ಶಿವಮೊಗ್ಗ ಕೆನರಾ ಬ್ಯಾಂಕ್ ನೂತನ ಪ್ರಾದೇಶಿಕ ಕಚೇರಿ

| Published : Dec 16 2023, 02:00 AM IST

ಶಿವಮೊಗ್ಗ ಕೆನರಾ ಬ್ಯಾಂಕ್ ನೂತನ ಪ್ರಾದೇಶಿಕ ಕಚೇರಿ
Share this Article
  • FB
  • TW
  • Linkdin
  • Email

ಸಾರಾಂಶ

ಶಿವಮೊಗ್ಗ ಕೆನರಾ ಬ್ಯಾಂಕ್ ನೂತನ ಪ್ರಾದೇಶಿಕ ಕಚೇರಿ ಆರಂಭ. ವಾಜಪೇಯಿ ಬಡಾವಣೆಯಲ್ಲಿ ನಿರ್ಮಾಣವಾದ ಕೇಂದ್ರವನ್ನು ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಉದ್ಘಾಟಿಸಿದರು.

ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಉದ್ಘಾಟನೆ । ವಾಜಪೇಯಿ ಬಡಾವಣೆಯಲ್ಲಿ ನಿರ್ಮಾಣ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಇಲ್ಲಿನ ವಾಜಪೇಯಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಕೆನರಾ ಬ್ಯಾಂಕ್ ಶಿವಮೊಗ್ಗದ ಪ್ರಾದೇಶಿಕ ಕಚೇರಿಯ ಕಟ್ಟಡವನ್ನು ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕೆನರಾ ಬ್ಯಾಂಕ್ ಜಿಲ್ಲೆಯಲ್ಲಿ ಲೀಡ್ ಬ್ಯಾಂಕ್ ಆಗಿ ಬಹಳ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುತ್ತಿದೆ. ಸರ್ಕಾರದ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗೆ ತಲುಪಿಸಲು ಬಹಳ ಶ್ರಮಿಸುತ್ತಿದೆ ಎಂದರು.

ನಂತರ ಮಾತನಾಡಿದ ಜನರಲ್ ಮ್ಯಾನೇಜರ್ ಎಂ.ಜಿ. ಪಂಡಿತ್‌, ಕೆನರ್‌ ಬ್ಯಾಂಕ್ ನಮ್ಮ ದೇಶದ ಮೂರನೇ ಅತಿ ದೊಡ್ಡ ಬ್ಯಾಂಕಾಗಿದೆ. ₹21.56 ಲಕ್ಷ ಕೋಟಿ ವೈವಾಟನ್ನು ಹೊಂದಿದ್ದು, ಸರ್ಕಾರದ ಎಲ್ಲ ಯೋಜನೆಗಳನ್ನು ಕೆನರಾ ಬ್ಯಾಂಕ್ ಮುಖಾಂತರ ಸಾರ್ವಜನಿಕರಿಗೆ ತಲುಪಿಸುತ್ತಿದೆ ಎಂದು ಹೇಳಿದರು.

ಕೆನರಾ ಬ್ಯಾಂಕ್ ಸೊಸೈಟಿಗೆ ತನ್ನದೇ ಆದ ಕೊಡುಗೆಯನ್ನು ನಿರಂತರವಾಗಿ ನೀಡುತ್ತಾ ಬಂದಿದೆ. ಸರ್ಕಾರಿ ಶಾಲೆಗಳಲ್ಲಿ ಐದರಿಂದ 10ನೇ ತರಗತಿಯವರೆಗೆ ಓದುವ ಎಸ್ಸಿ ಹಾಗೂ ಎಸ್ಟಿ ವಿದ್ಯಾರ್ಥಿಗಳಿಗೆ ಕೆನರಾ ವಿದ್ಯಾ ಜ್ಯೋತಿಯ ಮೂಲಕ ಸ್ಕಾಲರ್ಶಿಪ್ ನೀಡುತ್ತಾ ಬಂದಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ₹11,000 ಕೋಟಿ ವೈವಾಟನ್ನು ಹೊಂದಿದ್ದು, ₹6300 ಕೋಟಿ ಡೆಪಾಸಿಟ್‌ ಹಾಗೂ ₹4,700 ಕೋಟಿ ಮುಂಗಡವನ್ನು ಹೊಂದಿದೆ ಎಂದು ತಿಳಿಸಿರು.

ಜಿಪಂ ಸಿಇಒ ಸ್ನೇಹಲ್‌ ಲೋಖಂಡೆ ಮಾತನಾಡಿ, ಕೆನರಾ ಬ್ಯಾಂಕ್ ಜಿಲ್ಲೆಯಲ್ಲಿ ಲೀಡ್ ಬ್ಯಾಂಕ್ ಆಗಿ ಕಾರ್ಯ ನಿರ್ವಹಿಸುತ್ತ ಇದೆ. ಸರ್ಕಾರದ ಎಲ್ಲ ಹಣಕಾಸು ಯೋಜನೆಗಳನ್ನು ಬಹಳ ಅಚ್ಚುಕಟ್ಟಾಗಿ ಸಾರ್ವಜನಿಕರಿಗೆ ತಲುಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಾಗಿ ತಲುಪಿಸುವಂತೆ ಆಗಲಿ ಎಂದರು.

ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಶಿವಮೊಗ್ಗದ ಪ್ರಾದೇಶಿಕ ವ್ಯವಸ್ಥಾಪಕ ಆರ್‌.ದೇವರಾಜ, ಡಿಜೆಎಂ ರಾಜೀವ್. ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಮತ್ತಿತರರು ಇದ್ದರು.

- - -

15ಎಸ್‌ಎಂಜಿಕೆಪಿ02

ಶಿವಮೊಗ್ಗದ ವಾಜಪೇಯಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಿರುವ ಕೆನರಾ ಬ್ಯಾಂಕ್ ಶಿವಮೊಗ್ಗದ ಪ್ರಾದೇಶಿಕ ಕಚೇರಿಯನ್ನು ಜಿಲ್ಲಾಧಿಕಾರಿ ಡಾ. ಆರ್‌.ಸೆಲ್ವಮಣಿ ಉದ್ಘಾಟಿಸಿದರು.