ನಿಖಿಲ್‌ ನಿಮ್ಮ ಮನೆ ಮಗ: ಎಚ್ಡಿಕೆ

| Published : Nov 04 2024, 12:24 AM IST / Updated: Nov 04 2024, 12:25 AM IST

ಸಾರಾಂಶ

ಚನ್ನಪಟ್ಟಣ: ಈ‌ ಭಾಗದ ಕಾಡಾನೆ ಹಾವಳಿಗೆ ಕೇಂದ್ರ ರೈಲ್ವೆ ಸಚಿವರ ಜತೆ ಮಾತನಾಡಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ ಕ್ರಮ ವಹಿಸುತ್ತೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ ನೀಡಿದರು.

ಚನ್ನಪಟ್ಟಣ: ಈ‌ ಭಾಗದ ಕಾಡಾನೆ ಹಾವಳಿಗೆ ಕೇಂದ್ರ ರೈಲ್ವೆ ಸಚಿವರ ಜತೆ ಮಾತನಾಡಿ ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ ಕ್ರಮ ವಹಿಸುತ್ತೇವೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ ನೀಡಿದರು.

ವಿರೂಪಸಂದ್ರ ಗ್ರಾಮದಲ್ಲಿ ನಿಖಿಲ್‌ ಪರ ಪ್ರಚಾರ ಮಾಡಿದ ಅವರು, ರಾಜ್ಯದ ಯಾವುದೇ ಭಾಗದಲ್ಲಿ ಅಭಿವೃದ್ಧಿ ಆಗುತ್ತಿಲ್ಲ. ನಮ್ಮ ತೆರಿಗೆ ಹಣ ಲೂಟಿ ಆಗುತ್ತಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹಾಗಾಗಿ ಈ ಬಾರಿ ನಿಖಿಲ್ ಗೆಲ್ಲಿಸಿಕೊಡಿ. ನನಗೆ 6ರಿಂದ 7 ತಿಂಗಳು ಸಮಯ ಕೊಡಿ ಎಂದರು.

ಹುಬ್ಬಳ್ಳಿ ಧಾರವಾಡ ಮಾದರಿಯಲ್ಲಿ ಚನ್ನಪಟ್ಟಣ ಹಾಗೂ ರಾಮನಗರ ಪಟ್ಟಣಗಳ ನಡುವೆ ಸುಮಾರು ಹತ್ತು ಸಾವಿರ ಜನರಿಗೆ ನೇರ ಉದ್ಯೋಗ ಸಿಗುವಂತಹ ಕೈಗಾರಿಕೆ ಸ್ಥಾಪನೆಗೆ ಪ್ರಯತ್ನ ಮಾಡಲಾಗುವುದು ಭರವಸೆ ನೀಡಿದರು.

ಚನ್ನಪಟ್ಟಣ ಹಾಗೂ ರಾಮನಗರಗಳ ಅಭಿವೃದ್ಧಿಗೆ ಹೊಸ ಆಯಾಮ ನೀಡಲಾಗುವುದು. ಈವರೆಗೂ ನಾನು ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸಿದ್ದೇನೆ. ತಾಲೂಕಿನ ಜನರ ಔದಾರ್ಯ ಹಾಗೂ ಮಂಡ್ಯ ಜನರ ಆಶೀರ್ವಾದ, ಪ್ರಧಾನಿ ಮೋದಿ ವಿಶ್ವಾಸ ನಂಬಿಕೆಯಿಂದ ಕೇಂದ್ರದಲ್ಲಿ ಮಂತ್ರಿಯಾಗಿದ್ದೇನೆ. ಸಿಕ್ಕಿರುವ ಈ ಅವಕಾಶ ಸದ್ಬಳಕೆ ಮಾಡಿಕೊಂಡು ನನಗೆ ರಾಜಕೀಯ ಜನ್ಮ ಕೊಟ್ಟ ಜಿಲ್ಲೆಗೆ ಒಳ್ಳೆಯದು ಮಾಡುತ್ತೇನೆ ಎಂದರು. ಚನ್ನಪಟ್ಟಣದಲ್ಲಿ 85 ಕೋಟಿ ವೆಚ್ಚದಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಾಣ ಆಗುತ್ತಿದೆ. ಮಾವಿನ ಸಂರಕ್ಷಣೆಗೆ ನೂತನ ಘಟಕ ನಿರ್ಮಾಣ ಮಾಡಲಾಗುತ್ತಿದೆ. ರಸ್ತೆಗಳು, ಶಾಲೆಗಳನ್ನು ನಿರ್ಮಾಣ ಮಾಡಿದ್ದೇವೆ. ಈಗ ಅನಿವಾರ್ಯವಾಗಿ ನಿಖಿಲ್ ಸ್ಪರ್ಧೆ ಮಾಡಿದ್ದಾರೆ. ನಿಮ್ಮ ಮನೆ ಮಗ ಅಂತ ತಿಳಿದು ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

3ಕೆಆರ್ ಎಂಎನ್ 4.ಜೆಪಿಜಿ

ಚನ್ನಪಟ್ಟಣ ಕ್ಷೇತ್ರದ ವಿರೂಪಸಂದ್ರ ಗ್ರಾಮದಲ್ಲಿ ನಿಖಿಲ್‌ ಪರ ಪ್ರಚಾರ ಭಾಷಣಕ್ಕೆ ಆಗಮಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರನ್ನು ಮಹಿಳೆಯೊಬ್ಬರು ಆರತಿ ಬೆಳಗಿ ಬರಮಾಡಿಕೊಂಡರು.