ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು ಅವರಿಂದ ಶಾಸಕರಿಗೆ ಅಭಿನಂದನೆ

| Published : Sep 06 2024, 01:03 AM IST

ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚೆಲುವರಾಜು ಅವರಿಂದ ಶಾಸಕರಿಗೆ ಅಭಿನಂದನೆ
Share this Article
  • FB
  • TW
  • Linkdin
  • Email

ಸಾರಾಂಶ

ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೆನೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ಮದ್ದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ತೈಲೂರು ಚೆಲುವರಾಜು ಬುಧವಾರ ಶಿವಪುರ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಕೆ.ಎಂ.ಉದಯ್ ಅವರನ್ನು ಅಭಿನಂದಿಸಿದರು.

ಅಭಿನಂದನೆ ಸ್ವೀಕರಿಸಿದ ಶಾಸಕ ಕೆ.ಎಂ.ಉದಯ್ ಮಾತನಾಡಿ, ಚೆಲುವರಾಜುರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಅಯ್ಕೆ ಮಾಡಿದ್ದು, ಪಕ್ಷದ ಬಲವರ್ಧನೆಗೆ ಹಗಲಿರುಳು ಶ್ರಮಿಸಿ ಪಕ್ಷ ಸಂಘಟನೆ ಮುಂದಾಗುವಂತೆ ಕಿವಿಮಾತು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು ಮಾತನಾಡಿ, ಪಕ್ಷದ ಸಂಘಟನೆಗಾಗಿ ಪ್ರಾಮಾಣಿಕವಾಗಿ ದುಡಿಯುತ್ತೇನೆ. ಪಕ್ಷದ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತೆನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಾಂತ ಕೃಷಿಕೂಲಿಕಾರರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್, ಮುಖಂಡರಾದ ಸೋಮಣ್ಣ, ಕೃಷ್ಣ, ಅಣ್ಣಯ್ಯ, ವಾಸು, ಶಿವಪ್ಪ, ಅಂಕಪ್ಪ, ಪುಟ್ಟಪ್ಪ, ಶ್ರೀನಿವಾಸ್, ಬಸವ, ಗುರು ಇದ್ದರು.ಕಪ್ಪು ತಲೆ ಹುಳುವಿನ ನಿಯಂತ್ರಣ ಕುರಿತು ತರಬೇತಿ

ಮದ್ದೂರು: ತಾಲೂಕಿನ ತೈಲೂರು ಗ್ರಾಮದ ತೈಲೂರಮ್ಮ ದೇವಸ್ಥಾನದ ಆವರಣದಲ್ಲಿ ಸೆ.11ರಂದು ಬೆಳಗ್ಗೆ 11 ಗಂಟೆಗೆ ಕಪ್ಪು ತಲೆ ಹುಳು ಬಾಧಿತ ತೆಂಗಿನ ತೋಟದ ರೈತರಿಗೆ ಇಲಾಖೆ ವತಿಯಿಂದ ಕಪ್ಪು ತಲೆ ಹುಳುವಿನ ನಿಯಂತ್ರಣ ಕುರಿತು ತರಬೇತಿ ನೀಡಿ ಉಚಿತವಾಗಿ ಬೇವಿನ ಎಣ್ಣೆಯನ್ನು ವಿತರಿಸುವ ಕಾರ್ಯಕ್ರಮವನ್ನು ಶಾಸಕ ಕೆ.ಎಂ.ಉದಯ್ ನೇತತ್ವದಲ್ಲಿ ಹಮ್ಮಿಕೊಳ್ಳಲಾಗಿದೆ. ಕೋಡಿಹಳ್ಳಿ, ಅಗರಲಿಂಗನ ದೊಡ್ಡಿ, ತೈಲೂರು,ಬೂದುಗುಪ್ಪೆ, ಮಾದನಾಯಕನಹಳ್ಳಿ, ರುದ್ರಾಕ್ಷಿಪುರ, ನಿಡಘಟ್ಟ ಗ್ರಾಮದ ರೈತರು ತರಬೇತಿ ಕಾರ್ಯಕ್ರಮದಲ್ಲಿ ಹಾಜರಾಗುವಂತೆ ಹಾಗೂ ಬರುವಾಗ ಆಧಾರ್ ಕಾರ್ಡ್ ತ್ತು ಆರ್ ಟಿ ಸಿ ಯನ್ನು ತಪ್ಪದೆ ತರುವಂತೆ ರೈತರಲ್ಲಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಕೆ.ಎಂ.ರೇಖಾ ಮನವಿ ಮಾಡಿದ್ದಾರೆ.

ಕೆಆರ್ ಎಸ್ ನೀರಿನ ಮಟ್ಟ

ಗರಿಷ್ಠ ಮಟ್ಟ - 124.80 ಅಡಿ

ಇಂದಿನ ಮಟ್ಟ – 124.46 ಅಡಿ

ಒಳ ಹರಿವು – 15,597 ಕ್ಯುಸೆಕ್

ಹೊರ ಹರಿವು – 15,064 ಕ್ಯುಸೆಕ್

ನೀರಿನ ಸಂಗ್ರಹ – 48.977 ಟಿಎಂಸಿ