ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ಮೇಲೆ ಸರ್ಕಾರ ಹಾಕಿರುವ ಎಫ್ ಐಆರ್ ಅನ್ನು ಕೂಡಲೇ ರದ್ದು ಮಾಡಬೇಕು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ
ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರ ಮೇಲೆ ಸರ್ಕಾರ ಹಾಕಿರುವ ಎಫ್ ಐಆರ್ ಅನ್ನು ಕೂಡಲೇ ರದ್ದು ಮಾಡಬೇಕು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ರೈತರ ಮೇಲೆ ಪ್ರಕರಣ ದಾಖಲಿಸಿರುವ ಸರ್ಕಾರದ ಕ್ರಮವನ್ನು ಖಂಡಿಸಿರುವ ಅವರು, ಬಿಡದಿ ಟೌನ್‌ಶಿಪ್ ನೆಪದಲ್ಲಿ ಅಮಾಯಕ ರೈತರ ಮೇಲೆ ಎಫ್ ಐಆರ್ ದಾಖಲಿಸಿರುವ ಕಾಂಗ್ರೆಸ್ ಸರ್ಕಾರದ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ. ಯಾವುದೇ ಮಾಹಿತಿ ಇಲ್ಲದೆ ರೈತರ ಭೂಮಿಗೆ ನುಗ್ಗಿ ಜಂಟಿ ಮಾಪನ (ಜೆಎಂಸಿ) ಮಾಡಲು ಮುಂದಾಗಿದ್ದರು. ಅದನ್ನು ಪ್ರಶ್ನಿಸಿದ ರೈತರ ಹೋರಾಟವನ್ನು ಹತ್ತಿಕ್ಕಲು ಈ ಜನವಿರೋಧಿ ಸರ್ಕಾರ ಎಫ್ ಐಆರ್ ಅಸ್ತ್ರ ಬಳಸಿ ಬೆದರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.ಕಾಂಗ್ರೆಸ್ ಸರ್ಕಾರದ ಈ ದಬ್ಬಾಳಿಕೆಗೆ ನಮ್ಮ ರೈತ ಬಂಧುಗಳು ಹೆದರುವ ಅಗತ್ಯವಿಲ್ಲ. ನಿಮ್ಮ ನ್ಯಾಯಯುತ ಹೋರಾಟಕ್ಕೆ ಅಗತ್ಯವಿರುವ ಸಂಪೂರ್ಣ ಕಾನೂನು ನೆರವು ಹಾಗೂ ಬೆಂಬಲ ನೀಡಲು ನಾವೆಲ್ಲರೂ ನಿಮ್ಮೊಂದಿಗೆ ಸದಾ ಸಿದ್ಧರಿದ್ದೇವೆ. ಇನ್ನು 48 ಗಂಟೆಗಳ ಒಳಗೆ ರೈತರ ಮೇಲಿನ ಸುಳ್ಳು ಎಫ್ ಐಆರ್ ರದ್ದುಗೊಳಿಸಿ, ವಶಕ್ಕೆ ಪಡೆದಿರುವ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಈ ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟ ಹಮ್ಮಿಕೊಳ್ಳುವುದು ನಿಶ್ಚಿತ ಎಂದು ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.
14ಕೆಆರ್ ಎಂಎನ್ 3.ಜೆಪಿಜಿನಿಖಿಲ್ ಕುಮಾರಸ್ವಾಮಿ