ಸಾರಾಂಶ
ನಗರದ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿಯಿರುವ 10ರಿಂದ 12 ಎಕರೆ ಪ್ರದೇಶದ ನೀಲಗಿರಿ ತೋಪಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಬೇರೆಡೆ ಹರಡದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಧಾರವಾಡ
ನೀಲಗಿರಿ ತೋಪಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮರಗಳು ಧಗಧಗ ಹೊತ್ತಿ ಉರಿದ ಘಟನೆ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿಯ ಎಸ್ಪಿ ನಿವಾಸದ ಎದುರು ನಡೆದಿದೆ.ರಣ ರಣ ಬಿಸಿಲಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡು ಹೊತ್ತಿ ಉರಿದಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕಾಡ್ಗಿಚ್ಚಿನಂತೆ ಎಲ್ಲೆಡೆ ಹರಡಿ ಸುತ್ತಲಿನ ಜನರಲ್ಲಿ ಆತಂಕ ಸೃಷ್ಟಿಸಿತ್ತು. ಸ್ಥಳೀಯರು ಎಚ್ಚೆತ್ತುಕೊಂಡು ಅಗ್ನಿಶಾಮಕ ದಳಕ್ಕೆ ಕರೆಮಾಡಿ ಮಾಹಿತಿ ನೀಡಿದರು. ಸ್ಥಳಕ್ಕೆ ದೌಡಾಯಿಸಿದ ಧಾರವಾಡ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸಿದರು.
ನಗರದ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿಯಿರುವ 10ರಿಂದ 12 ಎಕರೆ ಪ್ರದೇಶದ ನೀಲಗಿರಿ ತೋಪಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಬೇರೆಡೆ ಹರಡದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸರಿ ಸುಮಾರು ಎರಡು ಎಕರೆ ಪ್ರದೇಶದ ನೀಲಗಿರಿ ತೋಪು ಬೆಂಕಿ ಹೊತ್ತಿಕೊಂಡಿತ್ತು. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ನೀಲಗಿರಿ ಮರಗಳಿಗೂ ಹಾನಿಯಾಗಿಲ್ಲ, ಬರಿ ಕಸವಷ್ಟೇ ಸುಟ್ಟು ಹೋಗಿದೆ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಅಗ್ನಿಶಾಮಕ ದಳ ಅಧಿಕಾರಿಗಳು ತಿಳಿಸಿದ್ದಾರೆ.
;Resize=(128,128))
;Resize=(128,128))
;Resize=(128,128))
;Resize=(128,128))