ಹಿಡಿದು ಸಂತಾನ ಹರಣ ಶಸ್ತ್ರ ಚಿಕಿತ್ಸೆ ನೀಡಿ ಪುನಃ ಸ್ವಸ್ಥಾನಕ್ಕೆ ತಂದು ಬಿಡಲಾಗುವುದು ಎಂದು ತಿಳಿಸಿದರು.ವರ್ಷದಲ್ಲಿ 2 ಬಾರಿ ಸಂತಾನಹರಣ ಶಸ್ತ್ರಚಿಕಿತ್ಸೆ ನೀಡಿದರೆ ಬೀದಿ ನಾಯಿಗಳ ಸಂತತಿ ಕಡಿಮೆಯಾಗುತ್ತದೆ ಎಂದು ಪಶು ಸಂಗೋಪನೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆಂದು ಹೇಳಿದರು. ದನಗಳನ್ನು ಸಾಕಿರುವವರಿಗೆ ನಗರಸಭೆಯಿಂದ ರಸ್ತೆಗೆ ಬಿಡದಂತೆ ಸೂಚನೆ ಪತ್ರ ನೀಡಿದ್ದು, ನಿರ್ಲಕ್ಷ್ಯವಹಿಸಿ ಬೀದಿಗೆ ಬಿಟ್ಟರೆ ಬೇರೆಡೆಗೆ ಸಾಗಿಸಲು ಕ್ರಮವಹಿಸಲಾಗುವುದೆಂದು ಎಚ್ಚರಿಸಿದರು.ನಗರದ ಕಲ್ಯಾಣ ಮಂಟಪಗಳ ಮುಂಭಾಗ ವಾಹನಗಳನ್ನು ನಿಲುಗಡೆ ಮಾಡುತ್ತಿರುವುದರಿಂದ ಸಂಚಾರಕ್ಕೆ ತೊಂದರೆ ಯಾಗುತ್ತಿದೆ. ಈ ಬಗ್ಗೆ ಸಾರ್ವಜನಿಕರ ದೂರನ್ನು ಗಂಭೀರವಾಗಿ ಪರಿಗಣಿಸಿ ಕಲ್ಯಾಣ ಮಂಟಪದ ಮಾಲೀಕರು ಸೆಕ್ಯುರಿಟಿ ಗಾರ್ಡ್‌ ಒಬ್ಬರನ್ನು ನೇಮಕ ಮಾಡಿ ದೂರದಲ್ಲಿ ವಾಹನ ನಿಲುಗಡೆಗೆ ಮುಂದಾಗಬೇಕೆಂದು ಮನವಿ ಮಾಡಿದರು.ನಗರ ಸಭಾಧ್ಯಕ್ಷೆ ಶೀಲಾ ದಿನೇಶ್ ಮಾತನಾಡಿ, ಬೀದಿ ನಾಯಿಗಳ ಉಪಟಳದಿಂದ ನಾಗರಿಕರಿಗೆ ತೊಂದರೆ ಯಾಗುತ್ತಿ ರುವುದನ್ನು ಮನಗಂಡು ಅವುಗಳ ನಿಯಂತ್ರಣಕ್ಕೆ ನಗರಸಭೆಯಿಂದ ಅಗತ್ಯ ಮುಂಜಾಗ್ರತಾ ಕ್ರಮ ವಹಿಸ ಲಾಗುವುದೆಂದು ಭರವಸೆ ನೀಡಿದರು.ಪೌರಾಯುಕ್ತ ಬಿ.ಸಿ ಬಸವರಾಜ್ ಮಾತನಾಡಿ, ಕಳೆದೆರಡು ವರ್ಷಗಳಿಂದ 3500 ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ನೀಡಲಾಗಿದೆ. ಪ್ರಸಕ್ತ ವರ್ಷ 2000 ಬೀದಿ ನಾಯಿಗಳಿಗೆ ಶಸ್ತ್ರಚಿಕಿತ್ಸೆಯ ಗುರಿ ಹೊಂದಲಾಗಿದೆ. ಸದ್ಯದಲ್ಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕನಿಷ್ಠ 6 ತಿಂಗಳಿಗೊಮ್ಮೆ ಶಸ್ತ್ರಚಿಕಿತ್ಸೆ ನೀಡಲಾಗುವುದೆಂದರು.ಇದುವರೆಗೆ ಬೀದಿನಾಯಿಗಳ ನಿಯಂತ್ರಣಕ್ಕೆ ಟೆಂಡರ್‌ ಕರೆದಿದ್ದು, ಟೆಂಡರ್‌ದಾರರು ಭಾಗವಹಿಸದ ಪರಿಣಾಮ ಸಾರ್ವಜನಿ ಕರಿಗೆ ತೊಂದರೆಯಾಗುತ್ತಿದೆ. ಆ.11 ಕ್ಕೆ ಟೆಂಡರ್ ಪ್ರಕ್ರಿಯೆ ಅಂತಿಮಗೊಳಿಸಿ ಕಾರ್ಯಾದೇಶ ನೀಡಿ ಶಸ್ತ್ರಚಿಕಿತ್ಸೆಗೆ ಕ್ರಮವ ಹಿಸುವುದಾಗಿ ಭರವಸೆ ನೀಡಿದರು.ಬಿಡಾಡಿ ದನಗಳ ನಿಯಂತ್ರಣಕ್ಕೆ ನಗರಸಭೆಯಿಂದ ಅಗತ್ಯ ಕ್ರಮಕೈಗೊಂಡಿದ್ದು, ಕಾಮಧೇನು ಗೋಶಾಲೆಗೆ ಟೆಂಡರ್ ನೀಡಲಾಗಿದೆ. ಬಿಡಾಡಿ ದನಗಳ ಸಾಕಾಣೆದಾರರಿಗೆ ನಗರಸಭೆಯಿಂದ ನೋಟಿಸ್ ನೀಡಿದ್ದು, ಸ್ಪಂದಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನ, ಪರಿಸರ ಅಭಿಯಂತರರಾದ ತೇಜಸ್ವಿನಿ, ಆರೋಗ್ಯ ನಿರೀಕ್ಷಕ ನಾಗಪ್ಪ, ರಂಗಪ್ಪ, ಇಂಜಿನಿಯರ್ ಲೋಕೇಶ್, ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಮೋಹನ್‌ ಕುಮಾರ್, ಪ್ರಾಣಿದಯಾ ಸಂಘದ ನಳಿನಾ ಡಿಸಾ ಉಪಸ್ಥಿತರಿದ್ದರು. 2 ಕೆಸಿಕೆಎಂ 1ಬೀದಿ ನಾಯಿಗಳ ಉಪಟಳ ಹಾಗೂ ಬಿಡಾಡಿ ದನಗಳ ನಿಯಂತ್ರಣ ಸಂಬಂಧ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಾಸಕ ಎಚ್‌.ಡಿ. ತಮ್ಮಯ್ಯ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಭೆ ನಡೆಯಿತು.