ಸಾರಾಂಶ
ಅಧ್ಯಕ್ಷರಾಗಿ ಸಿ. ಡಿ. ಅಶೋಕ್, ಉಪಾಧ್ಯಕ್ಷರಾಗಿ ಆಶಾರಾಣಿ ಅವಿರೋಧವಾಗಿ ಆಯ್ಕೆಯಾದರೆ, ಕೃಷ್ಣೇಗೌಡ, ಬಿ.ಕೆ.ಗಿರೀಶ್, ಜಯರಾಮ್ ಧರ್ಮಪುರಿ, ಶಾರದಮ್ಮ, ವೆಂಕಟೇಶ್, ಮಧುಕುಮಾರ್, ಎಸ್.ಎನ್.ಮಂಜೇಗೌಡ, ಸಿ.ಎಂ.ಪಾಲಾಕ್ಷ, ಇವರು ಸಂಘದ ನಿರ್ದೇಶಕರಾಗಿ ಆಯ್ಕೆಯಾದರು.
ಆಲೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಜೀವನಾಡಿಯಾಗಿದ್ದು, ಪ್ರಸ್ತುತ ದಿನಗಳಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಿಗೆ ತೀವ್ರ ಪೈಪೋಟಿ ನೀಡುತ್ತಿವೆ. ಇಂತಹ ಸಂದರ್ಭದಲ್ಲಿ ಸಾರ್ವಜನಿಕರು ಸಂಘಗಳ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರ ನೀಡಬೇಕು ಎಂದು ಹಾಸನ ಜಿಲ್ಲಾ ಎಚ್ ಡಿಸಿಸಿ ಬ್ಯಾಂಕ್ ನಿರ್ದೇಶಕ ಕಬ್ಬಿನಹಳ್ಳಿ ಜಗದೀಶ್ ಅಭಿಪ್ರಾಯಪಟ್ಟರು.
ತಾಲೂಕಿನ ಬೈರಾಪುರ ಗ್ರಾಮದಲ್ಲಿ ನೂತನವಾಗಿ ಆರಂಭಗೊಂಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ, ನೂತನ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಆಯ್ಕೆಗೊಂಡ ಅಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಈ ಭಾಗದ ರೈತರು ತಮ್ಮ ಕೆಲಸ- ಕಾರ್ಯಗಳನ್ನು ಬಿಟ್ಟು ದಿನಪೂರ್ತಿ ಆಲೂರು ಪಟ್ಟಣದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಜೊತೆ ವ್ಯವಹರಿಸಬೇಕಾದ ಪರಿಸ್ಥಿತಿ ಇದ್ದುದ್ದರಿಂದ ಜನಸಾಮಾನ್ಯರಿಗೆ ಅನುಕೂಲವಾಗಲೆಂದು ಬೈರಾಪುರ ಗ್ರಾಮದಲ್ಲಿ ಹೊಸದಾಗಿ ಪ್ರಾಥಾಮಿಕ ಕೃಷಿ ಪತ್ತಿನ ಸಹಕಾರ ಸಂಘ ತೆರೆಯಲಾಗಿದೆ. ಈ ಭಾಗದ ರೈತರು ಇನ್ನು ಮುಂದೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ವ್ಯವಹರಿಸಬೇಕು, ಕೃಷಿ ಪತ್ತಿನ ಸಹಕಾರ ಸಂಘಗಳಿಂದ ರೈತರಿಗೆ ಅಪಾರ ಅನುಕೂಲವಿದೆ, ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಸರ್ಕಾರ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುತ್ತಿದ್ದು, ಅದನ್ನು ರೈತರು ಕೃಷಿ ಚಟುವಟಿಕೆಗಳಿಗೆ ಮಾತ್ರ ಬಳಸಿಕೊಳ್ಳಬೇಕು. ರೈತರು ತೆಗೆದುಕೊಂಡ ಸಾಲವನ್ನು ಸಕಾಲಕ್ಕೆ ಮರುಪಾವತಿ ಮಾಡಿ ಸಂಘದ ಪ್ರಗತಿಗೆ ಸಹಕರಿಸಬೇಕು ಎಂದರು.ಅಧ್ಯಕ್ಷರಾಗಿ ಸಿ. ಡಿ. ಅಶೋಕ್, ಉಪಾಧ್ಯಕ್ಷರಾಗಿ ಆಶಾರಾಣಿ ಅವಿರೋಧವಾಗಿ ಆಯ್ಕೆಯಾದರೆ, ಕೃಷ್ಣೇಗೌಡ, ಬಿ.ಕೆ.ಗಿರೀಶ್, ಜಯರಾಮ್ ಧರ್ಮಪುರಿ, ಶಾರದಮ್ಮ, ವೆಂಕಟೇಶ್, ಮಧುಕುಮಾರ್, ಎಸ್.ಎನ್.ಮಂಜೇಗೌಡ, ಸಿ.ಎಂ.ಪಾಲಾಕ್ಷ, ಇವರು ಸಂಘದ ನಿರ್ದೇಶಕರಾಗಿ ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆಯಲ್ಲಿ ಚುನಾವಣಾ ಅಧಿಕಾರಿ ಕುಮಾರ್ ಹಾಗೂ ಎಚ್‌ಡಿಸಿಸಿ ಬ್ಯಾಂಕ್ ವಿಸ್ತರಣಾಧಿಕಾರಿ ರಾಘವೇಂದ್ರ ಭಾಗವಹಿಸಿದ್ದರು.