ಸಾರಾಂಶ
ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ಹೊಸ ಅಂಗಣ ಮಾಸ ಪತ್ರಿಕೆಯ ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮ ನಡೆಯಿತು.
ಕನ್ನಡಪ್ರಭವಾರ್ತೆ ಮೂಲ್ಕಿ
ಗ್ರಾಮೀಣ ಕ್ಷೇತ್ರದಲ್ಲಿ ತೆರೆಮರೆಯಲ್ಲಿರುವ ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯ ಅಭಿನಂದನೀಯ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಹೇಳಿದರು.ಮೂಲ್ಕಿ ಪುನರೂರು ಟೂರಿಸ್ಟ್ ಹೋಮ್ ಸಭಾಂಗಣದಲ್ಲಿ ನಡೆದ ಹೊಸ ಅಂಗಣ ಮಾಸ ಪತ್ರಿಕೆಯ ಹೊಸ ಅಂಗಣ ತಿಂಗಳ ಬೆಳಕು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಾಧಕರ ನೆಲೆಯಲ್ಲಿ ದೈವ ನರ್ತಕ ಕಿಟ್ಟ ಪಂಬದ ಅವರನ್ನು ಗೌರವಿಸಲಾಯಿತು. ಬ್ಯಾಂಕ್ ಆಫ್ ಬರೋಡ ಮೂಲ್ಕಿ ಶಾಖೆಯ ಶಾಖಾಧಿಕಾರಿ ಸಚಿನ್ ಹೆಗ್ಡೆ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಸ್ಥಾಪಕಾಧ್ಯಕ್ಷ ವೆಂಕಟೇಶ ಹೆಬ್ಬಾರ್, ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಮೂಲ್ಕಿ ನ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷರಾಜ ಶೆಟ್ಟಿ, ಅತಿಕಾರಿಬೆಟ್ಟು ಗ್ರಾ.ಪಂ. ಉಪಾಧ್ಯಕ್ಷ ಮನೋಹರ ಕೋಟ್ಯಾನ್, ಪ್ರತಿಭಾ ಹೆಬ್ಬಾರ್, ಜೆಸಿ ಟ್ರಸ್ಟ್ ನ ಅಧ್ಯಕ್ಷ ಹಬಿಬುಲ್ಲ, ಉದ್ಯಮಿ ಜೋನ್ ಕ್ವಾಡ್ರಾಸ್, ಹೊಸ ಅಂಗಣದ ಡಾ.ಹರಿಶ್ಚಂದ್ರ ಪಿ ಸಾಲ್ಯಾನ್, ವಾಸು ಪೂಜಾರಿ ಚಿತ್ರಾಪು, ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ ನಡಿಕುದ್ರು, ನಂದಾ ಪಾಯಸ್ ಮತ್ತಿತರರು ಉಪಸ್ಥಿತರಿದ್ದರು.ಹರಿಶ್ಚಂದ್ರ ಸಾಲ್ಯಾನ್ ಸ್ವಾಗತಿಸಿದರು. ರವೀಶ್ ಕಾಮತ್ ವಂದಿಸಿದರು. ಅಶೋಕ್ ಶೆಟ್ಟಿ ನಿರೂಪಿಸಿದರು.