ನಾಳೆ ನಿಖಿಲ್ ಕುಮಾರಸ್ವಾಮಿ ಕ್ಷೇತ್ರ ಪ್ರವಾಸ

| Published : Aug 22 2024, 12:54 AM IST

ಸಾರಾಂಶ

ಮುಂಬರುವ ಉಪಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆ.23ರಂದು ತಾಲೂಕಿನ ಹೊಂಗನೂರು ಜಿಪಂ ಹಾಗೂ ವಂದಾರಗುಪ್ಪೆ ಗ್ರಾಪಂ ವ್ಯಾಪ್ತಿಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಚನ್ನಪಟ್ಟಣ: ಮುಂಬರುವ ಉಪಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸುವ ನಿಟ್ಟಿನಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆ.23ರಂದು ತಾಲೂಕಿನ ಹೊಂಗನೂರು ಜಿಪಂ ಹಾಗೂ ವಂದಾರಗುಪ್ಪೆ ಗ್ರಾಪಂ ವ್ಯಾಪ್ತಿಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಬೆಳಗ್ಗೆ ಇತಿಹಾಸ ಪ್ರಸಿದ್ಧ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಪ್ರವಾಸ ಆರಂಭಿಸಲಿರುವ ಅವರು, ತಾಲೂಕಿನ ಸರಗೂರುದೊಡ್ಡಿ, ಕೆಂಗಲ್ (ಹನುಮಂತಪುರ ), ಪೌಳಿದೋಡ್ಡಿ, ವಂದಾರಗುಪ್ಪೆ , ಕರಿಕಲ್ ದೋಡ್ಡಿ, ಕೆರೆಮೆಗಲದೊಡ್ಡಿ, ಕೆಂಚಯ್ಯನದೊಡ್ಡಿ, ಮುನಿಯಪ್ಪನದೊಡ್ಡಿ, ಲಾಳಘಟ್ಟ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಎಚ್.ಸಿ.ಜಯಮುತ್ತು ತಿಳಿಸಿದ್ದಾರೆ.