ಭಾಷಾ ಸಾಮರ್ಥ್ಯ ವೃದ್ಧಿಗೆ ಪತ್ರಿಕೆಗಳು ಸಹಕಾರಿ: ಪ್ರಸಾದ್ ಶೆಟ್ಟಿ

| Published : Jul 24 2024, 12:15 AM IST

ಭಾಷಾ ಸಾಮರ್ಥ್ಯ ವೃದ್ಧಿಗೆ ಪತ್ರಿಕೆಗಳು ಸಹಕಾರಿ: ಪ್ರಸಾದ್ ಶೆಟ್ಟಿ
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಂ. ರಮೇಶ್ ಭಟ್ ಪತ್ರಿಕೆಯನ್ನುಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ ಎಂದರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಯಾವುದೇ ವಿಷಯದ ಬಗ್ಗೆ ಅಧಿಕೃತವಾಗಿ ಮಾತನಾಡಬೇಕಾದರೆ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ. ಪತ್ರಿಕೆಗಳು ನಿರ್ದಿಷ್ಟ ವಿಷಯಗಳನ್ನು ವಿಮರ್ಶಿಸಿ ನೀಡುವ ವರದಿಯಿಂದ ಓದುಗರಿಗೆ ವಿಷಯದ ಆಳಕ್ಕೆ ಇಳಿದು ಮಾಹಿತಿ ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಓದುಗರ ಭಾಷಾ ಸಾಮರ್ಥ್ಯ ಮತ್ತು ಸಂವಹನಾ ಸಾಮರ್ಥ್ಯವೂ ಉತ್ತಮಗೊಳ್ಳಲು ಇದು ನೆರವಾಗುತ್ತದೆ ಎಂದು ಆಳ್ವಾಸ್ ಕಾಲೇಜಿನ ಸ್ನಾತಕೊತ್ತರ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಹೇಳಿದರು.

ಅವರು .ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕ ಮತ್ತು ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜು, ಮೂಡುಬಿದಿರೆ ಜಂಟಿ ಆಶ್ರಯದಲ್ಲಿ ‘ದಿನ ನಿತ್ಯದ ಜೀವನದಲ್ಲಿ ಪತ್ರಿಕೆಗಳ ಓದು’ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕಸಾಪ ಅಧ್ಯಕ್ಷ ವೇಣುಗೋಪಾಲ ಶೆಟ್ಟಿ ಕೆ., ಕನ್ನಡ ಪ್ರೀತಿಯನ್ನು ಜನರಲ್ಲಿ ಬೆಳೆಸಲು ಈ ಸಂಸ್ಥೆ ಸ್ಥಾಪನೆಯಾಯಿತು. ಇಂದು ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವಲ್ಲಿ ಈ ಸಂಸ್ಥೆ ಪ್ರಮುಖ ಪಾತ್ರ ವಹಿಸುತ್ತಿದೆ. ಕನ್ನಡ ಪತ್ರಿಕೆಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಹಾಗೆಯೇ ನಿತ್ಯಜೀವನದಲ್ಲಿ ಪತ್ರಿಕೆಗಳ ಓದು ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು.

ಶ್ರೀ ಮಹಾವೀರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಎಂ. ರಮೇಶ್ ಭಟ್ ಪತ್ರಿಕೆಯನ್ನುಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ ಎಂದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಜಯಲಕ್ಷ್ಮೀ ವಂದಿಸಿದರು. ಸದಾನಂದ ನಾರಾವಿ ಕಾರ್ಯಕ್ರಮ ನಿರೂಪಿಸಿದರು.