ಕನ್ನಡಪ್ರಭ ವಾರ್ತೆ ಮಂಡ್ಯ
ಕಳೆದ ಹದಿನೈದು ವರ್ಷಗಳಿಂದ ಪಶ್ಚಿಮ ಬಂಗಾಳದ ಟಿಎಂಸಿ ಆಡಳಿತದಲ್ಲಿ ಕವಿದಿದ್ದ ಕತ್ತಲು ದೂರವಾಗಿ ಬಿಜೆಪಿ ಆಡಳಿತ ಜಾರಿಯಾಗುವ ಮೂಲಕ ಹೊಸ ಬೆಳಕು ಮೂಡಿದೆ ಎಂದು ಮೈಸೂರು ವಿಭಾಗದ ಬಿಜೆಪಿ ಪ್ರಭಾರಿ ಡಾ.ಈ.ಸಿ.ನಿಂಗರಾಜ್‌ಗೌಡ ತಿಳಿಸಿದ್ದಾರೆ.ಪಶ್ಚಿಮ ಬಂಗಾಳದೊಂದಿಗೆ ಅಸ್ಸಾಂ, ಪುದುಚೇರಿಯಲ್ಲೂ ಬಿಜೆಪಿ ಜಯಭೇರಿ ಬಾರಿಸಿದೆ. ಇದರಿಂದ ಕೋಟ್ಯಂತರ ಬಿಜೆಪಿ ಕಾರ್ಯಕರ್ತರ ಕನಸು ನನಸಾಗಿದೆ. ಬಿಜೆಪಿ ಅಲೆ ಪ್ರತಿ ಚುನಾವಣೆಯಲ್ಲೂ ರಾಜ್ಯದಿಂದ ರಾಜ್ಯಕ್ಕೆ ವಿಸ್ತರಿಸುತ್ತಿರುವುದು ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ ಇದಕ್ಕಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ನಿತೀನ್ ನಬೀನ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೇರಿದಂತೆ ಪಕ್ಷದ ಎಲ್ಲಾ ಮುಖಂಡರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕಳೆದ 50 ವರ್ಷಗಳಿಂದಲೂ ಪಶ್ಚಿಮಬಂಗಾಳದಲ್ಲಿ ಆಗಿನ ಕಮ್ಯೂನಿಷ್ಠರಿಂದ, ಕಳೆದ 15 ವರ್ಷಗಳಿಂದ ಟಿಎಂಸಿ ಕಾರ್ಯಕರ್ತರಿಂದ ಬಿಜೆಪಿ ಮತ್ತು ಸಂಘ ಪರಿವಾರದ ಸಾವಿರಾರು ಕಾರ್ಯಕರ್ತರ ಬರ್ಬರ ಹತ್ಯೆಗಳು ನಿರಂತರವಾಗಿ ನಡೆಯುತ್ತಲೇ ಇದ್ದವು. ಈ ಅಭೂತಪೂರ್ವ ಚುನಾವಣೆಯ ಜಯದಿಂದಾಗಿ ಅವರೆಲ್ಲರ ಆತ್ಮಕ್ಕೆ ಶಾಂತಿ ಸಿಕ್ಕಿದಂತಾಗಿದೆ.ಈ ಚುನಾವಣೆಯ ಜಯದಿಂದಾಗಿ ಪಶ್ಚಿಮಬಂಗಾಳದ ಸಮಗ್ರ ಅಭಿವೃದ್ಧಿ, ಗಡಿ ರಕ್ಷಣೆಯ ಮೂಲಕ ದೇಶದ ಸುರಕ್ಷತೆ, ಮಹಿಳೆಯರ ರಕ್ಷಣೆ, ಯುವಕರಿಗೆ ಉದ್ಯೋಗ, ಪ್ರವಾಸೋದ್ಯಮ, ಕೈಗಾರಿಕಾ ಅಭಿವೃದ್ಧಿಯೂ ನಿಶ್ಚಿತವಾಗಿ ಆಗಲಿದೆ ಎಂದು ಅಚಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದುರಾಡಳಿತಕ್ಕೆ ಜನರ ತಕ್ಕ ಪಾಠ: ಸಿ.ಪಿ.ಉಮೇಶ್
ಕನ್ನಡಪ್ರಭ ವಾರ್ತೆ ಮಂಡ್ಯಪಶ್ಚಿಮ ಬಂಗಾಳ, ಪುದುಚೇರಿ ಹಾಗೂ ಅಸ್ಸಾಂ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವನ್ನು ಜನರು ನೀಡಿದ್ದಾರೆ. ಈ ಮೂಲಕ ದೇಶದ ರಕ್ಷಣೆ ಹಾಗೂ ಅಭಿವೃದ್ಧಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದಿಂದಷ್ಟೇ ಸಾಧ್ಯ ಎನ್ನುವ ಸಂದೇಶವನ್ನು ವಿರೋಧ ಪಕ್ಷಗಳಿಗೆ ಜನತೆ ರವಾನಿಸಿದ್ದಾರೆ ಎಂದು ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಪಿ.ಉಮೇಶ್ ತಿಳಿಸಿದ್ದಾರೆ.
ಪಂಚ ರಾಜ್ಯದಲ್ಲಿ ಚುನಾವಣೆ ನಡೆಯುತ್ತಿದ್ದರೂ ದೇಶದ ಎಲ್ಲರ ಗಮನ ಪಶ್ಚಿಮ ಬಂಗಾಳದತ್ತ ಇತ್ತು. ಮಮತಾ ಬ್ಯಾನರ್ಜಿ ಅವರ ದುರಾಡಳಿತದಿಂದ ಜನರು ರೋಸಿ ಹೋಗಿದ್ದರು. ಮಾತ್ರವಲ್ಲದೆ ಪ್ರಶ್ಚಿಮ ಬಂಗಾಳ ಅಕ್ರಮ ಬಾಂಗ್ಲಾ ವಲಸಿಗರ ತಾಣವಾಗಿತ್ತು. ಪ್ರತಿದಿನ ದೌರ್ಜನ್ಯ ಮಿತಿ ಮೀರಿದ್ದವು. ಇದಕ್ಕೆಲ್ಲ ಅಲ್ಲಿನ ಮತದಾರರು ತಕ್ಕ ಪಾಠ ಕಳಿಸಿದ್ದಾರೆ. ಇದು ದೇಶದ ಗಮನಸೆಳೆದಿದೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಪಶ್ಚಿಮ ಬಂಗಾಳ, ಪುದುಚೇರಿ ಹಾಗೂ ಅಸ್ಸಾಂ ಚುನಾವಣಾ ಫಲಿತಾಂಶ 2028ರಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯದ ಚುನಾವಣೆಗೂ ದಿಕ್ಸೂಚಿಯಾಗಿದೆ. ಇಲ್ಲಿನ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಆಡಳಿತಕ್ಕೆ ಜನರ ಬೇಸತ್ತಿದ್ದಾರೆ. ಅಭಿವೃದ್ಧಿ ಮರೆತು ಕಾಲಹರಣ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿಯೂ ಕಾಂಗ್ರೆಸ್‌ಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.