ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರನ್ನು ವರ್ಗಾವಣೆಗೆ ಬಹುತೇಕ ಖಚಿತವಾಗಿದ್ದು, ಶೀಘ್ರದಲ್ಲಿ ಬಿಬಿಎಂಪಿಗೆ ನೂತನ ಮುಖ್ಯ ಆಯುಕ್ತರ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಲಿದೆ.

 ಬೆಂಗಳೂರು : ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರನ್ನು ವರ್ಗಾವಣೆಗೆ ಬಹುತೇಕ ಖಚಿತವಾಗಿದ್ದು, ಶೀಘ್ರದಲ್ಲಿ ಬಿಬಿಎಂಪಿಗೆ ನೂತನ ಮುಖ್ಯ ಆಯುಕ್ತರ ನೇಮಕಗೊಳಿಸಿ ರಾಜ್ಯ ಸರ್ಕಾರ ಆದೇಶಿಸಲಿದೆ.

2022ರ ಮೇ 6ರಂದು ಬಿಬಿಎಂಪಿಯ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್‌ ಅಧಿಕಾರ ವಹಿಸಿಕೊಂಡಿದ್ದರು. ಇದೀಗ ಮೂರು ವರ್ಷ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವರ್ಗಾವಣೆಗೆ ಸರ್ಕಾರ ಮುಂದಾಗಿದೆ. ಬಿಬಿಎಂಪಿಯ ಮುಖ್ಯ ಆಯುಕ್ತರ ಹುದ್ದೆಗೆ ನೂತನ ಅಧಿಕಾರಿ ನೇಮಕಗೊಳಿಸುವ ಕುರಿತು ಸರ್ಕಾರದ ಮಟ್ಟದಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.

ಬಿಎಂಆರ್‌ಸಿಎಲ್‌ (ನಮ್ಮ ಮೆಟ್ರೋ) ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್‌ ರಾವ್‌, ಸಮಾಜಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್‌ ಹಾಗೂ ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್‌ ಕುಮಾರ್ ಪಾಂಡೆ ಅವರ ಪೈಕಿ ಒಬ್ಬರು ನೂತನ ಮುಖ್ಯ ಆಯುಕ್ತರಾಗಿ ನೇಮಕವಾಗಲಿದ್ದಾರೆ ಎನ್ನಲಾಗಿದೆ.

ನಗರಾಭಿವೃದ್ಧಿ ಇಲಾಖೆಗೆ ತುಷಾರ್‌ ಗಿರಿನಾಥ್‌?

ಇನ್ನು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್‌ ಅವರು ತಿಂಗಳಾಂತ್ಯಕ್ಕೆ ನಿವೃತ್ತಿ ಹೊಂದಲಿದ್ದಾರೆ. ಆ ಹುದ್ದೆಗೆ ತುಷಾರ್‌ ಗಿರಿನಾಥ್‌ ಅವರನ್ನು ನಿಯೋಜಿಸಲಾಗುತ್ತದೆ. ಹೆಚ್ಚುವರಿಯಾಗಿ ಬಿಬಿಎಂಪಿಯ ಆಡಳಿತಾಧಿಕಾರಿಯ ಜವಾಬ್ದಾರಿಯನ್ನು ನೀಡಲಾಗುತ್ತದೆ ಎಂದು ತಿಳಿದು ಬಂದಿದೆ.

ಮುಖ್ಯ ಆಯುಕ್ತ ರೇಸ್‌ನಲ್ಲಿ

ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್‌

-ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್‌

-ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್‌ ಕುಮಾರ್ ಪಾಂಡೆ