ಹರಪನಹಳ್ಳಿ ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷರೂ ಟಿಎಂಎಇ ಸೊಸೈಟಿಯ ಅಧ್ಯಕ್ಷರೂ ಆಗಿರುವ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಭಾರತೀಯ ಪಾರಂಪರಿಕ ವೈದ್ಯ ಪದ್ಧತಿಯಾದ ಆಯುರ್ವೇದ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸುಮಾರು 15 ಕೋಟಿ ರು. ವೆಚ್ಚದಲ್ಲಿ ಟಿಎಂಎಇಎಸ್ ಆಯುರ್ವೇದ ಕಾಲೇಜಿನ ನೂತನ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಹರಪನಹಳ್ಳಿ ತೆಗ್ಗಿನಮಠ ಸಂಸ್ಥಾನದ ಪೀಠಾಧ್ಯಕ್ಷರೂ ಟಿಎಂಎಇ ಸೊಸೈಟಿಯ ಅಧ್ಯಕ್ಷರೂ ಆಗಿರುವ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿ ಭಾರತೀಯ ಪಾರಂಪರಿಕ ವೈದ್ಯ ಪದ್ಧತಿಯಾದ ಆಯುರ್ವೇದ ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಸುಮಾರು 15 ಕೋಟಿ ರು. ವೆಚ್ಚದಲ್ಲಿ ಟಿಎಂಎಇಎಸ್ ಆಯುರ್ವೇದ ಕಾಲೇಜಿನ ನೂತನ ಸುಸಜ್ಜಿತ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಟಿಎಂಎಇಎಸ್ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಜಿ.ಎ.ಹಿರೇಮಠ ತಿಳಿಸಿದರು.ತಾಲೂಕಿನ ನಿದಿಗೆಯಲ್ಲಿರುವ ಟಿಎಂಎಇಎಸ್ ಆಯುರ್ವೇದ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ಏ.24ರ ಶುಕ್ರವಾರ ಬೆಳಿಗ್ಗೆ ಶ್ರೀ ವರಸದ್ಯೋಜಾತ ಶಿವಾಚಾರ್ಯ ಸ್ವಾಮೀಜಿಯವರ 33ನೇ ವರ್ಧಂತ್ಯುತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಉಚಿತ ಚಿಕಿತ್ಸಾ ಶಿಬಿರ ಉದ್ಘಾಟಿಸಿ ಮಾತನಾಡಿ, ಅಕ್ಷರ ದಾಸೋಹಿಗಳು ಹಾಗೂ ಶೈಕ್ಷಣಿಕ ಕ್ಷೇತ್ರದ ಹರಿಕಾರರು ಆಗಿರುವ ಶ್ರೀ ವರಸದ್ಯೋಜಾತ ಶಿವಾಚಾರ್ಯರು ಧರ್ಮ ಮತ್ತು ತತ್ವ ಜಾಗೃತಿ, ಶಿಕ್ಷಣ ಹಾಗೂ ಜ್ಞಾನ ಪ್ರಸಾರ, ಗುರು-ವಿರಕ್ತ ಪರಂಪರೆ ಸೇರಿದಂತೆ ಒಟ್ಟಾರೆಯಾಗಿ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಕಂಕಣಬದ್ಧರಾಗಿದ್ದಾರೆ. ಟಿಎಂಎಇಎಸ್ ಸಂಸ್ಥೆಯ ಮೂಲಕ ಇವರು ನಾಡಿನಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಉಂಟು ಮಾಡುತ್ತಿದ್ದಾರೆ ಎಂದರು.
ಟಿಎಂಎಇಎಸ್ ವತಿಯಿಂದ ರಾಜ್ಯದ ಏಳು ಜಿಲ್ಲೆಗಳಲ್ಲಿ 72 ವಿದ್ಯಾಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಈವರೆಗೆ ಈ ವಿದ್ಯಾಸಂಸ್ಥೆಗಳ ಮೂಲಕ ಒಂದು ಲಕ್ಷದ 80 ಸಾವಿರಕ್ಕೂ ಕ್ಕೂ ಅಧಿಕ ವಿದ್ಯಾರ್ಥಿಗಳು ಶಿಕ್ಷಣ ಪೂರೈಸಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅಲ್ಲದೆ 18 ಸಾವಿರದಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.ಪ್ರಾಂಶುಪಾಲ ರುದ್ರಾಂಬಿಕ ಬಿರಾದಾರ್, ಉಪ ಪ್ರಾಂಶುಪಾಲ ಡಾ. ಸದಾನಂದ ಜೋಶಿ, ಡಾ.ಎಸ್.ವಿ. ಪ್ರಶಾಂತ್, ಡಾ. ರಮ್ಯಾ, ಡಾ. ಮಲ್ಲಿಕಾ ನಡುಮನಿ, ಡಾ.ಎಂ.ಎಲ್.ಅಶೋಕ್, ಆರ್‌ಎಂಒ ಡಾ.ಶುಕ್ಲದಾಸ್, ಸಂತೋಷ್ ಕುಮಾರ್ ವಿ., ಡಾ.ಅರ್ಪಿತ, ಡಾ. ಅನುಷಾ, ಡಾ.ತೀರ್ಥಶ್ರೀ, ಡಾ.ಯಶೋಧ, ರೂಪ, ರೇಖಾ ಮತ್ತಿತರರು ಹಾಜರಿದ್ದರು.