ವದ್ದೀಕೆರೆ ಸಿದ್ದೇಶ್ವರಸ್ವಾಮಿ ಹುಂಡಿಯಲ್ಲಿ ₹96 ಲಕ್ಷ ಸಂಗ್ರಹ

| Published : Sep 14 2024, 01:55 AM IST

ಸಾರಾಂಶ

ತಾಲೂಕಿನ ಇತಿಹಾಸ ಪ್ರಸಿದ್ದ ವದ್ದೀಕೆರೆ ಶ್ರೀ ಕಾಲಭೈರವೇಶ್ವರ ಯಾನೆ ಸಿದ್ದೇಶ್ವರಸ್ವಾಮಿಯ ಹುಂಡಿ ಹಣ ಎಣಿಕೆ ಮಾಡಲಾಗಿದ್ದು, ₹96,32,630 ಸಂಗ್ರಹವಾಗಿದೆ. ಕಳೆದ ಬಾರಿಗಿಂತ ಈ ಬಾರಿ ಹುಂಡಿ ಹಣ ಸಂಗ್ರಹಣೆ ಕಡಿಮೆಯಾಗಿದ್ದು, ಕಳೆದ ಬಾರಿ ಸಿದ್ದೇಶ್ವರ ಸ್ವಾಮಿಯ ಕಾಣಿಕೆ ಕೋಟಿ ದಾಟಿತ್ತು.

ಕನ್ನಡಪ್ರಭ ವಾರ್ತೆ ಹಿರಿಯೂರು

ತಾಲೂಕಿನ ಇತಿಹಾಸ ಪ್ರಸಿದ್ದ ವದ್ದೀಕೆರೆ ಶ್ರೀ ಕಾಲಭೈರವೇಶ್ವರ ಯಾನೆ ಸಿದ್ದೇಶ್ವರಸ್ವಾಮಿಯ ಹುಂಡಿ ಹಣ ಎಣಿಕೆ ಮಾಡಲಾಗಿದ್ದು, ₹96,32,630 ಸಂಗ್ರಹವಾಗಿದೆ. ಕಳೆದ ಬಾರಿಗಿಂತ ಈ ಬಾರಿ ಹುಂಡಿ ಹಣ ಸಂಗ್ರಹಣೆ ಕಡಿಮೆಯಾಗಿದ್ದು, ಕಳೆದ ಬಾರಿ ಸಿದ್ದೇಶ್ವರ ಸ್ವಾಮಿಯ ಕಾಣಿಕೆ ಕೋಟಿ ದಾಟಿತ್ತು.

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅಧಿಸೂಚಿತ "ಎ " ಪ್ರವರ್ಗದ ತಾಲೂಕಿನ ಐಮಂಗಲ ಹೋಬಳಿಯ ವದ್ದೀಕೆರೆ ಗ್ರಾಮದ ಶ್ರೀ ಸಿದ್ದೇಶ್ವರಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿಗಳು, ಉಪವಿಭಾಗಾಧಿಕಾರಿ ಎಂ. ಕಾರ್ತಿಕ್, ತಹಸೀಲ್ದಾರ್ ರಾಜೇಶ್ ಕುಮಾರ್ ರವರ ಸಮ್ಮುಖದಲ್ಲಿ ದೇವಸ್ಥಾನದಲ್ಲಿನ ಕಾಣಿಕೆ ಹುಂಡಿಗಳ ಹಣವನ್ನು ಎಣಿಕೆ ಮಾಡಲಾಯಿತು.

ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ದೇವಸ್ಥಾನದ ಹೆಸರಿನಲ್ಲಿ ಐಮಂಗಲದ ಕೆನರಾ ಬ್ಯಾoಕ್, ಯರಬಳ್ಳಿಯ ಪ್ರಗತಿ ಕೃಷ್ಣ ಬ್ಯಾoಕ್ ನಲ್ಲಿ ತೆರೆದಿರುವ ಉಳಿತಾಯ ಖಾತೆಗಳಲ್ಲಿ ಇಡಲಾಗಿದೆ.

ಕಳೆದ 2023 ಸೆಪ್ಟೆಂಬರ್ 27 ರಂದು ನಡೆದ ಎಣಿಕೆಯಲ್ಲಿ ಪ್ರಥಮ ಬಾರಿಗೆ ದಾಖಲೆ ಮೊತ್ತದ ₹1,24,67,800 ಹಣ ಕಾಣಿಕೆ ಹುಂಡಿಯಲ್ಲಿ ಸಂಗ್ರಹವಾಗಿತ್ತು. ಅಂದಿನ ಎಣಿಕೆಯ ಹುಂಡಿಯಲ್ಲಿ ವಿದೇಶಿ ಕರೆನ್ಸಿಗಳು ಸೇರಿದಂತೆ, ಭಕ್ತರು ಹರಕೆ ರೂಪದಲ್ಲಿ ಸಲ್ಲಿಸಿದ ಬಂಗಾರ ಮತ್ತು ಬೆಳ್ಳಿ ಆಭರಣಗಳು ಸಹ ಕಾಣಿಕೆ ರೂಪದಲ್ಲಿ ಸ್ವಾಮಿಗೆ ಅರ್ಪಿತವಾಗಿದ್ದವು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಅಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳಾದ ಎಂ. ಕಾರ್ತಿಕ್‌, ತಹಸೀಲ್ದಾರ್ ರಾಜೇಶ್ ಕುಮಾರ್, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು, ತಾಲೂಕಿನ ಕಂದಾಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಮತ್ತು ವದ್ದೀಕೆರೆ ಗ್ರಾಮಸ್ಥರು ಉಪಸ್ಥಿತರಿದ್ದರು.