ಕುನ್ನೂರು ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ೯೦೬ನೇ ಜಯಂತ್ಯುತ್ಸವವನ್ನು ಶುಕ್ರವಾರ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮದ ಗಂಗಾಮಾತೆಯ ಭಕ್ತರು ಹಾಗೂ ಸಮಸ್ತ ಗ್ರಾಮಸ್ಥರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮವು ಗ್ರಾಮಕ್ಕೆ ಸಾಂಸ್ಕೃತಿಕ ಮೆರುಗು ನೀಡಿತು.
ಶಿಗ್ಗಾಂವಿ: ತಾಲೂಕಿನ ಕುನ್ನೂರು ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ೯೦೬ನೇ ಜಯಂತ್ಯುತ್ಸವವನ್ನು ಶುಕ್ರವಾರ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಗ್ರಾಮದ ಗಂಗಾಮಾತೆಯ ಭಕ್ತರು ಹಾಗೂ ಸಮಸ್ತ ಗ್ರಾಮಸ್ಥರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಈ ಕಾರ್ಯಕ್ರಮವು ಗ್ರಾಮಕ್ಕೆ ಸಾಂಸ್ಕೃತಿಕ ಮೆರುಗು ನೀಡಿತು.
ನರಸೀಪುರ ಗುರುಪೀಠದ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು, ನಿಜಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರದ ಭವ್ಯ ಮೆರವಣಿಗೆಗೆ ಚಾಲನೆ ನೀಡಿದರು. ನೂರಾರು ಮಹಿಳೆಯರು ಕುಂಭ ಹೊತ್ತು ಮೆರವಣಿಗೆಯ ಮುಂಚೂಣಿಯಲ್ಲಿದ್ದರು. ವಿವಿಧ ಜಾನಪದ ಕಲಾ ತಂಡಗಳು, ಭಜನಾ ಮಂಡಳಿಗಳು ಹಾಗೂ ವಾದ್ಯಮೇಳಗಳು ಮೆರವಣಿಗೆಗೆ ಕಳೆ ತುಂಬಿದವು. ವಿವಿಧ ಮಹಾಪುರುಷರ ವೇಷ ಧರಿಸಿದ್ದ ಶಾಲಾ ಮಕ್ಕಳು ಮೆರವಣಿಗೆಯ ವಿಶೇಷ ಆಕರ್ಷಣೆಯಾಗಿದ್ದರು.ಮೆರವಣಿಗೆಯ ಪೂರ್ವದಲ್ಲಿ ಮಹಾಸ್ವಾಮಿಗಳು ಗ್ರಾಮದ ಗಂಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಸಂಕಲ್ಪ ನೆರವೇರಿಸಿ, ಭಕ್ತರನ್ನು ಆಶೀರ್ವದಿಸಿ ಆಶೀರ್ವಚನ ನೀಡಿದರು. ಕಾರ್ಯಕ್ರಮದ ಅಂಗವಾಗಿ ಭಕ್ತಾದಿಗಳಿಗೆ ಗ್ರಾಮಸ್ಥರಿಂದ ಅನ್ನದಾಸೋಹ ಏರ್ಪಡಿಸಲಾಗಿತ್ತು. ತಾಲೂಕಿನ ಮುಖಂಡರು, ಗ್ರಾಮದ ಮುಖಂಡರು ಹಾಗೂ ನೂರಾರು ಸಂಖ್ಯೆಯಲ್ಲಿ ಭಕ್ತರು ಈ ಸಂಭ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.