5 ರಂದು ರಾಮದುರ್ಗದ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ

| Published : Apr 02 2025, 01:01 AM IST

5 ರಂದು ರಾಮದುರ್ಗದ ನ್ಯಾಯಾಲಯದ ನೂತನ ಕಟ್ಟಡ ಉದ್ಘಾಟನೆ
Share this Article
  • FB
  • TW
  • Linkdin
  • Email

ಸಾರಾಂಶ

ರಾಮದುರ್ಗದ ನ್ಯಾಯಾಲಯಗಳ ನೂತನ ಕಟ್ಟಡದ ಉದ್ಘಾಟನೆ ಏ.5 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ಈ ಕಾರ್ಯಕ್ರಮದ ಯಶಸ್ವಿಗೆ ತಾಲೂಕಿನ ಅಧಿಕಾರಿಗಳು ಸಹಕಾರ ನಡಬೇಕು ಎಂದು ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಬಿ.ಟಿ.ಅನ್ನಪೂರ್ಣೇಶ್ವರಿ ಮತ್ತು ಜೆಎಂಎಫ್‌ಸಿ ದಿವಾಣಿ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಬಾಣಕಾರ ಹೇಳಿದರು.

ಕನ್ನಡಪ್ರಭ ವಾರ್ತೆ ರಾಮದುರ್ಗ

ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸವದತ್ತಿ ರಸ್ತೆಯಲ್ಲಿ ನಿರ್ಮಿಸಿರುವ ನ್ಯಾಯಾಲಯದ ಆವರಣದಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ರಾಜ್ಯ ಉಚ್ಛನ್ಯಾಯಾಲಯದ ನ್ಯಾಯಾಧೀಶರು, ಕಾನೂನು ಸಚಿವರು ಸೇರಿದಂತೆ ಹಲವಾರು ಗಣ್ಯರು ಆಗಮಿಸುವ ಕಾರ್ಯಕ್ರಮ ಯಶಸ್ವಿಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಎಪಿಪಿಗಳಾದ ಎಸ್.ಎಂ.ಜಂಬನವರ, ಡಿ.ಎಂ.ನದಾಪ, ತಹಸೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ, ಇಒ ಬಸವರಾಜ ಐನಾಪೂರ, ನ್ಯಾಯವಾದಿಗಳ ಸಂಘದ ಅಧ್ಯಕ್ಷ ರಮೇಶ ಹಲ್ಯಾಳ, ಕಾರ್ಯದರ್ಶಿ ವಿ.ಬಿ.ಸಿದ್ಧಾಟಗಿಮಠ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.