ಸಾರಾಂಶ
ತಿಪಟೂರು ಈಗಾಗಲೇ ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಮುಗಿದು ಫಲಿತಾಂಶಕ್ಕಾಗಿ ಕ್ಷಣಗಣನೆ ಆರಂಭವಾಗಿದ್ದು ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ನಾಯಕರು ಸೋಲು ಗೆಲುವಿನ ಲೆಕ್ಕಾಚಾರದಲ್ಲಿದ್ದು, ಬಹು ಕುತೂಹಲ ಕೆರಳಿಸಿರುವ ಚನ್ನಪಟ್ಟಣದ ಕ್ಷೇತ್ರ ಫಲಿತಾಂಶಕ್ಕಾಗಿ ಜನರು ಕಾತರದಿಂದ ಕಾಯುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ತಿಪಟೂರು
ಈಗಾಗಲೇ ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಮುಗಿದು ಫಲಿತಾಂಶಕ್ಕಾಗಿ ಕ್ಷಣಗಣನೆ ಆರಂಭವಾಗಿದ್ದು ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ನಾಯಕರು ಸೋಲು ಗೆಲುವಿನ ಲೆಕ್ಕಾಚಾರದಲ್ಲಿದ್ದು, ಬಹು ಕುತೂಹಲ ಕೆರಳಿಸಿರುವ ಚನ್ನಪಟ್ಟಣದ ಕ್ಷೇತ್ರ ಫಲಿತಾಂಶಕ್ಕಾಗಿ ಜನರು ಕಾತರದಿಂದ ಕಾಯುತ್ತಿದ್ದಾರೆ. ತಿಪಟೂರಿನ ಜೆಡಿಎಸ್ ಕಾರ್ಯಕರ್ತರು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವಿಗಾಗಿ ಭದ್ರಕಾಳಿ ಅಮ್ಮನ ಮೊರೆ ಹೋಗಿದ್ದಾರೆ. ತಾಲೂಕಿನ ಬೆನ್ನಾಯಕನಹಳ್ಳಿ ಗೇಟ್ ಬಳಿ ಇರುವ ಶಕ್ತಿ ದೇವತೆ ಶ್ರೀ ವೀರಭದ್ರೇಶ್ವರ ಹಾಗೂ ಭದ್ರಕಾಳಿ ಅಮ್ಮನವರ ಬಳಿ ರಂಗೋಲಿ ಬರವಣಿಗೆ ಶಾಸ್ತ್ರ ಮತ್ತು ಕಾಳಿ ರುದ್ರಪೀಠದ ಶ್ರೀ ರೇಣುಕಾ ಗುರೂಜಿ ಬಳಿ ಜೆಡಿಎಸ್ ಕಾರ್ಯಕರ್ತರು ಪ್ರಾಚೀನ ತಾಳೆಗರಿ ಶಾಸ್ತ್ರ, ರಂಗೋಲಿ ಭರವಣಿಗೆಯ ಮೂಲಕ ಹೇಳುವ ದೇವಿಯಿಂದ ಶಾಸ್ತ್ರ ಕೇಳಿದ್ದಾರೆ. ತಾಳೆ ಗರಿ ಶಾಸ್ತ್ರದ ಪ್ರಕಾರ ನಿಖಿಲ್ ಕುಮಾರಸ್ವಾಮಿ ಗೆಲವು ಶತಸಿದ್ದ ಎಂಬುದಾಗಿ ದೇವಿ ಅಭಯ ನೀಡಿದ್ದಾಳೆ. ನಿಖಿಲ್ ಕುಮಾರಸ್ವಾಮಿಗೆ ರಾಜಯೋಗ ಪ್ರಾಪ್ತಿಯಾಗಲಿದ್ದು, ಮುಂದಿನ ರಾಜಕೀಯ ಭವಿಷ್ಯ ಉತ್ತಮವಾಗಿರಲಿದೆ ಎಂದು ದೇವಿ ಹಾಗೂ ಶ್ರೀ ರೇಣುಕಾ ಗುರೂಜಿ ಭವಿಷ್ಯ ನುಡಿದಿದ್ದಾರೆ.