ಸಾರಾಂಶ
ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ಪೇರೂರು ಗ್ರಾಮದ ಲೈನ್‌ಮನೆಯಲ್ಲಿ ಶನಿವಾರ ರಾತ್ರಿ ನವಜಾತ ಹೆಣ್ಣು ಮಗು ಪತ್ತೆಯಾಗಿದೆ.
ನಾಪೋಕ್ಲು: ಮಡಿಕೇರಿ ತಾಲೂಕು ಬಲ್ಲಮಾವಟ್ಟಿ ಗ್ರಾಮ ಪಂಚಾಯಿತಿಯ ಪೇರೂರು ಗ್ರಾಮದ ಲೈನ್ ಮನೆಯಲ್ಲಿ ಶನಿವಾರ ರಾತ್ರಿ ನವಜಾತ ಹೆಣ್ಣು ಮಗು ಪತ್ತೆಯಾಗಿದೆ. ಪೇರೂರು ಗ್ರಾಮದ ನಿವಾಸಿ ತೋಳಂಡ ಪೂನಚ್ಚ ಎಂಬವರ ಲೈನ್ ಮನೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ಜನರಿಲ್ಲದ ಲೈನ್ ಮನೆಯಲ್ಲಿ ಮಗುವಿನ ಕೂಗು ಕೇಳಿ ಅಲ್ಲಿಯ ನಿವಾಸಿಗಳು ಮನೆ ಮಾಲಿಕ ಪೂಣಚ್ಚ ಅವರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ವಾರೀಸುದಾರರು ಯಾರು ಇಲ್ಲದ ಕಾರಣ ಪೋಲಿಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಸಿಬ್ಬಂದಿ ಮಗುವನ್ನು ರಕ್ಷಿಸಿ ನಾಪೋಕ್ಲು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿದರು. ಬಳಿಕ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಶಿಶುವನ್ನು ರಕ್ಷಣೆ ಮಾಡಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಮಾಹಿತಿ ನೀಡಲು ಕೋರಿಕೆ:
ಮಗುವಿನ ವಾರೀಸುದಾರರ ಬಗ್ಗೆ ಪತ್ತೆ ಕಾರ್ಯ ಕೈಗೊಂಡಿದ್ದು, ಯಾರಿಗಾದರೂ ಮಾಹಿತಿ ಸಿಕ್ಕಿದಲ್ಲಿ ಪೊಲೀಸ್ ಠಾಣಾಧಿಕಾರಿ ಮೊಬೈಲ್ ಸಂಖ್ಯೆ 9480804948ಗೆ ಕರೆ ಮಾಡಿ ಮಾಹಿತಿ ನೀಡಲು ಕೋರಲಾಗಿದೆ. ಮಾಹಿತಿ ನೀಡಿದವರ ವಿವರವನ್ನು ಗುಪ್ತವಾಗಿ ಇಡಲಾಗುವುದು ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.