ಸಾರಾಂಶ
Nikhil Kumaraswamy to Yadgir today
- ಜೆಡಿಎಸ್ ಸದಸ್ಯತ್ವಕ್ಕೆ ಚಾಲನೆಜನರೊಂದಿಗೆ ಜನತಾದಳ ಮತ್ತು ಸದಸ್ಯತ್ವದ ನೊಂದಣಿ ಕಾರ್ಯಕ್ರಮದಂಗವಾಗಿ ಶನಿವಾರ ನಗರಕ್ಕೆ ಆಗಮಿಸಲಿರುವ ಜೆಡಿಎಸ್ ಯುವ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ಸ್ವಾಗತಕ್ಕೆ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸುಭಾಷಚಂದ್ರ ಕಟಕಟಿ ನೇತೃತ್ವದಲ್ಲಿ ಸಕಲ ಸಿದ್ಧತೆಗಳು ಮಾಡಿಕೊಂಡಿದ್ದು, ನಗರದೆಲ್ಲಡೆ ಸ್ವಾಗತ ಕೋರುವ ಬ್ಯಾನರ್ ಗಳು ರಾರಾಜಿಸುತ್ತಿವೆ. ಬೆಳಗ್ಗೆ 10 ಕ್ಕೆ ಯರಗೋಳ ರಸ್ತೆಯ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಆಯೋಜನೆಗೊಂಡಿರುವ ಕಾರ್ಯಕ್ರಮಕ್ಕೆ ನಿಖಿಲ್ ಕುಮಾರಸ್ವಾಮಿ ಚಾಲನೆ ನೀಡಲಿದ್ದು, ಶಾಸಕ ಶರಣಗೌಡ ಕಂದಕೂರ, ಮಾಜಿ ಮಂತ್ರಿ ಡಾ.ಎ.ಬಿ.ಮಲಕರಡ್ಡಿ, ಮಾಜಿ ಶಾಸಕ ಗುರು ಪಾಟೀಲ್ ಸೇರಿದಂತೆಯೇ ಪಕ್ಷದ ನಾಯಕರು, ಪ್ರಮುಖಕರು ಭಾಗವಹಿಸಲಿದ್ದಾರೆ. ಜಿಲ್ಲೆಯ ಗುರುಮಠಕಲ್ ತಾಲೂಕು ಸೇರಿದಂತೆಯೇ ವಿವಿಧಡೆಯಿಂದ ಸಾವಿರಾರು ಕಾರ್ಯಕರ್ತರು ಭಾಗವಹಿಸಲಿದ್ದಾರೆ.
-ನಿಖಿಲ್ ಕುಮಾರಸ್ವಾಮಿ ಅವರ ಫೋಟೋ ಬಳಸಿ ಪ್ಲೀಸ್