ಸಾರಾಂಶ
ನಿಖಿಲ್ ಕುಮಾರಸ್ವಾಮಿ ಪಕ್ಷದ ಯುವ ನಾಯಕರಾಗಿದ್ದು, ರಾಜಕೀಯವಾಗಿ ಬೆಳವಣಿಗೆ ಸಾಧಿಸುವುದರೊಂದಿಗೆ ಹೆಚ್ಚಿನ ಅಧಿಕಾರಗಳು ದೊರಕಿ ಜನರ ಸೇವೆಗೆ ಅವಕಾಶ ಕಲ್ಪಿಸುವಂತೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇವೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯಾಗುತ್ತಿರುವ ಸುಸಂದರ್ಭದಲ್ಲಿ ಶ್ರೀರಾಮನ ಆಶೀರ್ವಾದ ನಿಖಿಲ್ ಮೇಲಿರಲಿ.
ಕನ್ನಡಪ್ರಭ ವಾರ್ತೆ ಮಂಡ್ಯಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬದ ಪ್ರಯುಕ್ತ ಜೆಡಿಎಸ್ ಮುಖಂಡ ಬಿ.ಆರ್. ರಾಮಚಂದ್ರ ನೇತೃತ್ವದಲ್ಲಿ ಕಾರ್ಯಕರ್ತರು, ಅಭಿಮಾನಿಗಳು ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಅನ್ನ ಸಂತರ್ಪಣೆ ಕಾರ್ಯ ನೆರವೇರಿಸಿದರು.
ಸೋಮವಾರ ಬೆಳಗ್ಗೆ ನಗರದ ಶ್ರೀಕಾಳಿಕಾಂಬ ದೇವಾಲಯದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ನಿಖಿಲ್ ಕುಮಾರಸ್ವಾಮಿ ಪಕ್ಷದ ಯುವ ನಾಯಕರಾಗಿದ್ದು, ರಾಜಕೀಯವಾಗಿ ಬೆಳವಣಿಗೆ ಸಾಧಿಸುವುದರೊಂದಿಗೆ ಹೆಚ್ಚಿನ ಅಧಿಕಾರಗಳು ದೊರಕಿ ಜನರ ಸೇವೆಗೆ ಅವಕಾಶ ಕಲ್ಪಿಸುವಂತೆ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇವೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಉದ್ಘಾಟನೆಯಾಗುತ್ತಿರುವ ಸುಸಂದರ್ಭದಲ್ಲಿ ಶ್ರೀರಾಮನ ಆಶೀರ್ವಾದ ನಿಖಿಲ್ ಮೇಲಿರಲಿ ಎಂದು ಕೋರಿರುವುದಾಗಿ ಹೇಳಿದರು.ನಗರಸಭೆ ಮಾಜಿ ಅಧ್ಯಕ್ಷ ಎಚ್.ಎಸ್.ಮಂಜು ಮಾತನಾಡಿ, ನಿಖಿಲ್ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದೆವು. ಆದರೆ, ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ದೇವೇಗೌಡರ ಕುಟುಂಬ ತೆರಳಿರುವುದರಿಂದ ಸಾಂಕೇತಿಕವಾಗಿ ಆಚರಿಸುತ್ತಿದ್ದೇವೆ. ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳ ಸಂಬಂಧಿಕರಿಗೆ ಅನ್ನಸಂತರ್ಪಣೆ ಹಾಗೂ ಕಾರ್ಯಕರ್ತರು ಅನೇಕ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಕಾರ್ಯದರ್ಶಿ ವಸಂತಕುಮಾರ್, ನಗರಸಭೆ ಸದಸ್ಯರಾದ ನಾಗೇಶ್, ರಜನಿ, ಸೌಭಾಗ್ಯ, ಜೆಡಿಎಸ್ ಮುಖಂಡ ಬಿ.ಆರ್.ಸುರೇಶ್ ಸೇರಿದಂತೆ ಇತರರಿದ್ದರು.;Resize=(128,128))
;Resize=(128,128))
;Resize=(128,128))