ಕ್ರಿಸ್ಮಸ್, ಹೊಸ ವರ್ಷಾಚರಣೆ ಸಂದರ್ಭ ಉಡುಪಿ ಜಿಲ್ಲೆಯಲ್ಲಿ ನಿಮಯ ಉಲ್ಲಂಘಿಸಿದ 1199 ಚಾಲಕರನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡು ಅವರಿಗೆ 9,42,600 ರು. ದಂಡ ವಿಧಿಸಿದ್ದಾರೆ.

ಉಡುಪಿ: ಹೊಸ ವರ್ಷಾಚರಣೆ ಮತ್ತು ಕ್ರಿಸ್ಮಸ್ ಹಬ್ಬದ ಸಂದರ್ಭ ಮದ್ಯಪಾನ ಮಾಡಿ, ಕಾನೂನುಬಾಹಿರವಾಗಿ ವಾಹನ ಚಲಾಯಿಸುತ್ತಿದ್ದವರನ್ನು ಉಡುಪಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ.

ನಿಮಯ ಉಲ್ಲಂಘಿಸಿದ 1199 ಚಾಲಕರನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸಿಕೊಂಡು ಅವರಿಗೆ 9,42,600 ರು. ದಂಡ ವಿಧಿಸಿದ್ದಾರೆ. ಈ ಸಮಯದಲ್ಲಿ ಜಿಲ್ಲೆಯಲ್ಲಿ ರಸ್ತೆ ಸುರಕ್ಷತೆ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ಡಿ. 24 ರಿಂದ 31ರವರೆಗೆ ವಿಶೇಷ ಕಾರ್ಯಾಚರಣೆಗಳನ್ನು ನಡೆಸಲಾಗಿತ್ತು. ಅದಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 29 ಚೆಕ್ ಪೋಸ್ಟ್‌ಗಳನ್ನು ಅಳವಡಿಸಲಾಗಿದ್ದು, ಜಿಲ್ಲೆಯ ಎಲ್ಲ ಪೊಲೀಸ್ ಆಧಿಕಾರಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಈ ವಿಶೇಷ ಕಾರ್ಯಾಚರಣೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುತಿದ್ದ 103, ಹೆಲ್ಮೆಟ್ ಇಲ್ಲದೇ ದ್ವಿಚಕ್ರ ಓಡಿಸುತ್ತಿದ್ದ 803, ಸೀಟ್ ಬೆಲ್ಟ್ ಧರಿಸದೆ ವಾಹನ ಚಲಾಯಿಸುತಿದ್ದ 243, ಟ್ರಿಪಲ್ ರೈಡಿಂಗ್ 35, ವಾಹನ ಚಲಾಯಿಸುವಾಗ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ 15 ಮಂದಿ ಸೇರಿ 1199 ಮಂದಿ ಚಾಲಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.