ಸಾರಾಂಶ
ವಿವೇಕ ಯೋಜನೆಯ ಮೂಲಕ ಹೋಬಳಿಯ ಕಾಮನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ನೂತನ ಕಟ್ಟಡವನ್ನು 16 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಬಾಲಕೃಷ್ಣ ಶನಿವಾರ ತಿಳಿಸಿದರು. ತಾಲೂಕಿನಲ್ಲಿ ಸರ್ಕಾರಿ ಶಾಲೆ ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ತಾಲೂಕಿಗೆ ಹೆಚ್ಚುವರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ನೀಡುವಂತೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದ್ದೇನೆ.
ಕನ್ನಡಪ್ರಭ ವಾರ್ತೆ ಬಾಗೂರು
ವಿವೇಕ ಯೋಜನೆಯ ಮೂಲಕ ಹೋಬಳಿಯ ಕಾಮನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯ ನೂತನ ಕಟ್ಟಡವನ್ನು 16 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಬಾಲಕೃಷ್ಣ ಶನಿವಾರ ತಿಳಿಸಿದರು.ತಗಡೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಕಾಮನಾಯಕನಹಳ್ಳಿಯಲ್ಲಿ ನಿರ್ಮಾಣ ಮಾಡಿರುವ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕಿನಲ್ಲಿ ಸರ್ಕಾರಿ ಶಾಲೆ ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ತಾಲೂಕಿಗೆ ಹೆಚ್ಚುವರಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ನೀಡುವಂತೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದ್ದೇನೆ. ಸಚಿವರು ತಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ಆರ್ಥಿಕ ವರ್ಷದ ಫೆಬ್ರವರಿಯಲ್ಲಿ ಅನುದಾನ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿಕ್ಷಣ ಸಚಿವರಾದ ನಾಗೇಶ್ ಅವರು ತಾಲೂಕಿಗೆ ಸುಮಾರು 25 ಹೆಚ್ಚುವರಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡಿದ್ದರು. ಇದರಿಂದ ತಾಲೂಕಿಗೆ ಹೆಚ್ಚಿನ ಅನುಕೂಲವಾಗಿದೆ ಎಂದು ಸಚಿವರ ಕೊಡುಗೆಯನ್ನು ನೆನಪಿಸಿದರು. ಈಗಾಗಲೇ ಶಾಲಾ ಆವರಣದಲ್ಲಿ ಸುಮಾರು 10 ಲಕ್ಷ ವೆಚ್ಚದಲ್ಲಿ ಹೆಚ್ಚುವರಿ ಕಟ್ಟಡ ನಿರ್ಮಾಣಗೊಳ್ಳುತ್ತಿದೆ ಉಳಿದ ಕಾಮಗಾರಿಗೆ 2.50 ಲಕ್ಷ ಅನುದಾನವನ್ನು ಬಿಡುಗಡೆ ಮಾಡಿದ್ದು ಏಪ್ರಿಲ್ ಅಂತ್ಯದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಿ ಉದ್ಘಾಟನೆ ಮಾಡಲಾಗುತ್ತದೆ ಎಂದು ತಿಳಿಸಿದರು.ರಾಜ್ಯ ಸರ್ಕಾರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಸಲುವಾಗಿ ಸರ್ಕಾರಿ ಶಾಲೆಗಳಲ್ಲಿ ಉಚಿತ ಪಠ್ಯಪುಸ್ತಕ ಬಿಸಿಊಟ ಮೊಟ್ಟೆ ಸಮವಸ್ತ್ರ ಸೇರಿದಂತೆ ಹೆಚ್ಚಿನ ಸೌಲತ್ತುಗಳನ್ನು ನೀಡುತ್ತಿದ್ದು ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುವಂತೆ ಮನವಿ ಮಾಡಿದರು. ಶಾಲಾ ಮಕ್ಕಳಿಗೆ ತಾವೇ ಸಿಹಿ ಹಂಚಿ ವಿದ್ಯಾರ್ಥಿಗಳ ಸಮಸ್ಯೆ ವಿಚಾರಿಸಿದರು .
ಕಾರ್ಯಕ್ರಮದಲ್ಲಿ ತಗಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಜಿ. ಶಂಕರ್, ಗ್ರಾಮ ಪಂಚಾಯಿತಿ ಸದಸ್ಯರಾದ ಮಾಲಿಂಗೇಗೌಡ, ಕುಮಾರ್, ಪವಿತ್ರ ಲೋಕೇಶ್, ರೇಖಾ ಮಂಜಾಭೋವಿ, ಕಾರೇಹಳ್ಳಿ ಕೃಷಿ ಪತ್ತಿನ ಅಧ್ಯಕ್ಷ ಸಿ.ಡಿ. ರೇವಣ್ಣ, ಮುಖ್ಯ ಶಿಕ್ಷಕ ಚನ್ನಬಸವಯ್ಯ, ಎಸ್‌ಡಿಎಂಸಿ ಅಧ್ಯಕ್ಷ ನಿಂಗರಾಜು, ಮುಖಂಡರುಗಳಾದ ಓಬಳಾಪುರ ಬಸವರಾಜ್, ತಮ್ಮಯಣ್ಣ, ನಾಗೇಶ್, ಮಾಜಿ ಗ್ರಾಪಂ ಅಧ್ಯಕ್ಷರುಗಳಾದ ನಾಗೇಶ್, ಪುಟ್ಟೇಗೌಡ, ಅಣ್ಣಯ್ಯ, ಜಯಶಂಕರ್, ಕೆ.ಎಸ್. ಚಂದ್ರಶೇಖರ್, ಯಶೋಧ, ಲಿಂಗರಾಜ್, ಕೃಷಿ ಪತ್ತಿನ ನಿರ್ದೇಶಕ ಬಿ. ಎಸ್. ಚಂದ್ರು ಸೇರಿದಂತೆ ಇತರರು ಹಾಜರಿದ್ದರು.