ತ್ಯಾವರೆಕೊಪ್ಪ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ

| Published : Oct 05 2025, 01:00 AM IST

ಸಾರಾಂಶ

ನಗರದ ಹೊರವಲಯದಲ್ಲಿರುವ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನವಾಗಿದ್ದು, ಇದೇ ಮೊದಲ ಬಾರಿ ಹೊರ ರಾಜ್ಯದಿಂದ ಹುಲಿ, ಸಿಂಹಗಳನ್ನು ತರಿಸಲಾಗಿದೆ.

ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ತ್ಯಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನವಾಗಿದ್ದು, ಇದೇ ಮೊದಲ ಬಾರಿ ಹೊರ ರಾಜ್ಯದಿಂದ ಹುಲಿ, ಸಿಂಹಗಳನ್ನು ತರಿಸಲಾಗಿದೆ.

ಶಿವಮೊಗ್ಗ ಮೃಗಾಲಯಕ್ಕೆ ಇದೆ ಮೊದಲ ಬಾರಿ ಬಿಳಿ ಹುಲಿ ಆಗಮನವಾಗಿದೆ. ಔರಂಗಾಬಾದ್ ಮೃಗಾಲಯದಿಂದ 2 ವರ್ಷದ ವಿಕ್ರಂ ಹುಲಿ ತರಿಸಲಾಗಿದೆ. ತ್ಯಾವರೆಕೊಪ್ಪ ಸಫಾರಿಗೆ ಮೂರು ಬಂಗಾಳ ಹುಲಿಗಳು ಆಗಮಿಸಿವೆ. ಔರಂಗಾಬಾದ್ ಸಫಾರಿಯಿಂದ ಎರಡು ಹೆಣ್ಣು ಹುಲಿಗಳು 2 ವರ್ಷದ ಶ್ರಾವಣಿ ಮತ್ತು 5 ವರ್ಷದ ರೋಹಿಣಿ, ಇಂದೋರ್ ಮೃಗಾಲಯದಿಂದ 3 ವರ್ಷ ಭದ್ರಾ ಆಗಮಿಸಿದೆ. ಇಂದೋರ್ ಮೃಗಾಲಯದಿಂದ ಎರಡು ಸಿಂಹಗಳು ಆಗಮಿಸಿವೆ. 2 ವರ್ಷದ ಸಿಂಹ ಶಿವ, 2 ವರ್ಷದ ಸಿಂಹಿಣಿ ಸಾರಾ ಆಗಮಿಸಿವೆ. ಶಿವಮೊಗ್ಗಕ್ಕೆ ಆಗಮಿಸಿದಾಗಿನಿಂದ ಕ್ವಾರಂಟೈನ್‌ನಲ್ಲಿದ್ದ ಪ್ರಾಣಿಗಳು ಈಗ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.