ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸ್ವರೂಪ ಟಿ.ಕೆ. ಮತ್ತು ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವತಿಯಿಂದ ಭೇಟಿ ನೀಡಿ ಶುಭ ಕೋರಲಾಯಿತು.ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯದ ಪರವಾಗಿ ಧರ್ಮಾಧ್ಯಕ್ಷರಾದ ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ಅವರ ಶುಭಾಶಯ ಮತ್ತು ಆಶೀರ್ವಾದಗಳನ್ನು ತಿಳಿಸಿದ ನಿಯೋಗ ಧರ್ಮಪ್ರಾಂತ್ಯದ ವತಿಯಿಂದ ಸರ್ವ ರೀತಿಯ ಸಹಕಾರದ ಭರವಸೆಯನ್ನು ನೀಡಿದರು.ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಜಿಲ್ಲೆಗೆ ನೂತನವಾಗಿ ಅಧಿಕಾರ ಸ್ವೀಕರಿಸಿದ್ದು ಕ್ರೈಸ್ತ ಸಮುದಾಯದ ಸಂಸ್ಥೆಗಳ ಕುರಿತು ಮಾಹಿತಿ ಪಡೆದು ಯಾವುದೇ ರೀತಿಯಲ್ಲಿ ಸಹಕಾರ ಬೇಕಾದಲ್ಲಿ ಜಿಲ್ಲಾಡಳಿತದಿಂದ ಸ್ಪಂದಿಸಲಾಗುವುದು. ಜಿಲ್ಲೆಯ ಅಭಿವೃದ್ಧಿಗೆ ಸಮುದಾಯದ ಸಹಕಾರವನ್ನು ಜಿಲ್ಲಾಧಿಕಾರಿ ಕೋರಿದರು.ನಿಯೋಗದಲ್ಲಿ ಧರ್ಮಪ್ರಾಂತ್ಯದ ಕುಲಪತಿಗಳಾದ ವಂ| ಸ್ಟೀವನ್ ಡಿಸೋಜಾ, ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ ವಂ.ಡೆನಿಸ್ ಡೆಸಾ ಹಾಗೂ ಭಾರತೀಯ ಕ್ರೈಸ್ತ ಒಕ್ಕೂಟದ ರಾಜ್ಯಾಧ್ಯಕ್ಷ ಮತ್ತು ಕ್ರೈಸ್ತ ಅಭಿವೃದ್ಧಿ ನಿಗಮದ ನಿರ್ದೇಶಕ ಪ್ರಶಾಂತ್ ಜತ್ತನ್ನ ಉಪಸ್ಥಿತರಿದ್ದರು.ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದಿಂದ ನೂತನ ಜಿಲ್ಲಾಧಿಕಾರಿ ಭೇಟಿ
ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸ್ವರೂಪ ಟಿ.ಕೆ. ಮತ್ತು ನೂತನ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಉಡುಪಿ ಕ್ರೈಸ್ತ ಧರ್ಮಪ್ರಾಂತ್ಯದ ವತಿಯಿಂದ ಭೇಟಿ ನೀಡಿ ಶುಭ ಕೋರಲಾಯಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.