ಸಾರಾಂಶ
ಕೌಟುಂಬಿಕ ಕಲಹ ಮತ್ತು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾದ ನವವಿವಾಹಿತ ಜೋಡಿ ನೇಣಿಗೆ ಶರಣಾಗಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಜರುಗಿದೆ.
ಗದಗ: ಕೌಟುಂಬಿಕ ಕಲಹ ಮತ್ತು ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದರು ಎನ್ನಲಾದ ನವವಿವಾಹಿತ ಜೋಡಿ ನೇಣಿಗೆ ಶರಣಾಗಿರುವ ಘಟನೆ ಗದಗ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಜರುಗಿದೆ.
ವಿಕ್ರಮ ಶಿರಹಟ್ಟಿ (30), ಶಿಲ್ಪಾ (28) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಈ ಘಟನೆ ಏಪ್ರಿಲ್ 29ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.