ಚುನಾವಣಾ ಅಧಿಕಾರಿಗಳಾಗಿ ಹಿರಿಯ ವರದಿಗಾರ ಓದೇಶ್ ಸಕಲೇಶಪುರ, ಸಹಾಯಕ ಚುನಾವಣಾ ಅಧಿಕಾರಿಗಳಾಗಿ ಜಿಲ್ಲಾ ಘಟಕ ಉಪಾಧ್ಯಕ್ಷ ಲಕ್ಷ್ಮೀಪತಿ ಮಂಗಳವಾರಪೇಟೆ , ಜಿಲ್ಲಾ ಕಾರ್ಯದರ್ಶಿ ಎಂ. ಜಗದೀಶ್ ಅವರು ಕರ್ತವ್ಯ ನಿರ್ವಹಿಸಿದರು.
ಕನಕಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕು ಘಟಕಕ್ಕೆ ನೂತನ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾದರು. ಡಿ.20ರ ಶನಿವಾರ ನಗರದ ರೋಟರಿ ಭವನದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಟಿ. ಸಿ. ವೆಂಕಟೇಶ್, ಪ್ರ. ಕಾರ್ಯದರ್ಶಿ ಸ್ಥಾನಕ್ಕೆ ಕೆ.ವಿ. ಮನು, ಉಪಾಧ್ಯಕ್ಷ ಸ್ಥಾನಕ್ಕೆ ರಾಜು ಎಚ್. ಪಿ., ಖಜಾಂಚಿ ಸ್ಥಾನಕ್ಕೆ ಕುಮಾರ್ ಸ್ಪರ್ಧೆ ಮಾಡಿದ್ದರು. ಈ ಎಲ್ಲಾ ಸ್ಥಾನಗಳಿಗೂ ಒಂದೊಂದೇ ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾ ಪ್ರಕ್ರಿಯೆ ಬೆಂಗಳೂರು ದಕ್ಷಿಣ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಶಿವಲಿಂಗಯ್ಯ ವಿಭೂತಿಕೆರೆ, ಪ್ರಧಾನ ಕಾರ್ಯದರ್ಶಿ ಎಸ್. ಮಂಜುನಾಥ್ ರವರ ಮೇಲುಸ್ತುವಾರಿಯಲ್ಲಿ ನಡೆಯಿತು.
ಚುನಾವಣಾ ಅಧಿಕಾರಿಗಳಾಗಿ ಹಿರಿಯ ವರದಿಗಾರ ಓದೇಶ್ ಸಕಲೇಶಪುರ, ಸಹಾಯಕ ಚುನಾವಣಾ ಅಧಿಕಾರಿಗಳಾಗಿ ಜಿಲ್ಲಾ ಘಟಕ ಉಪಾಧ್ಯಕ್ಷ ಲಕ್ಷ್ಮೀಪತಿ ಮಂಗಳವಾರಪೇಟೆ , ಜಿಲ್ಲಾ ಕಾರ್ಯದರ್ಶಿ ಎಂ. ಜಗದೀಶ್ ಅವರು ಕರ್ತವ್ಯ ನಿರ್ವಹಿಸಿದರು.ಚುನಾವಣೆ ಪ್ರಕ್ರಿಯೆ ಬಳಿಕ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು.
ಜಿಲ್ಲಾ ಉಪಾಧ್ಯಕ್ಷ ಶಿವನಹಳ್ಳಿ ಶಿವಲಿಂಗಯ್ಯ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ಗಿರೀಶ್, ಎಸ್. ಶ್ರೀಧರ್ ಈ ವೇಳೆ ಹಾಜರಿದ್ದರು. ------