ಕಾಪು: ಇಲ್ಲಿನ ಪಡುಬೆಳ್ಳೆ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಗೆ ರಿಲಯನ್ಸ್ ಫೌಂಡೇಶನ್ ವತಿಯಿಂದ ಶುಕ್ರವಾರ ನೂತನ ಬಸ್ ಹಸ್ತಾಂತರ ಕಾರ್ಯಕ್ರಮ ಜರುಗಿತು

ಕಾಪು: ಇಲ್ಲಿನ ಪಡುಬೆಳ್ಳೆ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಗೆ ರಿಲಯನ್ಸ್ ಫೌಂಡೇಶನ್ ವತಿಯಿಂದ ಶುಕ್ರವಾರ ನೂತನ ಬಸ್ ಹಸ್ತಾಂತರ ಕಾರ್ಯಕ್ರಮ ಜರುಗಿತು. ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಉಪಾಧ್ಯಕ್ಷ ಮೋಹನ್ ಸಿ. ಕೊಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಮುಂಬೈ ಕಸ್ಟಮ್ ಕ್ಲಿಯರೆನ್ಸ್ ವಿಭಾಗದ ಹಿರಿಯ ವ್ಯವಸ್ಥಾಪಕ ದಯಾನಂದ ಸಿ. ಕೊಟ್ಯಾನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ತಮ್ಮ ಜವಾಬ್ದಾರಿಗಳನ್ನು ಅರಿತು ಬಾಳಿ ಮುಂದೆ ಸಮಾಜದಲ್ಲಿ ಉತ್ತಮ ಸ್ಥಾನಮಾನ ಗಳಿಸಿ ಎಂದು ಶುಭ ಹಾರೈಸಿದರು.

ಮುಂಬಯಿಯ ಚಾರ್ಟಡ್ ಅಕೌಂಟೆಂಟ್ ಜಯಂತ ಪೂಜಾರಿ ಶುಭ ಹಾರೈಸಿದರು. ಶಾಲಾಡಳಿತ ಸಮಿತಿಯ ಸದಸ್ಯ ಶಿವಾಜಿ ಎಸ್. ಸುವರ್ಣ ಬೆಳ್ಳೆ, ಕಟಪಾಡಿ ಶಂಕರ ಪೂಜಾರಿ, ಪ್ರಕಾಶ್ ಪಾಲಮೆ, ಗೀತಾ ವಾಗ್ಲೆ, ಸುರೇಶ್ ಪೂಜಾರಿ ಉಪಸ್ಥಿರಿದ್ದರು. ಸಮಾರಂಭದಲ್ಲಿ ನಿರಂಜನ್ ಕರ್ಕೇರಾ ಹೆಜಮಾಡಿ, ನವೀನ್ ಕೊಟ್ಯಾನ್ ಹೆಜಮಾಡಿ, ಶರತ್ ಕುಮಾರ್, ನಿರಂಜನ್ ಪೂಜಾರಿ, ಕೃಷ್ಣಪ್ಪ ಪೂಜಾರಿ, ವಾರೀಜಾ ಸಾಲಿಯಾನ್, ಪ್ರಸಾದ್ ಭಂಡಾರಿ ಉಪಸ್ಥಿತರಿದ್ದರು. ಆಂಗ್ಲ ಮಾಧ್ಯಮದ ಮುಖ್ಯ ಶಿಕ್ಷಕ ರಾಘವೇಂದ್ರ ಸಾಲಿಯಾನ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಿಕ್ಷಕಿಯರಾದ ವೀಣಾ ನಾಯಕ್, ದೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಕನ್ನಡ ಮಾಧ್ಯಮ ಪ್ರೌಢ ಶಾಲೆ ಮುಖ್ಯ ಶಿಕ್ಷಕಿ ಉಷಾ ಎಸ್. ವಂದಿಸಿದರು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ, ಪೋಷಕರು ಉಪಸ್ಥಿತರಿದ್ದರು.