ಕನ್ನಡಪ್ರಭ ವಾರ್ತೆ ಶಿರಾ
ತಾಲೂಕಿನ ಹನುಮನಹಳ್ಳಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಪತ್ನಿಯ ಆತ್ಮಹತ್ಯೆ ಕಂಡು ಹೆದರಿದ ಪತಿಯೂ ಜೀವತ್ಯಾಗ ಮಾಡಿದ್ದಾರೆ. ಮೃತರನ್ನು ಶರಣ್ಯ (20) ಹಾಗೂ ಗಿರೀಶ್ (28) ಎಂದು ಗುರುತಿಸಲಾಗಿದೆ. ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಈ ದಂಪತಿಯ ಸಾವಿನ ಸುದ್ದಿ ಗ್ರಾಮದಲ್ಲಿ ತೀವ್ರ ದುಃಖದ ವಾತಾವರಣ ಮೂಡಿಸಿದೆ. ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಶರಣ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಲದ ಕೆಲಸಕ್ಕೆ ತೆರಳಿದ್ದ ಗಿರೀಶ್ ಮನೆಗೆ ಬಂದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಕಂಡು ತೀವ್ರ ಆಘಾತಕ್ಕೊಳಗಾಗಿ, ಬಳಿಕ ಮನೆ ಸಮೀಪದ ಜಮೀನಿನ ಬಳಿ ಹೋಗಿ ಮರಕ್ಕೆ ನೇಣು ಬಿಗಿದುಕೊಂಡು ಅವರೂ ಸಹ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನಿಖೆ ವೇಳೆ ಪೊಲೀಸರಿಗೆ ಸಿಕ್ಕಿರುವ ಮಾಹಿತಿಯಂತೆ, ಶರಣ್ಯಗೆ ಈ ವಿವಾಹದ ಬಗ್ಗೆ ಆಸಕ್ತಿ ಇರಲಿಲ್ಲ, ಮನೆಯವರ ಒತ್ತಡಕ್ಕೆ ಮದುವೆಯಾಗಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ. ಗಿರೀಶ್ ಅವರು ಶರಣ್ಯ ಅವರ ಸಹೋದರ ಮಾವನಾಗಿದ್ದು, ಮದುವೆಯ ನಂತರ ದಂಪತಿ ನಡುವೆ ಪದೇ ಪದೇ ಭಿನ್ನಾಭಿಪ್ರಾಯಗಳಿಂದ ಜಗಳ ನಡೆಯುತ್ತಿತ್ತು. ಎರಡು ದಿನಗಳ ಹಿಂದೆಯೂ ದಂಪತಿ ನಡುವೆ ತೀವ್ರ ವಾಗ್ವಾದ ನಡೆದಿತ್ತು ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಈ ದುರಂತ ಘಟನೆ ಹನುಮನಹಳ್ಳಿ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದ್ದು, ನವ ದಂಪತಿಯ ಅಕಾಲಿಕ ಸಾವಿಗೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.ನವ ದಂಪತಿ ಆತ್ಮಹತ್ಯೆಗೆ ಶರಣು
ತಾಲೂಕಿನ ಹನುಮನಹಳ್ಳಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಪತ್ನಿಯ ಆತ್ಮಹತ್ಯೆ ಕಂಡು ಹೆದರಿದ ಪತಿಯೂ ಜೀವತ್ಯಾಗ ಮಾಡಿದ್ದಾರೆ. ಮೃತರನ್ನು ಶರಣ್ಯ (20) ಹಾಗೂ ಗಿರೀಶ್ (28) ಎಂದು ಗುರುತಿಸಲಾಗಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.