ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್, ರಾಣಿ ಲಕ್ಷ್ಮೀಬಾಯಿ, ಸೇರಿದಂತೆ ಅನೇಕ ಮಹನೀಯರು ತಮ್ಮ ಜೀವನವನ್ನೇ ತ್ಯಾಗ ಮಾಡಿದರು. ಅವರ ತ್ಯಾಗವನ್ನು ನಾವು ಎಂದಿಗೂ ಮರೆಯಬಾರದು ಎಂದು ಉಪ ತಹಸೀಲ್ದಾರ್ ಪೂರ್ಣಿಮಾ ತಿಳಿಸಿದರು. ಹೋಬಳಿಯ ನಾಡಕಚೇರಿ ಆವರಣದಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಶನಿವಾರ ಮಾತನಾಡಿದರು. ಸ್ವಾತಂತ್ರ್ಯ ಎಂದರೆ ಕೇವಲ ಹಕ್ಕುಗಳಲ್ಲ ದೇಶದ ಬಗ್ಗೆ ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆಯಿಂದ ನಿರ್ವಹಿಸುವ ಜವಾಬ್ದಾರಿ ಎಲ್ಲರ ಕರ್ತವ್ಯವಾಗಿದೆ ಎಂದರು.
ನುಗ್ಗೇಹಳ್ಳಿ: ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಭಗತ್ ಸಿಂಗ್, ಸುಭಾಷ್ ಚಂದ್ರ ಬೋಸ್, ರಾಣಿ ಲಕ್ಷ್ಮೀಬಾಯಿ, ಸೇರಿದಂತೆ ಅನೇಕ ಮಹನೀಯರು ತಮ್ಮ ಜೀವನವನ್ನೇ ತ್ಯಾಗ ಮಾಡಿದರು. ಅವರ ತ್ಯಾಗವನ್ನು ನಾವು ಎಂದಿಗೂ ಮರೆಯಬಾರದು ಎಂದು ಉಪ ತಹಸೀಲ್ದಾರ್ ಪೂರ್ಣಿಮಾ ತಿಳಿಸಿದರು.
ಹೋಬಳಿಯ ನಾಡಕಚೇರಿ ಆವರಣದಲ್ಲಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಶನಿವಾರ ಮಾತನಾಡಿದರು. ಸ್ವಾತಂತ್ರ್ಯ ಎಂದರೆ ಕೇವಲ ಹಕ್ಕುಗಳಲ್ಲ ದೇಶದ ಬಗ್ಗೆ ನಮ್ಮ ಕರ್ತವ್ಯಗಳನ್ನು ಪ್ರಾಮಾಣಿಕತೆಯಿಂದ ನಿರ್ವಹಿಸುವ ಜವಾಬ್ದಾರಿ ಎಲ್ಲರ ಕರ್ತವ್ಯವಾಗಿದೆ ದೇಶವನ್ನು ಸ್ವಚ್ಛವಾಗಿ ವಾಗಿಸಲು ಪರಿಸರ ರಕ್ಷಣೆಯೊಂದಿಗೆ ಉತ್ತಮ ನಾಗರಿಕರಾಗಿ ದೇಶದ ಶಾಂತಿ ಪ್ರಗತಿಗೆ ಒಗ್ಗಟ್ಟಾಗಿ ಶ್ರಮಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಕಂದಾಯ ನಿರೀಕ್ಷಕ ಲತೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ನಟರಾಜ್, ಟಿಎಪಿಸಿಎಂಎಸ್ ನಿರ್ದೇಶಕ ತೋಟಿ ನಾಗರಾಜ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಎನ್ಎಸ್. ಲಕ್ಷ್ಮಣ್, ಗ್ರಾಮ ಲೆಕ್ಕಾಧಿಕಾರಿಗಳಾದ ಶಿವಕುಮಾರ್, ಚಂದ್ರಭೂಷಣ್, ಅಲೆಸ್ಟ್ಯಾಂಡರ್, ಅಕ್ಷಯ್, ನಂದನ್, ಶಿವರತ್ನ, ಬಸಮ್ಮ, ಚೈತ್ರ, ಅರುಣ್ ಕುಮಾರ್, ಮಂಜುನಾಥ್, ಯೋಗೇಶ್, ದೇವರಾಜ್, ಪ್ರಸನ್ನ, ಚೇತನ್, ಗೀತಾ, ಸರಿತಾ, ಶಿವರಾಜ್, ಇತರರು ಹಾಜರಿದ್ದರು.