ಮೂಡಿಗೆರೆ: ಸಂಘಟನೆ ಮೂಲಕ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕೆಂದು ಜೆಡಿಎಸ್ ಹಿರಿಯ ಮುಖಂಡ ಎಂ.ಎಸ್.ಬಾಲಕೃಷ್ಣೇಗೌಡ ಕರೆ ನೀಡಿದರು.
ಮೂಡಿಗೆರೆ: ಸಂಘಟನೆ ಮೂಲಕ ಜೆಡಿಎಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕೆಂದು ಜೆಡಿಎಸ್ ಹಿರಿಯ ಮುಖಂಡ ಎಂ.ಎಸ್.ಬಾಲಕೃಷ್ಣೇಗೌಡ ಕರೆ ನೀಡಿದರು.
ಶುಕ್ರವಾರ ಪಟ್ಟಣದ ಅಡ್ಯಂತಾಯ ಕಾಂಪ್ಲೆಕ್ಸ್‌ನಲ್ಲಿ ನೂತನ ಜೆಡಿಎಸ್ ಕಚೇರಿ ಉದ್ಘಾಟಿಸಿ ಮಾತನಾಡಿ, ಜೆಡಿಎಸ್ ಒಂದು ಪ್ರಾದೇಶಿಕ ಪ್ರಭಾವಶಾಲಿ ಪಕ್ಷವಾಗಿದ್ದು, ಎಚ್.ಡಿ.ದೇವೇಗೌಡ ಪ್ರಧಾನಿ ಹಾಗೂ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರೈತರ, ಗ್ರಾಮೀಣ ಜನರ ಹಿತ, ಪ್ರಾದೇಶಿಕ ಅಭಿವೃದ್ಧಿ, ಶಿಕ್ಷಣ ಕೃಷಿ ಗ್ರಾಮೀಣ ಅಭಿವೃದ್ಧಿಗಾಗಿ ಶ್ರಮಿರುವುದನ್ನು ಜನರು ಇಂದಿಗೂ ಮರೆತಿಲ್ಲ. ಅಲ್ಲದೇ ಎಚ್.ಡಿ.ಕುಮಾರಸ್ವಾಮಿ ಪ್ರಸ್ತುತ ಕೇಂದ್ರ ಸಚಿವರಾಗಿ ರೈತರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಈ ಎಲ್ಲಾ ವಿಚಾರ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕೆಂದು ಸಲಹೆ ನೀಡಿದರು. .ಈಗಾಗಲೇ ಸ್ಥಳೀಯ ಹಾಗೂ ಎಲ್ಲಾ ಚುನಾವಣೆಗಳು ವರಿಷ್ಟರ ಮಾರ್ಗದರ್ಶನದಂತೆ ಎನ್‌ಡಿಎ ಮೈತ್ರಿಕೂಟದಿಂದ ನಡೆಸಲು ಸೂಚಿಸಿದ್ದಾರೆ. ಅದರಂತೆ ಬಹುತೇಕ ಚುನಾವಣೆ ಎನ್‌ಡಿಎ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಮುಂಬರುವ ಎಲ್ಲಾ ಚುನಾವಣೆ ಎದುರಿಸಲು ಪಕ್ಷವನ್ನು ಇನ್ನಷ್ಟು ಭಲಪಡಿಸಲು ಭೂತ್ ಮಟ್ಟದಿಂದಲೇ ಶ್ರಮಿಸಬೇಕೆಂದು ಹೇಳಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಎಲ್ಲಾ ವಿಭಾಗದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. 5 ಮೂಡಿಗೆರೆ 1ಎ: ಮೂಡಿಗೆರೆ ಪಟ್ಟಣದಲ್ಲಿ ಜೆಡಿಎಸ್ ಹಿರಿಯ ಮುಖಂಡ ಎಂ.ಎಸ್.ಬಾಲಕೃಷ್ಣೇಗೌಡ ನೂತನ ಜೆಡಿಎಸ್ ಕಚೇರಿ ಉದ್ಘಾಟಿಸಿದರು.