ಫೋಟೋ - 18ಎಂವೈಎಸ್ 11, 12 - ಮೈಸೂರಿಗೆ ಶನಿವಾರ ಆಗಮಿಸಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ಅವರನ್ನು ಪಕ್ಷದ ಕಾರ್ಯಕರ್ತರು ಅದ್ಧೂರಿಯಾಗಿ ಸ್ವಾಗತಿಸಿದರು.---ಕನ್ನಡಪ್ರಭ ವಾರ್ತೆ ಮೈಸೂರುಸಂಸತ್ತಿನಲ್ಲಿ ಮಹಿಳೆಯರಿಗೆ ಶೇ. 33 ಮೀಸಲಾತಿ ಕಲ್ಪಿಸುವ ನಾರಿಶಕ್ತಿ ವಂದನಾ ಮಸೂದೆಯನ್ನು ಲೋಕಸಭೆಯಲ್ಲಿ ಸೋಲಿಸಿರುವ ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟ ಮಹಿಳಾ ಸಬಲೀಕರಣ ವಿರೋಧಿಯಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿ ಶನಿವಾರ ಸುದ್ದಿಗಾರರೊಡನೆ ಮಾತನಾಡಿದ ಅವರು, ಕ್ಷೇತ್ರ ಪುನರ್ ವಿಂಗಡಣೆ ವಿಚಾರ ಮುಂದಿಟ್ಟು ನಾರಿ ಶಕ್ತಿ ಬಿಲ್ ವಿರೋಧಿಸಿದ್ದಾರೆ. ಕಾಂಗ್ರೆಸ್ ಮಹಿಳಾ ಸಬಲೀಕರಣ ವಿರೋಧಿಯಾಗಿದೆ. ಇದು ಕಾಂಗ್ರೆಸ್ ಮನಸ್ಥಿತಿ ತೋರಿಸುತ್ತದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಸಂಸತ್ತಿನಲ್ಲಿ ನಡೆದ ಚರ್ಚೆಯನ್ನ ಸಂಪೂರ್ಣವಾಗಿ ನಾನು ನೋಡಿದ್ದೇನೆ. 1996ರಲ್ಲಿ ಪ್ರಧಾನಿಯಾಗಿದ್ದ ವೇಳೆ ದೇವೇಗೌಡರು ಮಹತ್ವಾಕಾಂಕ್ಷೆಯಿಂದ ಮಹಿಳೆಯರಿಗೆ ಶೇ.33 ಮೀಸಲಾತಿ ಕಲ್ಪಿಸುವ ಐತಿಹಾಸಿಕ ಮಸೂದೆಯನ್ನು ಮಂಡಿಸಿದ್ದಾಗಿ ಹೇಳಿದರು.2026ರ ಜನಗಣತಿ ಪ್ರಕಾರ ಬಿಲ್ ಪಾಸ್ ಆದರೆ 28 ಲೋಕಸಭೆಗಳ ಪೈಕಿ ಒಂದು ಸ್ಥಾನ ಕಳೆದುಕೊಳ್ಳಕಾಗುತ್ತದೆ. ಈಗಿನ ನಾರಿ ಶಕ್ತಿ ಬಿಲ್ ಪ್ರಕಾರ 28ರ ಪೈಕಿ 40ಕ್ಕೆ ಏರಿಕೆಯಾಗುತ್ತದೆ. ದಕ್ಷಿಣ ಭಾರತದ ಮೇಲೆ ಹಿಡಿತ ಸಾಧಿಸುತ್ತಾರೆ ಅಂತ ಹೇಳುತ್ತಾರೆ. ಇಂತಹ ಯಾವುದೇ ವಿಚಾರಗಳು ಈ ಬಿಲ್ ನಲ್ಲಿ ಇಲ್ಲ ಎಂದು ಒತ್ತಿ ಹೇಳಿದರು.ದೇಶದ ಜನತೆ ವಿಶೇಷವಾಗಿ, ಮಹಿಳೆಯರು ಕಾಂಗ್ರೆಸ್ ಮಿತ್ರಕೂಟದ ಈ ಮಹಿಳಾ ವಿರೋಧಿ ಧೋರಣೆಗೆ ತಕ್ಕ ಪಾಠ ಕಲಿಸುತ್ತಾರೆ ಎಂದರು. ನಿಖಿಲ್ ಗೆ ಅದ್ದೂರಿ ಸ್ವಾಗತಜನರೊಂದಿಗೆ ಜನತಾದಳ ಕಾರ್ಯಕ್ರಮಕ್ಕೆ ಆಗಮಿಸಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಕ್ರೇನ್ ಮೂಲಕ ಬೃಹತ್ ಗಾತ್ರದ ಹೂವಿನ ಹಾರ ಹಾಕಿ ಸ್ವಾಗತಿಸಲಾಯಿತು.ತೆರೆದ ವಾಹನದಲ್ಲಿ ಆಗಮಿಸಿದ ನಿಖಿಲ್ ಕುಮಾರಸ್ವಾಮಿಗೆ ದಾರಿಯುದ್ದಕ್ಕೂ ಸಾರ್ವಜನಿಕರು ಪಟಾಕಿ ಸಿಡಿಸಿ ಹೂವಿನ ಹಾರ ಹಾಕುವ ಮೂಲಕ ಅದ್ದೂರಿಯಾಗಿ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಶಾಸಕ ಜಿ.ಡಿ. ಹರೀಶ್ ಗೌಡ, ಮಾಜಿ ಶಾಸಕ ಕೆ. ಮಹದೇವ್, ಜೆಡಿಎಸ್ ಜಿಲ್ಲಾಧ್ಯಕ್ಷ ಅಶ್ವಿನ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಕೆ. ವಿವೇಕಾನಂದ, ಜೆಡಿಎಸ್ ನಗರಾಧ್ಯಕ್ಷ ಎಸ್.ಬಿ.ಎಂ ಮಂಜು, ಮನ್ಮುಲ್ ಮಾಜಿ ಅಧ್ಯಕ್ಷ ಪಿ.ಎಂ. ಪ್ರಸನ್ನ, ಮಾಜಿ ಮೇಯರ್‌ಗಳಾದ ಎಂ.ಜೆ. ರವಿಕುಮಾರ್, ಆರ್. ಲಿಂಗಪ್ಪ, ನಗರ ಪಾಲಿಕೆ ಮಾಜಿ ಸದಸ್ಯರಾದ ಕೆ.ವಿ. ಶ್ರೀಧರ್, ಪ್ರೇಮಾ ಶಂಕರೇಗೌಡ, ಮಾದೇಶ್ ಮೊದಲಾದವರು ಇದ್ದರು.
ಕಾಂಗ್ರೆಸ್ ನೇತೃತ್ವದ ಇಂಡಿ ಒಕ್ಕೂಟ ಮಹಿಳಾ ಸಬಲೀಕರಣ ವಿರೋಧಿ
-ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.