ಸಾರಾಂಶ
ಕನ್ನಡಪ್ರಭ ವಾರ್ತೆ ಕುಂದಾಪುರನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರದ ವತಿಯಿಂದ ನೀಡಿದ ಉಚಿತ ಪಠ್ಯ ಪುಸ್ತಕಗಳು ಹಾಗೂ ವೆಂಟನಾ ಫೌಂಡೇಶನ್ ಉಡುಪಿ ವತಿಯಿಂದ ನೀಡಿದ ನೋಟ್ ಪುಸ್ತಕಗಳ ವಿತರಣಾ ಸಮಾರಂಭ ಶಾಲೆಯ ಎಫ್.ಎಕ್ಸ್. ಕರ್ನೇಲಿಯೊ ಸಭಾಭವನದಲ್ಲಿ ನಡೆಯಿತು.ಮುಖ್ಯ ಅತಿಥಿಗಳಾಗಿ ಆಗಮಿಸಿದ ಉದ್ಯಮಿ ರಂಜನ್ ಕಲ್ಕೂರ ಪುಸ್ತಕಗಳ ವಿತರಣೆ ನೆರವೇರಿಸಿ ಮಾತನಾಡಿ, ಬಾಲ್ಯದಲ್ಲಿ ಉತ್ತಮ ಶಿಕ್ಷಣ ಪಡೆದಾಗ ಮುಂದೆ ಉನ್ನತ ಸ್ಥಾನ ಪಡೆಯಲು ಅಡಿಪಾಯವಾಗುತ್ತದೆ ಎಂದರು.ಕಾರ್ಯಕ್ರಮದಲ್ಲಿ ಶಾಲೆಯ ಹಳೆ ವಿದ್ಯಾರ್ಥಿ ಕವಿತಾ ಶ್ರೀನಿವಾಸ್, ಎಸ್‌ಡಿಎಂಸಿ ಅಧ್ಯಕ್ಷೆ ಕವಿತಾ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷ ರಮೇಶ್ ಬಾರಿತ್ತಾಯ ಉಪಸ್ಥಿತರಿದ್ದರು.ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಹಳೆ ವಿದ್ಯಾರ್ಥಿಗಳು, ಶಾಲಾ ಅಧ್ಯಾಪಕ ವೃಂದ, ವಿದ್ಯಾರ್ಥಿಗಳ ಹೆತ್ತವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಶಾಲಾ ಮುಖ್ಯೋಪಾಧ್ಯಾಯ ಸಂತೋಷ್ ಕರ್ನೇಲಿಯೊ ಸ್ವಾಗತಿಸಿದರು. ಹಿರಿಯ ಶಿಕ್ಷಕ ರಾಮಪ್ಪ ಎಸ್. ದೊಡಮನಿ ವಂದಿಸಿದರು.ಹಳೆ ವಿದ್ಯಾರ್ಥಿ ಸಂಘದ ನಿಕಟಪೂರ್ವ ಅಧ್ಯಕ್ಷ ಅಮ್ಮುಂಜೆ ಸದಾನಂದ ನಾಯಕ್ ಕಾರ್ಯಕ್ರಮ ನಿರೂಪಿಸಿದರು.