ಚಿಕ್ಕಮಗಳೂರುಚಿಕ್ಕಮಗಳೂರಿನ ನೂತನ ಜಿಲ್ಲಾಧಿಕಾರಿಯಾಗಿ ಭನ್ವರ್ ಸಿಂಗ್ ಮೀನಾ ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅಧಿಕಾರ ಹಸ್ತಾಂತರಿಸಿದರು.

ನಿರ್ಗಮಿತ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್‌ ರಿಂದ ಅಧಿಕಾರಿ ಹಸ್ತಾಂತರ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ಚಿಕ್ಕಮಗಳೂರಿನ ನೂತನ ಜಿಲ್ಲಾಧಿಕಾರಿಯಾಗಿ ಭನ್ವರ್ ಸಿಂಗ್ ಮೀನಾ ಬುಧವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅಧಿಕಾರ ಹಸ್ತಾಂತರಿಸಿದರು.

ಬುಧವಾರ ಮಧ್ಯಾಹ್ನ 3.30 ಸುಮಾರಿಗೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೂತ ಜಿಲ್ಲಾಧಿಕಾರಿ ಭನ್ವರ್‌ ಸಿಂಗ್‌ ಮೀನಾ ಅವರಿಗೆ ಹೂ ಗುಚ್ಛಾ ನೀಡಿದ ಸ್ವಾಗತಿಸಿದ ನಿರ್ಗಮಿತ ಜಿಲ್ಲಾಧಿಕಾರಿ ಎನ್‌.ಎಂ.ನಾಗರಾಜ್‌, ಅಧಿಕಾರಿ ಹಸ್ತಾಂತರದ ಪ್ರಕ್ರಿಯೆ ಪೂರ್ಣಗೊಳಿಸಿದರು.

ಅಧಿಕಾರ ಸ್ವೀಕಾರದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಮೀನಾ, ಜಿಲ್ಲೆಯಲ್ಲಿ ಉತ್ತಮ ಆಡಳಿತ ನೀಡುವುದು ಮೊದಲ ಆದ್ಯತೆಯಾಗಿದೆ. ಜಿಲ್ಲೆಯ ಅಭಿವೃದ್ಧಿಗಾಗಿ ಸಿಇಒ, ಡಿಎಫ್‌ಒ ಮತ್ತು ಎಸ್ಪಿ ಅವರನ್ನೊಳಗೊಂಡ ಉತ್ತಮ ತಂಡದೊಂದಿಗೆ, ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಟಿಸಿದರು.

ಪ್ರವಾಸೋದ್ಯಮಕ್ಕೆ ಇನ್ನಷ್ಟು ಬಲಜಿಲ್ಲೆಯಲ್ಲಿ ಪ್ರವಾಸೋದ್ಯಮದಲ್ಲಿ ಹೊಸ ಸಾಧ್ಯತೆಗಳ ಬಗ್ಗೆ ಸಮಾಲೋಚಿಸಿ ಕಾರ್ಯಗತಗೊಳಿಸಲು ಕ್ರಮ ವಹಿಸ ಲಾಗುವುದು. ಇದಲ್ಲದೆ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಬೇರೆ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಬಗೆಹರಿಸಲು ಪ್ರಥಮ ಆದ್ಯತೆ ನೀಡಿ ಅಬಿವೃದ್ಧಿ ಒತ್ತು ನೀಡಲಾಗುವುದು. ಜಿಲ್ಲೆಯಲ್ಲಿ ಉತ್ತಮ ಆಡಳಿತಕ್ಕೆ ಆದ್ಯತೆ ನೀಡುವುದರ ಜತೆಗೆ ಇ-ಆಫೀಸ್ ವ್ಯವಸ್ಥೆಯನ್ನು ಅಧಿಕಗೊಳಿಸುವ ಉದ್ದೇಶ ಹೊಂದಿರುವುದಾಗಿ ವಿವರಿಸಿದರು.-- ಕೋಟ್‌---

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಲ್ಪ ಕಾಲ ಕಾರ್ಯನಿರ್ವಹಿಸಿರಬಹುದು. ಆದರೆ ಇಲ್ಲಿ ಉತ್ತಮವಾಗಿ ಕೆಲಸ ಮಾಡಿದ ಸಂತೋಷವಿದೆ. ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆ ಸರ್ವೇಸಾಮಾನ್ಯ. ಹೊಸದಾಗಿ ಬಂದಿರುವ ಜಿಲ್ಲಾಧಿಕಾರಿಗಳು ಜನರ ಆಶೋತ್ತರಗಳಿಗೆ ಪೂರಕವಾಗಿ ಕಾರ್ಯನಿರ್ವಹಿಸಲಿದ್ದಾರೆ.

- ಎನ್‌.ಎಂ.ನಾಗರಾಜ್‌. ನಿರ್ಗಮಿತ ಜಿಲ್ಲಾಧಿಕಾರಿ

----ಬಾಕ್ಸ್‌----

ಮೊದಲ ಬಾರಿಗೆ ಜಿಲ್ಲಾಧಿಕಾರಿ ಜವಾಬ್ದಾರಿ

2017ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದು,ಭನ್ವರ್ ಸಿಂಗ್ ಮೀನಾ ಅವರು ಇದೀಗ ಮೊದಲ ಬಾರಿಗೆ ಜಿಲ್ಲಾಧಿಕಾರಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಈ ಹಿಂದೆ ಬೆಳಗಾವಿಯಲ್ಲಿ ಪ್ರೊಬೇಷನರಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು. ಆನಂತರ ಬಸವಕಲ್ಯಾಣದಲ್ಲಿ ಎಸಿ ಯಾಗಿ, ಕೊಡಗು ಜಿಲ್ಲಾ ಪಂಚಾಯತ್‌ನಲ್ಲಿ ಸಿಇಒ ಆಗಿ ಸೇವೆ ಸಲ್ಲಿಸಿದ್ದಾರೆ. ಕೆಪಿಎಸ್‌ಸಿಯಲ್ಲಿ ಪರೀಕ್ಷಾ ನಿಯಂತ್ರಕರಾಗಿ ಹಾಗೂ ಬಾಗಲಕೋಟೆಯಲ್ಲೂ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.ಈ ಹಿಂದೆ ಕಲಬುರಗಿ ಜಿಲ್ಲಾ ಪಂಚಾಯತ್‌ ಸಿಇಒ ಆಗಿ ಕಾರ್ಯನಿರ್ವಹಿಸಿ ಅನುಭವ ಹೊಂದಿರುವ ಭನ್ವರ್ ಸಿಂಗ್ ಮೀನಾ ಇದೀಗ ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಫೋಟೋ

ಚಿಕ್ಕಮಗಳೂರು ನೂತನ ಜಿಲ್ಲಾಧಿಕಾರಿಯಾಗಿ ಭನ್ವರ್ ಸಿಂಗ್ ಮೀನಾ ಅಧಿಕಾರ ಸ್ವೀಕರಿಸಿದರು. ಎನ್.ಎಂ.ನಾಗರಾಜ್ ಉಪಸ್ಥಿತರಿದ್ದರು.