ಸಾರಾಂಶ
ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಆಗಿ ನೇಮಕಗೊಂಡಿರುವ ಗುರುದತ್ತ ಹೆಗಡೆ ಬುಧವಾರ ಅಧಿಕಾರ ವಹಿಸಿಕೊಂಡರು. ಬೆಳಗ್ಗೆ ಅಧಿಕಾರ ಸ್ವೀಕರಿಸಿದ ಬಳಿಕ ಕಚೇರಿಯ ಎಲ್ಲ ವಿಭಾಗಕ್ಕೂ ಭೇಟಿ ನೀಡಿ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಜಿಲ್ಲೆಯ ಎಲ್ಲ ಇಲಾಖೆ ಅಧಿಕಾರಿಗಳು ಡಿಸಿ ಗುರುದತ್ತ ಹೆಗಡೆ ಅವರಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಆಗಿ ನೇಮಕಗೊಂಡಿರುವ ಗುರುದತ್ತ ಹೆಗಡೆ ಅವರು ಬುಧವಾರ ಅಧಿಕಾರ ವಹಿಸಿಕೊಂಡರು. ಬೆಳಗ್ಗೆ ಅಧಿಕಾರ ಸ್ವೀಕರಿಸಿದ ಬಳಿಕ ಕಚೇರಿಯ ಎಲ್ಲ ವಿಭಾಗಕ್ಕೂ ಭೇಟಿ ನೀಡಿ ಸಿಬ್ಬಂದಿಯಿಂದ ಮಾಹಿತಿ ಪಡೆದರು.ಜಿಲ್ಲೆಯ ಎಲ್ಲ ಇಲಾಖೆ ಅಧಿಕಾರಿಗಳು ಡಿಸಿ ಗುರುದತ್ತ ಹೆಗಡೆ ಅವರಿಗೆ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಶಿವಲಿಂಗಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ಜಿ.ಪಂ. ಸಿಇಒ ಸ್ನೇಹಲ್ ಸುಧಾಕರ್ ಲೋಖಂಡೆ, ಪಾಲಿಕೆ ಆಯುಕ್ತ ಮಾಯಣ್ಣಗೌಡ ಮತ್ತಿತರರು ಶುಭ ಕೋರಿದರು.
ಗುರುದತ್ ಹೆಗಡೆ ಅವರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹೊನ್ನೆಗದ್ದೆ ಗ್ರಾಮದವರು. 2014ರಲ್ಲಿ ಕೇಂದ್ರ ಲೋಕಸೇವಾ ಆಯೋಗ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಭಾರತೀಯ ಆಡಳಿತ ಸೇವೆಗೆ ಆಯ್ಕೆಯಾಗಿದ್ದರು. ಹುಬ್ಬಳ್ಳಿರುವ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯೊಂದಿಗೆ ಹೆಚ್ಚುವರಿಯಾಗಿ ವಾಯುವ್ಯ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. 2022ರಲ್ಲಿ ಧಾರವಾಡ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದರು. ಈಗ ಶಿವಮೊಗ್ಗಕ್ಕೆ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ.- - - -31ಎಸ್‌ಎಂಜಿಕೆಪಿ06:
ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರನ್ನು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ಪುಷ್ಪಗುಚ್ಛ ನೀಡಿ ಸ್ವಾಗತಿಸಿದರು.